ಲಕ್ನೋ: ಉತ್ತರಪ್ರದೇಶದ ಲಕ್ನೋದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಲಕ್ನೋದ ವಜೀರ್ ಹಜ್ರತ್‌ಗಂಜ್ ಎಂಬಲ್ಲಿ ಈ ಘಟನೆ ನಡೆದಿದ್ದು, ಜನವಸತಿ ಇದ್ದ ನಾಲ್ಕು ಅಂತಸ್ತಿನ ಕಟ್ಟಡ ದಿಢೀರ್ ಕುಸಿದಿದೆ. ಇಂದು ಮಧ್ಯಾಹ್ನದ ವೇಳೆ ಉತ್ತರ ಭಾರತದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ಇದರ ಬೆನ್ನಲೇ ಈಗ ಕಟ್ಟಡ ಕುಸಿದಿದ್ದು, ಕಟ್ಟಡದ ಅವಶೇಷಗಳಡಿಯಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಇನ್ನು ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದಿಢೀರ್ ಆಗಿ ಕಟ್ಟಡ ಕುಸಿದಿದೆ. ಇದುವರೆಗೆ ಕಟ್ಟಡದಡಿಯಿಂದ ಮೂರು ಶವಗಳನ್ನು ಹೊರ ತೆಗೆಯಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ತಂಡ ಸ್ಥಳದಲ್ಲಿ ಹಾಜರಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಟಕ್ ಹೇಳಿದ್ದಾರೆ.
ಕಟ್ಟಡ ಕುಸಿತಕ್ಕೆ ಕಾರಣವಾಗಿರುವ ಹಜ್ರತ್ ಗಂಜ್ ಹಳೆ ಕಟ್ಟಡಗಳ ಕಾರಣಕ್ಕೆ ಈಗಾಗಲೇ ಸುದ್ದಿಯಲ್ಲಿತ್ತು. ಈ ಮಧ್ಯೆ ಈಗ ಕಟ್ಟಡ ಕುಸಿದು ಹಲವರ ಸಾವಿಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ