ನೋಟು ರದ್ದು ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು

Published : Jan 02, 2023, 09:23 AM IST
ನೋಟು ರದ್ದು ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು

ಸಾರಾಂಶ

2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಘೋಷಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 58 ಅರ್ಜಿಗಳ ಕುರಿತು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಇಂದು ತನ್ನ ಮಹತ್ವದ ತೀರ್ಪು ನೀಡಲಿದೆ.

ನವದೆಹಲಿ: 2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಘೋಷಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 58 ಅರ್ಜಿಗಳ ಕುರಿತು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಇಂದು ತನ್ನ ಮಹತ್ವದ ತೀರ್ಪು ನೀಡಲಿದೆ. ಸಾಂವಿಧಾನಿಕ ಪೀಠದ ಭಾಗವಾಗಿರುವ ನ್ಯಾ.ಎಸ್‌.ಎ.ನಜೀರ್‌ ಜ.4ರಂದು ನಿವೃತ್ತಿಯಾಗಲಿದ್ದು, ಅದಕ್ಕೂ ಮುನ್ನ ಪೀಠ ತನ್ನ ತೀರ್ಪನ್ನು ಪ್ರಕಟಿಸಲಿದೆ. ಸುಪ್ರೀಂಕೋರ್ಟ್‌ನ ಸೋಮವಾರದ ಕಲಾಪದ ಪಟ್ಟಿಅನ್ವಯ, ಅಪನಗದೀಕರಣದ ವಿಷಯದ ಕುರಿತು ಎರಡು ಪ್ರತ್ಯೇಕ ತೀರ್ಪು ಪ್ರಕಟವಾಗಲಿವೆ. ಈ ಪೈಕಿ ಒಂದನ್ನು ನ್ಯಾ.ಬಿ.ಆರ್‌.ಗವಾಯಿ ಹಾಗೂ ಇನ್ನೊಂದನ್ನು ನ್ಯಾ.ಬಿ.ವಿ.ನಾಗರತ್ನ ಅವರು ಓದಲಿದ್ದಾರೆ. ಆದರೆ ಎರಡೂ ತೀರ್ಪುಗಳು ಒಂದೇ ಅಭಿಪ್ರಾಯ ಹೊಂದಿರಲಿವೆಯೇ ಅಥವಾ ಒಂದು ತೀರ್ಪು ಭಿನ್ನ ಅಭಿಪ್ರಾಯ ಹೊಂದಿರಲಿದೆಯೇ ಎಂಬುದು ಖಚಿತಪಟ್ಟಿಲ್ಲ.

ಪೀಠದಲ್ಲಿರುವ ಇನ್ನಿಬ್ಬರು ನ್ಯಾಯಮೂರ್ತಿಗಳೆಂದರೆ ನ್ಯಾ.ಎ.ಎಸ್‌.ಬೋಪಣ್ಣ (Justice A.S. Bopanna) ಮತ್ತು ನ್ಯಾ.ವಿ.ರಾಮಸುಬ್ರಮಣಿಯನ್‌ (Justice V. Ramasubramanian). ವಿಶೇಷವೆಂದರೆ ಸೋಮವಾರ ತೀರ್ಪು ಪ್ರಕಟಿಸಲಿರುವ 5 ನ್ಯಾಯಾಧೀಶರ ಪೈಕಿ ಮೂವರು ಕನ್ನಡಿಗರು (ನ್ಯಾ.ಎಸ್‌.ಎ.ನಜೀರ್‌ (.S.A.Nazir), ನ್ಯಾ.ಎ.ಎಸ್‌.ಬೋಪಣ್ಣ ಮತ್ತು ನ್ಯಾ. ಬಿ.ವಿ.ನಾಗರತ್ನ) ಅಪನಗದೀಕರಣದ (demonetisation) ಕುರಿತು ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಅಪನಗದೀಕರಣಕ್ಕೆ ಕಾರಣವಾದ ಎಲ್ಲಾ ಅಂಶಗಳನ್ನು ಒಳಗೊಂಡ ದಾಖಲೆಗಳನ್ನು ತನಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ಡಿ.7ರಂದು ಸೂಚಿಸಿ ತನ್ನ ತೀರ್ಪನ್ನು ಕಾದಿರಿಸಿತ್ತು.

ಅಪನಗದೀಕರಣ ಪ್ರಶ್ನಿಸಿದ್ದ ಅರ್ಜಿಗಳ ಕುರಿತು ಜ.2ಕ್ಕೆ ಸುಪ್ರೀಂಕೋರ್ಟ್ ತೀರ್ಪು

ಯಾರು ಅಭಿಪ್ರಾಯ ಏನು?:

ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ (P. Chidambaram), ನೋಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ (central government) ಏಕಪಕ್ಷೀಯವಾಗಿ, ಸ್ವಯಂ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಆರ್‌ಬಿಐನ (RBI)  ಕೇಂದ್ರೀಯ ಮಂಡಳಿಯ ಶಿಫಾರಸುಗಳ ಅನ್ವಯ ಮಾತ್ರವೇ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಹುದು. ಹೀಗಾಗಿ 2016ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ಅಪನಗದೀಕರಣ ನೀತಿ ತಪ್ಪು ನಿರ್ಧಾರ ಎಂದು ವಾದಿಸಿದ್ದರು.

ಮತ್ತೊಂದೆಡೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಈ ಪ್ರಕರಣದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ ಎಂದಿತ್ತು. ಜೊತೆಗೆ ಸಮಯವನ್ನು ಹಿಂದಕ್ಕೆ ಸರಿಸುವ, ಒಡೆದ ಮೊಟ್ಟೆಯನ್ನು ಮರುಜೋಡಿಸುವ ಇಂಥ ಯತ್ನಗಳಿಂದ ಯಾರಿಗೂ ಯಾವುದೇ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದಿತ್ತು. ಅಲ್ಲದೆ ನಕಲಿ ನೋಟು ತಡೆ, ಭಯೋತ್ಪಾದನೆಗೆ (terrorism) ಹಣ ಪೂರೈಕೆ ಜಾಲಕ್ಕೆ ಕಡಿವಾಣ, ಕಪ್ಪುಹಣ (black money) ಮತ್ತು ತೆರಿಗೆ ವಂಚನೆ ತಡೆಯಲು ಅಪನಗದೀಕರಣ ಘೋಷಿಸಲಾಗಿದೆ. ಇದು ಸಾಕಷ್ಟು ಯೋಚಿಸಿ ಕೈಗೊಂಡ ನಿರ್ಧಾರವಾಗಿತ್ತು ಎಂದು ಸ್ಪಷ್ಟಪಡಿಸಿತ್ತು.

Note Ban: ಕೇಂದ್ರದ ನಿರ್ಧಾರ ಸರಿಯೋ ಇಲ್ವೋ..? ಜನವರಿ 2ರಂದು ಸುಪ್ರೀಂಕೋರ್ಟ್‌ ತೀರ್ಪು

‘ಇನ್ನು ಅಪನಗದೀಕರಣದಿಂದ ನಾಗರಿಕರು ಕೆಲ ಕಾಲ ಸಮಸ್ಯೆಗಳನ್ನು ಎದುರಿಸಿದ್ದರು, ಆದರೆ ದೇಶಕಟ್ಟುವ ಕೆಲಸದಲ್ಲಿ ಇದು ಅನಿವಾರ್ಯ. ಆದರೆ ಇಂಥ ಸಮಸ್ಯೆಗಳನ್ನು ಬಳಿಕ ಲಭ್ಯ ವ್ಯವಸ್ಥೆಯ ಮೂಲಕ ಪರಿಹರಿಸಲಾಯಿತು’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌, ನ್ಯಾಯಾಲಯಕ್ಕೆ ಮಾಹಿತಿ ನಿಡಿತ್ತು.

2000 ರೂ. ನೋಟು ಶೀಘ್ರ ಮಾಯ..? ಸಂಸತ್ತಲ್ಲಿ ಬಿಜೆಪಿ ಸಂಸದ ಆಗ್ರಹ


ಅಂದು ಏನಾಗಿತ್ತು?

2016ರ ನ.8ರಂದು ರಾತ್ರಿ ದಿಢೀರನೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi), ತಕ್ಷಣದಿಂದ ಜಾರಿಗೆ ಬರುವಂತೆ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳ ಚಲಾವಣೆ ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇದರ ಬದಲಾಗಿ 500 ರು. ಮುಖಬೆಲೆಯ ಹೊಸ ಮಾದರಿಯ ನೋಟು ಮತ್ತು 2000 ರು. ಮುಖ ಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ