ಬಂಗಾಳದಲ್ಲಿ ಬಾಬ್ರಿ ಮಸೀದಿ ಕಟ್ಟುವೆ ಎಂದಿದ್ದ ಶಾಸಕ ಟಿಎಂಸಿಯಿಂದ ವಜಾ

Kannadaprabha News   | Kannada Prabha
Published : Dec 05, 2025, 04:20 AM IST
Humayun Kabir

ಸಾರಾಂಶ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ರೀತಿ ಮಸೀದಿ ನಿರ್ಮಿಸುತ್ತೇನೆ ಎಂದಿದ್ದ ಟಿಎಂಸಿ ಶಾಸಕ ಹುಮಾಯೂನ್‌ ಕಬೀರ್‌ರನ್ನು ಟಿಎಂಸಿ ಪಕ್ಷದಿಂದ ವಜಾ ಮಾಡಲಾಗಿದೆ.

ಕೋಲ್ಕತಾ/ ಬೆಹ್ರಾಂಪುರ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ರೀತಿ ಮಸೀದಿ ನಿರ್ಮಿಸುತ್ತೇನೆ ಎಂದಿದ್ದ ಟಿಎಂಸಿ ಶಾಸಕ ಹುಮಾಯೂನ್‌ ಕಬೀರ್‌ರನ್ನು ಟಿಎಂಸಿ ಪಕ್ಷದಿಂದ ವಜಾ ಮಾಡಲಾಗಿದೆ.

ಡಿ.6ಕ್ಕೆ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ

ಡಿ.6ಕ್ಕೆ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಹಿನ್ನೆಲೆ ಅಂದೇ ಮಸೀದಿಗೆ ಶಂಕು ಸ್ಥಾಪನೆ ಮಾಡುವುದಾಗಿ ಕಬೀರ್‌ ಹೇಳಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂತಹ ಹೇಳಿಕೆ ಮುಳುವಾಗಬಹುದು ಎನ್ನುವ ಕಾರಣಕ್ಕೆ ಟಿಎಂಸಿ ಕಬೀರ್‌ರನ್ನು ವಜಾಗೊಳಿಸಿದೆ. ಇತ್ತ ಬಿಜೆಪಿ ‘ಇದೊಂದು ನಾಟಕ’ ಎಂದು ವ್ಯಂಗ್ಯವಾಡಿದೆ. ವಜಾದ ಬಳಿಕ ಮಮತಾ ಈ ಬಗ್ಗೆ ಮಾತನಾಡಿದ್ದು ‘ಟಿಎಂಸಿ ಕೋಮು ರಾಜಕೀಯನ್ನು ಬೆಂಬಲಿಸುವುದಿಲ್ಲ. ಅದನ್ನು ವಿರೋಧಿಸುತ್ತದೆ’ ಎಚ್ಚರಿಸಿದ್ದಾರೆ.

ಹೊಸ ಪಕ್ಷ ಸ್ಥಾಪನೆ:

ವಜಾಗೊಳಿಸಿದ್ದಕ್ಕೆ ಅಸಮಾಧಾನಗೊಂಡಿರುವ ಕಬೀರ್‌ ಹೊಸ ಪಕ್ಷ ಸ್ಥಾಪನೆ ಘೋಷಿಸಿದ್ದಾರೆ. ‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿ.22ಕ್ಕೆ ಹೊಸ ಪಕ್ಷ ಸ್ಥಾಪಿಸುತ್ತೇನೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 294 ಕ್ಷೇತ್ರಗಳ ಪೈಕಿ 135 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ವಿರುದ್ಧ ಸ್ಪರ್ಧಿಸುವೆ. ಅವರು ಏನಾದರೂ ಮಾಡಿಕೊಳ್ಳಲಿ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಈ ವರ್ತನೆ ಬಗ್ಗೆ ಹೆಣ್ಣಿಗೆ ಮಾತ್ರವಲ್ಲ ಮನೆಯ ಸಾಕು ಬೆಕ್ಕಿಗೂ ಗೊತ್ತು....!
ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ