ನಟ ಸಲ್ಮಾನ್ ಖಾನ್‌ಗೆ ನಿರಂತರ ಬೆದರಿಕೆಯೊಡ್ಡುತ್ತಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಮುಗಿಸಿ ಬಿಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗುಡುಗಿದ್ದಾರೆ.
ಮುಂಬೈ: ನಟ ಸಲ್ಮಾನ್ ಖಾನ್‌ಗೆ ನಿರಂತರ ಬೆದರಿಕೆಯೊಡ್ಡುತ್ತಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಮುಗಿಸಿ ಬಿಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗುಡುಗಿದ್ದಾರೆ. ಕಳೆದ ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿತ್ತು. ಇದಾದ ನಂತರ ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಏಕನಾಥ್ ಶಿಂಧೆ ನಟ ಸಲ್ಮಾನ್ ಅವರನ್ನು ಭೇಟಿಯಾಗಿ ಕುಟುಂಬದ ಕ್ಷೇಮ ಸಮಾಚಾರವನ್ನು ವಿಚಾರಿಸಿದರು. ಬಳಿಕ ಮಾತನಾಡಿದ ಮಹಾರಾಷ್ಟ್ರ ಸಿಎಂ ಮುಂಬೈನಲ್ಲಿ ಯಾವುದೇ ಗ್ಯಾಂಗ್ ವಾರ್‌ಗಳಿಲ್ಲ, ಭೂಗತ ಜಗತ್ತಿಗೆ ಮುಂಬೈನಲ್ಲಿ ಜಾಗವಿಲ್ಲ, ಇದು ಮಹಾರಾಷ್ಟ್ರ, ಇದು ಮುಂಬೈ, ನಾವು ಈ ಬಿಷ್ನೋಯ್ ಗ್ಯಾಂಗ್ ಅನ್ನು ಫಿನಿಷ್ ಮಾಡ್ತೇವೆ, ಯಾರೊಬ್ಬರೂ ಕೂಡ ಇಂತಹ ಕೆಲಸ ಮಾಡಲು ಧೈರ್ಯ ತೋರಬಾರದು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಭಾನುವಾರ ಬೆಳಗ್ಗೆ ನಸುಕಿನ 5 ಗಂಟೆಯ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಾಕ್ಸಿ ಅಪಾರ್ಟ್‌ಮೆಂಟ್ ಮುಂದೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯನ್ನು ನಾವೇ ನಡೆಸಿದಾಗಿ ಬಿಷ್ಣೋಯ್ ಸಹೋದರ ಅನ್ಮೊಲ್ ಬಿಷ್ಣೋಯ್ ಹೇಳಿಕೊಂಡಿದ್ದ. ಇದಾದ ನಂತರ ಮುಂಬೈ ಪೊಲೀಸರು ಕ್ರೈಂ ಬ್ರಾಂಚ್ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಶಾರ್ಪ್ ಶೂಟರ್‌ಗಳನ್ನು ಬಂಧಿಸಿದ್ದರು. ಇದಾದ ನಂತರ ಸಲ್ಮಾನ್ ಖಾನ್ ನಿವಾಸಕ್ಕೆ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಧೈರ್ಯ ತುಂಬಿದ್ದರು. ನಂತರ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕೂಡ ಸಲ್ಲು ಮನೆಗೆ ಭೇಟಿ ನೀಡಿ ಧೈರ್ಯ ಹೇಳಿದ್ದರು.
ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ : ಮುಂಬೈ ಕ್ರೈಂ ಬ್ರಾಂಚ್‌ನಿಂದ ಇಬ್ಬರು ಶಾರ್ಪ್ ಶೂಟರ್‌ಗಳ ಬಂಧನ
ಈ ವೇಳೆ ಮಾತನಾಡಿದ ಏಕನಾಥ್ ಶಿಂಧೆ ಸಲ್ಮಾನ್ ಖಾನ್ ರಕ್ಷಣೆಯ ಹೊಣೆ ಮಹಾರಾಷ್ಟ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಅವರ ಕುಟುಂಬದ ಜೊತೆ ಸರ್ಕಾರ ಸದಾ ಇರುತ್ತದೆ. ಮುಂಬೈನಲ್ಲಿ ಯಾರು ಕೂಡ ಇಂತಹ ಕೃತ್ಯ ನಡೆಸಲು ಧೈರ್ಯ ಮಾಡದಂತೆ ಸರ್ಕಾರ ಮಾಡುತ್ತದೆ ಎಂಬ ಭರವಸೆಯನ್ನು ಸರ್ಕಾರ ನೀಡುತ್ತದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ನಟ ಸಲ್ಮಾನ್ ಖಾನ್‌ಗೆ ನಿರಂತರ ಬೆದರಿಕೆಯೊಡ್ಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಳ ಮಾಡಲಾಗಿತ್ತು, ಭಾನುವಾರ ನಡೆದ ಗುಂಡಿನ ದಾಳಿಯ ನಂತರ ತೀವ್ರ ನಿಗಾ ವಹಿಸಲಾಗಿದೆ. ಗುಂಡಿನ ದಾಳಿ ನಡೆಸಿದ ಇಬ್ಬರು ಶಾರ್ಪ್ ಶೂಟರ್‌ಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಲ್ಮಾನ್ ಖಾನ್ ನಿವಾಸ ಎದುರು ಗುಂಡಿನ ದಾಳಿ ನಡೆಸಿ ಗುಜರಾತ್‌ನ ಕಚ್‌ನಲ್ಲಿ ಈ ಆರೋಪಿಗಳ ಪರಾರಿಯಾಗಿದ್ದರು, ಬಂಧಿತರನ್ನು ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಎಂದು ಗುರುತಿಸಲಾಗಿದೆ.
ಲಾರೆನ್ಸ್ ಬಿಷ್ಣೋಯ್‌ಗೆ ಸಲ್ಮಾನ್ ಖಾನ್ ಜೊತೆ ದ್ವೇಷವೇಕೆ?
1998 ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದ. ಬಿಷ್ಣೋಯ್ ಸಮುದಾಯವು ಕೃಷ್ಣಮೃಗವನ್ನು ಪವಿತ್ರವೆಂದು ಪರಿಗಣಿಸುತ್ತದೆ. ಆದರೆ ಸಲ್ಮಾನ್ ವಿರುದ್ಧ 1998ರಲ್ಲಿ ಸಿನಿಮಾ ಶೂಟಿಂಗ್ ವೇಳೆ ಈ ಕೃಷ್ಣಮೃಗವನ್ನು ಬೇಟೆಯಾಡಿದ ಆರೋಪವಿದೆ. ಹೀಗಾಗಿ ಅದೊಂದು ನೆಪವಿರಿಸಿಕೊಂಡು 2018ರಿಂದಲೂ ಈತನ ಗ್ಯಾಂಗ್ ಸಲ್ಮಾನ್ ಖಾನ್ ಮೇಲೆ ಒಂದು ಕಣ್ಣಿಟ್ಟಿದ್ದಲ್ಲದೇ ಸಲ್ಮಾನ್ ಖಾನ್‌ಗೆ ಆಗಾಗ ಬೆದರಿಕೆಯೊಡ್ಡುತ್ತಿದೆ. ಅಲ್ಲದೇ ಸುಲಿಗೆ ಪ್ರಕರಣವೊಂದರಲ್ಲಿ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಬಿಷ್ಣೋಯ್ ನಗರದಲ್ಲಿ ಸಲ್ಮಾನ್ ಖಾನ್‌ರನ್ನು ಕೊಲ್ಲುವುದಾಗಿಯೂ ಲಾರೆನ್ಸ್ ಬಿಷ್ಣೋಯ್ ಬೆದರಿಕೆಯೊಡಿದ್ದ.
ಪೊಲೀಸ್ ಪೇದೆಯ ಮಗನಾಗಿ ಹುಟ್ಟಿದ ಲಾರೆನ್ಸ್ ಬಿಷ್ಣೋಯ್ ಅಂಡರ್‌ವರ್ಲ್ಡ್ ಡಾನ್ ಆಗಿದ್ದು ಹೇಗೆ?