ಸಂಸತ್‌ನಲ್ಲೂ ವಾಲ್ಮೀಕಿ, ಮುಡಾ ಹಗರಣ ಕುರಿತು ತೀವ್ರ ಗದ್ದಲ: ಚರ್ಚೆಗೆ ಬಿಜೆಪಿ ಬಿಗಿಪಟ್ಟು

Published : Jul 27, 2024, 10:30 AM IST
ಸಂಸತ್‌ನಲ್ಲೂ ವಾಲ್ಮೀಕಿ, ಮುಡಾ ಹಗರಣ ಕುರಿತು ತೀವ್ರ ಗದ್ದಲ: ಚರ್ಚೆಗೆ ಬಿಜೆಪಿ ಬಿಗಿಪಟ್ಟು

ಸಾರಾಂಶ

ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮೈಸೂರು ಮುಡಾ ನಿವೇಶನ ಹಗರಣಗಳು ಸಂಸತ್ತಿನ ಉಭಯ ಸದನದಲ್ಲಿ ಶುಕ್ರವಾರ ಪ್ರತಿಧ್ವನಿಸಿ ಕಲಾಪಕ್ಕೆ ಅಡ್ಡಿ ಮಾಡಿದ ಪ್ರಸಂಗಗಳು ನಡೆದಿವೆ.

ನವದೆಹಲಿ (ಜು.27): ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮೈಸೂರು ಮುಡಾ ನಿವೇಶನ ಹಗರಣಗಳು ಸಂಸತ್ತಿನ ಉಭಯ ಸದನದಲ್ಲಿ ಶುಕ್ರವಾರ ಪ್ರತಿಧ್ವನಿಸಿ ಕಲಾಪಕ್ಕೆ ಅಡ್ಡಿ ಮಾಡಿದ ಪ್ರಸಂಗಗಳು ನಡೆದಿವೆ. ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಈ ವಿಷಯ ಪ್ರಸ್ತಾಪಿಸಲು ಮುಂದಾದಾಗ ಸಭಾಪತಿಗಳು ಅದನ್ನು ತಿರಸ್ಕರಿಸಿದ್ದು ಕೋಲಾಹಲಕ್ಕೆ ಕಾರಣವಾಯಿತು.

ರಾಜ್ಯಸಭೆಯಲ್ಲಿ ಈ ಎರಡೂ ಹಗರಣಗಳನ್ನು ಪ್ರಸ್ತಾಪಿಸಿದ ಬಿಜೆಪಿಯ ಈರಣ್ಣ ಕಡಾಡಿ, ಬ್ರಿಜ್ ಲಾಲ್, ನರೇಶ್ ಬನ್ಸಲ್ ಮತ್ತು ಸುಧಾಂಶು ತ್ರಿವೇದಿ, ಎಲ್ಲ ಕಾರ್ಯಕಲಾಪ ಬದಿಗೊತ್ತಿ ಕರ್ನಾಟಕದ ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆ ಚರ್ಚೆಗೆ ಅನುವು ಮಾಡಿಕೊಡಬೇಕು ಎಂದು ಕೋರಿದರು. ಆದರೆ ಈ ನೋಟಿಸ್‌ಗಳನ್ನು ಸಭಾಪತಿ ಜಗದೀಪ್ ಧನಕರ್ ತಿರಸ್ಕರಿಸಿದರು. ಈ ವೇಳೆ ಬಿಜೆಪಿ-ಕಾಂಗ್ರೆಸ್‌ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಆದರೂ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ವಾಲ್ಮೀಕಿ ನಿಗಮ ಭ್ರಷ್ಟಾಚಾರದ ಕುರಿತು ಕಡಾಡಿ ಮಾತನಾಡಿದರು.

ಲೋಕಸಭೆಯಲ್ಲೂ ಗದ್ದಲ: ಈ ಎರಡೂ ಹಗರಣಗಳು ಲೋಕಸಭೆಯಲ್ಲೂ ಪ್ರತಿಧ್ವನಿಸಿದವು. ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು, ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವರೊಬ್ಬರು ಹಗರಣದಲ್ಲಿ ಶಾಮೀಲಾಗಿದ್ದಾರೆ’ ಎಂದು ವಾಲ್ಮೀಕಿ ನಿಗಮ ಹಗರಣವನ್ನು ಪ್ರಸ್ತಾಪಿಸಿದರು. ಸ್ಪೀಕರ್ ಕೂಡ ಮೋಹನ್ ಅವರಿಗೆ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲ. 

ಬಜೆಟ್‌ ಅನ್ಯಾಯ ಪ್ರಶ್ನಿಸದ ಬಿಜೆಪಿಯಿಂದ ಮುಡಾ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಕಿಡಿ

ಈ ವೇಳೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿಯ ಹಿರಿಯ ಸಂಸದ ಅನುರಾಗ್ ಠಾಕೂರ್ ಅವರು ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆಗ ಗದ್ದಲ ಮುಂದುವರಿದ ಕಾರಣ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 12.30ಕ್ಕೆ ಮುಂದೂಡಿದರು. ಗದ್ದಲ ಮುಂದುವರಿದ ಕಾರಣ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 12.30ಕ್ಕೆ ಮುಂದೂಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು