ತಿರುಪತಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆ ವಿವಾದದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಸುಪ್ರೀಂ ಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ ತಡೆ ನೀಡಲಾಗಿದೆ. ಈ ಪ್ರಕರಣದಲ್ಲಿ ದೇವರ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ವಿಜಯವಾಡ: ದೇವರ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಹಾಗಾಗಿ ನೀವೆ ರಚಿಸಿದ ಎಸ್‌ಐಟಿಯಿಂದ ತನಿಖೆ ನಡೆಸುವ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿದ್ದ ಬೆನ್ನಲ್ಲೇ ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ ವಿವಾದ ಕುರಿತ ಎಸ್‌ಐಟಿ ತನಿಖೆಗೆ ತಡೆ ನೀಡಲಾಗಿದೆ. ಸುಪ್ರೀಂನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವುರಿಂದ ಆ.3ರವರೆಗೆ ತನಿಖೆಯನ್ನು ನಿಲ್ಲಿಸುತ್ತೇವೆ ಎಂದು ಆಂಧ್ರ ಡಿಜಿಪಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಡಿಜಿಪಿ ದ್ವಾರಕಾ ತಿರುಮಲ ರಾವ್,‘ ತಿರುಪತಿ ಲಡ್ಡು ಪ್ರಸಾದದಲ್ಲಿನ ಕಲಬೆರಕೆ ವಿವಾದದ ಬಗ್ಗೆ ತನಿಖೆಯನ್ನು ನಡೆಸಲು ಎಸ್‌ಐಟಿ ರಚಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇದಕ್ಕೆ ಸಂಬಂಧಿಸಿದ ಪ್ರಕರಣ ನಡೆಯುತ್ತಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ತನಿಖೆಗೆ ಆ. 3ರ ತನಕ ತಡೆ ನೀಡಲಾಗಿದೆ’ ಎಂದಿದ್ದಾರೆ.
undefined
ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿದ ಬಳಿಕ ಕಳೆದ ಎರಡು ದಿನಗಳಲ್ಲಿ ತನಿಖೆ ಆರಂಭಿಸಿತ್ತು. ಈ ನಡುವೆ ಸೋಮವಾರ ಸುಪ್ರೀಂ ದೇವರ ವಿಚಾರದಲ್ಲಿ ರಾಜಕೀಯ ತರಬೇಡಿ ಎಂದು ಆಂಧ್ರ ಸರ್ಕಾರಕ್ಕೆ ಚಾಟಿ ಬೀಸಿ, ಎಸ್‌ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತ ಪಡಿಸಿತ್ತು.
ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ನೀಡುವ ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವುದು ಅಘಾತಕಾರಿ ವಿಷಯವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವ ದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹಿಸಿದೆ.
4 ಗೋಡೆ ಮಧ್ಯೆ ಬೈಬಲ್ ಓದುವೆ, ಎಲ್ಲ ಧರ್ಮ ಗೌರವಿಸುವೆ- ನನ್ನ ಭೇಟಿ ತಡೆಯಲು ಧರ್ಮದ ವಿಷಯ ಪ್ರಸ್ತಾಪ: ಜಗನ್
ಪ್ರಕರಣದ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸೂಚಿಸುವಂತೆ ಪ್ರಧಾನ ಮಂತ್ರಿಗಳಿಗೆ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರ ಮೂಲಕ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ದೇವಸ್ಥಾನದಲ್ಲಿ ಕೊಡುವ ಲಾಡು ಕೇವಲ ಆಹಾರವಲ್ಲ ಅದೊಂದು ಆಧ್ಯಾತ್ಮಿಕ ಭಾಗವಾಗಿದೆ. ಅದರಲ್ಲಿ ಪ್ರಾಣಿಗಳ ಕೊಬ್ಬು ಬಳಸಿರುವುದು ಭಕ್ತರಲ್ಲಿ ಕೋಪ ಮೂಡಿಸಿದೆ. ಈ ಕಾರಣದಿಂದ ತಪ್ಪಿಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ತನಿಖೆಗೂ ಮುನ್ನವೇ ತುಪ್ಪದಲ್ಲಿ ಪ್ರಾಣಿ ಕೊಬ್ಬು ಇತ್ತೆಂದು ಹೇಳಿದ್ದೇಕೆ? ಆಂಧ್ರ ಸಿಎಂಗೆ ಸುಪ್ರೀಂ ತರಾಟೆ