
ಹೈದರಾಬಾದ್: ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ.
ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ವಹಣೆಗಾಗಿ ರಾಜ್ಯದಲ್ಲಿನ ಕೆಲವು ವಿದ್ಯುತ್ ಘಟಕಗಳನ್ನು ಮುಂಗಾರು ಸಮಯದಲ್ಲಿ ಮುಚ್ಚಲಾಗಿತ್ತು. ಹೀಗಾಗಿ ಅಲ್ಪಕಾಲದ ಪವರ್ ಕಟ್ ಉಂಟಾಗಿತ್ತು. ಆದರೆ ಈ ಕೊರತೆಯನ್ನು ನಾವು ನೀಗಿಸಿದ್ದೇವೆ. ರೈತರು ಬೇಡಿಕೆ ಇಟ್ಟಾಗೆಲ್ಲಾ ನಾವು ಅವರಿಗೆ ವಿದ್ಯುತ್ ಪೂರೈಕೆ ಮಾಡಿದ್ದೇವೆ. ಈಗ ಯಾವುದೇ ದೂರುಗಳಿಲ್ಲ. 5ರಿಂದ 10 ದಿನಗಳ ಕಾಲ ಮಾತ್ರ ವಿದ್ಯುತ್ ಕೊರತೆ ಉಂಟಾಗಿತ್ತು. ಆದರೆ ಅನಾವಶ್ಯಕವಾಗಿ ಈ ಬಗ್ಗೆ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ವಿದ್ಯುತ್ ಕೊರತೆ ನೀಗಿಸಲು ಹೆಚ್ಚಿನ ಘಟಕಗಳ ಸ್ಥಾಪನೆ ಮಾಡಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಆರ್‌ಎಸ್, ಕರ್ನಾಟಕದಲ್ಲೇ ಪದೇ ಪದೇ ವಿದ್ಯುತ್ ಕೊರತೆ ಉಂಟಾಗುತ್ತಿದೆ. ಆದರೆ ಇಲ್ಲಿ ಬಂದು ಕರ್ನಾಟಕದಲ್ಲಿ ನೀಡಿದ ಭರವಸೆಗಳನ್ನು ಇಲ್ಲಿಯೂ ಜಾರಿ ಮಾಡುವ ಭರವಸೆ ನೀಡುತ್ತಿದೆ ಎಂದು ಹೇಳಿತ್ತು.
ಭಾರತ ತಂತ್ರಜ್ಞಾನದಲ್ಲಿ ಮುಂದುವರಿಯಲು ರಾಜೀವ್ ಗಾಂಧಿ ಕಾರಣ: ಸಚಿವ ಜಾರ್ಜ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ