
ನವದೆಹಲಿ(ಸೆ.20): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ, ತಾನು ಬಿಜೆಪಿಯಲ್ಲಿ ಭ್ರಮನಿರಸನಗೊಂಡಿದ್ದಾಗಿ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರಿಯೋ ಹೇಳಿದ್ದಾರೆ.
ತಮ್ಮ ರಾಜಕೀಯ ಜೀವನವನ್ನು ಕ್ರೀಡೆಗೆ ಹೋಲಿಸಿಕೊಂಡ ಸುಪ್ರಿಯೋ ಅವರು, ‘ನಾವು ತಂಡದ ಆಟಗಾರನಾಗಿ ಮೈದಾನಕ್ಕಿಳಿದು ಆಟವಾಡಲು ಇಚ್ಛಿಸುತ್ತೇನೆ. ಆದರೆ ಹೆಚ್ಚುವರಿ ಆಟಗಾರನಾಗಿ ಬೆಂಚ್‌ನಲ್ಲಿ ಕುಳಿತುಕೊಳ್ಳಲು ಇಚ್ಛಿಸಲ್ಲ. ಅಲ್ಲದೆ ಟಿಎಂಸಿಯ 11 ಮಂದಿ ಆಟಗಾರರ ತಂಡದಲ್ಲಿ ಮಮತಾ ದೀದಿ ಅವರು ನನ್ನನ್ನು ಗುರುತಿಸಿದ್ದಾರೆ’ ಎಂದು ಹೇಳಿದರು.
ಇನ್ನು ಬಿಜೆಪಿ ನಾಯಕರ ಸಾಮೂಹಿಕ ರಾಜೀನಾಮೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅಸನ್ಸೋಲ್ ಸಂಸದ ಸುಪ್ರಿಯೋ, ‘ಇದಕ್ಕೆ ಕಾರಣವೇನು ಎಂಬ ಬಗ್ಗೆ ಬಿಜೆಪಿ ನಾಯಕತ್ವ ಪರಿಶೀಲಿಸಬೇಕು. ಜೊತೆಗೆ ಈ ಕುರಿತಾದ ಪ್ರಶ್ನೆಗೆ ಉತ್ತರಿಸಲು ನಾನು ಬಿಜೆಪಿ ಸದಸ್ಯನಲ್ಲ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ