ಕಾಶ್ಮೀರ ಲೆ.ಗವರ್ನರ್‌ಗೆ ಪರಮಾಧಿಕಾರ ಕೊಟ್ಟ ಕೇಂದ್ರ ಸರ್ಕಾರ

Published : Jul 14, 2024, 09:51 AM IST
ಕಾಶ್ಮೀರ ಲೆ.ಗವರ್ನರ್‌ಗೆ ಪರಮಾಧಿಕಾರ ಕೊಟ್ಟ ಕೇಂದ್ರ ಸರ್ಕಾರ

ಸಾರಾಂಶ

ಜಮ್ಮು-ಕಾಶ್ಮೀರ ವಿಧಾನಸಭೆಗೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳ ನಡುವೆಯೇ ಕೇಂದ್ರ ಸರ್ಕಾರ ಅಲ್ಲಿನ ಉಪರಾಜ್ಯಪಾಲರಿಗೆ ಹಲವು ಅಧಿಕಾರಗಳನ್ನು ನೀಡಿ ಆದೇಶ ಹೊರಡಿಸಿದೆ.

ಪಿಟಿಐ ನವದೆಹಲಿ:  ಜಮ್ಮು-ಕಾಶ್ಮೀರ ವಿಧಾನಸಭೆಗೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳ ನಡುವೆಯೇ ಕೇಂದ್ರ ಸರ್ಕಾರ ಅಲ್ಲಿನ ಉಪರಾಜ್ಯಪಾಲರಿಗೆ ಹಲವು ಅಧಿಕಾರಗಳನ್ನು ನೀಡಿ ಆದೇಶ ಹೊರಡಿಸಿದೆ.

ಪೊಲೀಸರು, ಅಖಿಲ ಭಾರತ ಸೇವೆಗಳಾದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ವಿಚಾರಣೆಗೆ ಅನುಮತಿ ನೀಡುವ ಅಧಿಕಾರ, ಅಡ್ವೋಕೇಟ್‌ ಜನರಲ್‌ ಹಾಗೂ ಇತರೆ ಕಾನೂನು ಅಧಿಕಾರಿಗಳ ನೇಮಕಾತಿ, ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವ ಹೊಣೆಯನ್ನು ಉಪರಾಜ್ಯಪಾಲರಿಗೆ ನೀಡಲಾಗಿದೆ.

ಈ ಸಂಬಂಧ ಕಾಶ್ಮೀರ ಮರುವಿಂಗಡಣಾ ಕಾಯ್ದೆ-2019ರಡಿಯ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಒಂದು ವೇಳೆ, ಕಾಶ್ಮೀರದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಈ ನಿಯಮಗಳಿಗೆ ಮತ್ತೊಮ್ಮೆ ತಿದ್ದುಪಡಿ ತಾರದೇ ಹೋದಲ್ಲಿ ಮುಖ್ಯಮಂತ್ರಿಗಿಂತ ಉಪರಾಜ್ಯಪಾಲರೇ ಪರಮಾಧಿಕಾರ ಹೊಂದಿರುತ್ತಾರೆ ಎಂಬ ವಿಶ್ಲೇಷಣೆಗಳು ಕೇಳಿ ಬಂದಿವೆ.

ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ: ಪ್ರಧಾನಿ ಮೋದಿ

ಮೋದಿ ಸರ್ಕಾರದಿಂದ ನನ್ನ ಮೊಬೈಲ್‌ ಮೇಲೆ ಸ್ಪೈವೇರ್ ದಾಳಿ: ವೇಣುಗೋಪಾಲ್‌

ನವದೆಹಲಿ: ದುರುದ್ದೇಶಪೂರಿತ ಸ್ಪೈವೇರ್‌ ಬಳಸಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮ್ಮ ಮೊಬೈಲ್‌ ಫೋನ್‌ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಆಪಾದಿಸಿದ್ದಾರೆ. ಈ ಸಂಬಂಧ ಆ್ಯಪಲ್‌ ಸಂಸ್ಥೆ ತಮಗೆ ಕಳುಹಿಸಿರುವ ಸಂದೇಶದ ಸ್ಕ್ರೀನ್‌ಶಾಟ್‌ ಅನ್ನೂ ಲಗತ್ತಿಸಿ ಅವರು ಟ್ವೀಟ್‌ ಮಾಡಿದ್ದಾರೆ. ‘ನಿಮ್ಮ ಮೊಬೈಲ್‌ ಅನ್ನು ಸ್ಪೈವೇರ್‌ ಗುರಿಯಾಗಿಸಿಕೊಂಡಿದೆ. ನಿಮ್ಮ ಆ್ಯಪಲ್‌ ಐಡಿ ಜತೆ ಇರುವ ಐಫೋನ್‌ ಅನ್ನು ಹೊಕ್ಕಲು ಯತ್ನಿಸುತ್ತಿದೆ’ ಎಂದು ಆ್ಯಪಲ್‌ ಕಂಪನಿ ಸಂದೇಶ ಕಳುಹಿಸಿದೆ ಎಂದು ವೇಣು ದೂರಿದ್ದಾರೆ.

ಕ್ಯಾ. ಅಂಶುಮನ್ ಪತ್ನಿಯ ಬಗ್ಗೆ ಅಶ್ಲೀಲ ಕಾಮೆಂಟ್: ಎಫ್‌ಐಆರ್‌ ದಾಖಲು

ನವದೆಹಲಿ: ಕೀರ್ತಿ ಚಕ್ರ ಪುರಸ್ಕೃತ ಕ್ಯಾ. ಅಂಶುಮನ್‌ ಸಿಂಗ್‌ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಕಾಮೆಂಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಸೆಲ್ ಶನಿವಾರ ಎಫ್‌ಐಆರ್ ದಾಖಲಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ, ಸೇನಾಪಡೆಗಳ ಪೂರ್ಣ ನಿಯೋಜನೆಗೆ ಮೋದಿ ಸೂಚನೆ!

ಈ ಮುನ್ನ ರಾಷ್ಟ್ರೀಯ ಮಹಿಳಾ ಆಯೋಗ ಸು ಮೋಟೋ ಪ್ರಕರಣ ದಾಖಲಿಸಿಕೊಂಡು ದೆಹಲಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ನ್ಯಾಯಯುತ ಮತ್ತು ಸಮಯೋಚಿತ ತನಿಖೆಗೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಅಶ್ಲೀಲ ಕಾಮೆಂಟ್ ಮಾಡಿದ ಖಾತೆಯ ಕುರಿತು ಮಾಹಿತಿ ನೀಡುವಂತೆ ಎಕ್ಸ್‌ಗೆ ಮನವಿ ಮಾಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 79ರ ಅಡಿಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ತರುವುದಕ್ಕೆ ಹಾಗೂ ಐಟಿ ಕಾಯ್ದೆ, 2000ರ ಸೆಕ್ಷನ್ 67ರ ಅಡಿಯಲ್ಲಿ ಹಾಗೂ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲವಾಗಿ ಸಂದೇಶ ಕಳಿಸುವುದಕ್ಕೆ ಶಿಕ್ಷೆ ನಿಗದಿಪಡಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್