ಉನ್ನತ ಶಿಕ್ಷಣಕ್ಕೆ ಹಣಕಾಸಿನ ಕೊರತೆ ಅನುಭವಿಸುತ್ತಿರುವ ಯುವ ಸಮೂಹಕ್ಕೆ ಕೇಂದ್ರ ಸರ್ಕಾರ ಬಂಪರ್ ಯೋಜನೆ ಜಾರಿಗೊಳಿಸಿದೆ. ಏನಿದು ವಿದ್ಯಾಲಕ್ಷ್ಮಿ ಯೋಜನೆ?
ಸರಸ್ವತಿ ಇರುವಲ್ಲಿ ಲಕ್ಷ್ಮಿ ಇರಲ್ಲ ಎನ್ನುವ ಮಾತಿದೆ. ಅದಕ್ಕೆ ತಕ್ಕಂತೆ ಎಷ್ಟೋ ಮಂದಿ ಟ್ಯಾಲೆಂಟ್ ಇದ್ದರೂ, ಹಣಕಾಸಿನ ತೊಂದರೆಯಿಂದ ಉನ್ನತ ಶಿಕ್ಷಣ ಪಡೆಯಲಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಯಾರ್‍ಯಾರದೋ ಬಳಿ ಸಾಲ ಪಡೆದು ತೊಂದರೆಗೆ ಸಿಲುಕಿಕೊಳ್ಳುತ್ತಾರೆ. ಬ್ಯಾಂಕ್‌ಗಳಲ್ಲಿ ದುಬಾರಿ ಮೊತ್ತದ ಬಡ್ಡಿಗೆ ಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ನೋವು ಅನುಭವಿಸುತ್ತಿದ್ದಾರೆ. ಇದೇ ಕಾರಣಕ್ಕೆ ಬಡ, ಮಧ್ಯಮ ವರ್ಗದವರಿಗೆ ಉನ್ನತ ಶಿಕ್ಷಣ ಎನ್ನುವುದು ಕನಸು ಬಿಡಿ ಎಂದುಕೊಂಡು ದುಃಖಿತರಾಗುವವರು ಅದೆಷ್ಟೋ ಮಂದಿ. ಇಂಥವರ ಪಾಲಿಗೆ ಇದೀಗ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಇಂದು ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಭಾರತದ ಯುವಜನತೆ, ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯುವ ಸಲುವಾಗಿ, ಅವರಿಗೆ ಆರ್ಥಿಕ ಬೆಂಬಲವನ್ನು ಒದಗಿಸುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಇದಾಗಿದೆ. ಯಾವುದಾದರೂ ವಿಶ್ವವಿದ್ಯಾಲಯಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಸೀಟು ದೊರಕಿದ್ದರೆ, ಅಂಥವರು ಹಣಕಾಸಿನ ಸಮಸ್ಯೆಯಿಂದ ಶಿಕ್ಷಣ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯು ಶಿಕ್ಷಣ ಸಾಲಗಳನ್ನು ಸುಲಭಗೊಳಿಸಲಿದೆ. ಭಾರತದಲ್ಲಿ ಅಥವಾ ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಲಾಗುವುದು. ವಾರ್ಷಿಕ ಎಂಟು ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ವಿದ್ಯಾರ್ಥಿಗಳಿಗೆ ಶೇಕಡಾ ಮೂರರಷ್ಟು ಬಡ್ಡಿದರಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲ ನೀಡಲಾಗುವುದು.
undefined
ತೆಳ್ಳಗಾಗಲು ಹರ್ಬಲ್ ಹೆಸರಿನ ಜ್ಯೂಸ್ ಕುಡಿತಿದ್ದೀರಾ? ಕಿಡ್ನಿ-ಲೀವರ್ ದಾನಿಗಳನ್ನು ಈಗ್ಲೇ ಹುಡುಕಿಕೊಳ್ಳಿ! ವೈದ್ಯೆ ಹೇಳಿದ್ದೇನು?
ಈ ಯೋಜನೆಯಡಿಯಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಯಾವುದೇ ವಿದ್ಯಾರ್ಥಿ ಯಾವುದೇ ಮೇಲಾಧಾರ ಅಥವಾ ಜಾಮೀನು ಇಲ್ಲದೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆಯಬಹುದಾಗಿದೆ. ಇದು ಬೋಧನಾ ಶುಲ್ಕ ಮತ್ತು ಇತರ ವೆಚ್ಚಗಳ ಸಂಪೂರ್ಣ ಮೊತ್ತವನ್ನು ಭರಿಸುತ್ತದೆ. ಈ ಕುರಿತು ಇಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ದೇಶದ ಉನ್ನತ 860 ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲವನ್ನು ವಿಸ್ತರಿಸಲಾಗಿದೆ. ಇದರ ಅಡಿಯಲ್ಲಿ ಪ್ರತಿ ವರ್ಷ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದರ ಪ್ರಯೋಜನ ಪಡೆದು ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಇನ್ನುಮುಂದೆ ಉನ್ನತ ಶಿಕ್ಷಣ ಸಿಗುವುದಿಲ್ಲ ಎನ್ನುವ ಕೊರಗು ಯುವ ಸಮುದಾಯವನ್ನು ದೂರ ಮಾಡಲಾಗಿದೆ ಎನ್ನುವುದು ಕೇಂದ್ರದ ಮಾತು.
ಘಟಾನುಘಟಿ ಪೊಲೀಸರೂ ಕೈಚೆಲ್ಲಿ ಕೂತಿದ್ದ ಕೊಲೆ ಪ್ರಕರಣ ಬೇಧಿಸಿದ ನೊಣಗಳು! ವಿಚಿತ್ರ ಸ್ಟೋರಿ ಇಲ್ಲಿದೆ...