
ಕೇರಳ (ಆ.10): ರಾಹುಲ್ ಗಾಂಧಿ ಅವರ ಛಾತ್ರೋಂ ಕಿ ಗೂಂಜ್ ಕಾರ್ಯಕ್ರಮವು ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಗಿಂತ ಮಂಕಾಗಿತ್ತು ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿಕೆಗೆ ಪಕ್ಷದಲ್ಲಿ ಭಾರಿ ಅಸಮಾಧಾನ ವ್ಯಕ್ತವಾಗಿದೆ.
ಪಕ್ಷದ ನಾಯಕರು ಬಿಜೆಪಿಗೆ ಸಂತೋಷ ತರುವಂತಹ ಯಾವುದೇ ಹೇಳಿಕೆ ನೀಡಬಾರದು ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭಾನುವಾರ ತಾಕೀತು ಮಾಡಿದ್ದಾರೆ.
ತರೂರ್ ಹೇಳಿಕೆ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, ‘ನಮ್ಮ ಪಕ್ಷದ ಸದಸ್ಯರು ಯಾವಾಗಲೂ ಪಕ್ಷದ ಶಿಸ್ತು ಅಥವಾ ಚೌಕಟ್ಟಿಗೆ ಸಂಪೂರ್ಣವಾಗಿ ಬದ್ಧರಾಗಿರದಿದ್ದರೂ, ಬಿಜೆಪಿಯನ್ನು ಪ್ರಸನ್ನಗೊಳಿಸುವಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ವಹಿಸಬೇಕು. ರಾಹುಲ್ ಗಾಂಧಿ ಅವರಲ್ಲಿ ದೋಷ ಹುಡುಕಿದರೆ ಅಥವಾ ಅವರ ವಿರುದ್ಧ ನಕಾರಾತ್ಮಕ ಮಾತುಗಳನ್ನಾಡಿದರೆ ಬಿಜೆಪಿಯವರಿಗೆ ಅತ್ಯಂತ ಸಂತೋಷವಾಗುತ್ತದೆ. ಆದ್ದರಿಂದ ತಿಳಿದೋ ಅಥವಾ ತಿಳಿಯದೆಯೋ ಇಂತಹ ಹೇಳಿಕೆ ನೀಡಬಾರದು’ ಎಂದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ