ಒಮರ್‌ ಬಳಿಕ ಈಗ ಮಮತಾ ಪಕ್ಷದಿಂದ ಕಾಂಗ್ರೆಸ್‌ಗೆ ಇವಿಎಂ ಚಾಟಿ

Published : Dec 17, 2024, 07:29 AM IST
ಒಮರ್‌ ಬಳಿಕ ಈಗ ಮಮತಾ ಪಕ್ಷದಿಂದ ಕಾಂಗ್ರೆಸ್‌ಗೆ ಇವಿಎಂ ಚಾಟಿ

ಸಾರಾಂಶ

ಇವಿಎಂಗಳ ಬಗ್ಗೆ ಪ್ರಶ್ನೆ ಎತ್ತುವವರು ಅದರ ವ್ಯತ್ಯಾಸಗಳ ಡೆಮೋವನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು. ಬರೀ ಆರೋಪ ಸಾಲದು. ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಯಾರಿಗಾದರೂ ಅನ್ನಿಸಿದರೆ ಅವರು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಅದನ್ನು ನಿರೂಪಿಸಿಬೇಕು. ಹಾಗೆ ಮಾಡುವುದನ್ನು ಬಿಟ್ಟು ಸುಮ್ಮನೆ ಹೇಳಿಕೆ ನೀಡಿದರೆ ಸಾಲದು: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನವದೆಹಲಿ(ಡಿ.17):  'ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ತಿರುಚಲಾಗುತ್ತಿದೆ. ಹೀಗಾಗಿ ಅದರ ಬದಲು ಈ ಹಿಂದಿನಂತೆ ಬ್ಯಾಲೆಟ್ ಪೇಪರ್ ಜಾರಿಗೆ ತರಬೇಕು' ಎಂದು ಆಗ್ರಹಿಸುತ್ತಿರುವ ಕಾಂಗ್ರೆಸ್ ನಡೆಗೆ ಖುದ್ದು ಇಂಡಿಯಾ ಕೂಟದಲ್ಲೇ ಅಪಸ್ವರ ಹೆಚ್ಚುತ್ತಿದೆ. 

ಮೊನ್ನೆ ಜಮ್ಮು-ಕಾಶ್ಮೀರ ಸಿಎಂ ಒಮ‌ರ್ ಅಬ್ದುಲ್ಲಾ ಅವರು ಕಾಂಗ್ರೆಸ್ ನಡೆ ವಿರೋಧಿಸಿದ್ದರು. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೂಡ ಇದೇ ಅನಿಸಿಕೆ ವ್ಯಕ್ತಪಡಿಸಿದೆ. 

ಇವಿಎಂ ಬಗ್ಗೆ ಸಂಶಯ ಇರುವವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಯಾಲೆಟ್ ಪೇಪರ್ ಮರಳಿದ ಬಳಿಕ ಸ್ಪರ್ಧಿಸಲಿ

ಸೋಮವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮಾತನಾಡಿ, 'ಇವಿಎಂಗಳ ಬಗ್ಗೆ ಪ್ರಶ್ನೆ ಎತ್ತುವವರು ಅದರ ವ್ಯತ್ಯಾಸಗಳ ಡೆಮೋವನ್ನು ಚುನಾವಣಾ ಆಯೋಗಕ್ಕೆ ತೋರಿಸಬೇಕು. ಬರೀ ಆರೋಪ ಸಾಲದು. ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂದು ಯಾರಿಗಾದರೂ ಅನ್ನಿಸಿದರೆ ಅವರು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಅದನ್ನು ನಿರೂಪಿಸಿಬೇಕು. ಹಾಗೆ ಮಾಡುವುದನ್ನು ಬಿಟ್ಟು ಸುಮ್ಮನೆ ಹೇಳಿಕೆ ನೀಡಿದರೆ ಸಾಲದು' ಎಂದರು. 

ಈ ಮೂಲಕ ಕಾಂಗ್ರೆಸ್ ಆಗ್ರಹ ತರ್ಕಬದ್ಧವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಭಿಷೇಕ್ ಅವರನ್ನು ತೃಣಮೂಲ ಕಾಂಗ್ರೆಸ್‌ನಲ್ಲಿ ಮಮತಾ ನಂತರ ನಂ.2 ನಾಯಕ ಎಂದೇ ಕರೆಯಲಾಗುತ್ತದೆ. ಕಾಂಗ್ರೆಸ್‌ನಲ್ಲಿ ಕೂಡ ಇವಿಎಂ ವಿರುದ್ಧ ಒಮ್ಮತ ಇದ್ದಂತಿಲ್ಲ. ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಇತ್ತೀಚೆಗೆ 'ಇವಿಎಂ ಕ್ಷಮತೆ ಬಗ್ಗೆ ನನಗೆ ಎಳ್ಳಷ್ಟೂ ಸಂದೇಹವಿಲ್ಲ' ಎಂದಿದ್ದರು. 

ಒಮರ್ ಅಬ್ದುಲ್ಲಾ ಮೊನ್ನೆ ಮಾತನಾಡಿ, 'ಇವಿಎಂ ಮೇಲೆ ಸಂದೇಹ ಇದ್ದರೆ ಚುನಾವಣೆಗೇ ಸರ್ಧಿಸಬಾರದು. ಸೋಲಿನ ಬಳಿಕ ಇವಿಎಂಗಳನ್ನು ದೂರುವುದನ್ನು ಬಿಟ್ಟು ಬಿಡಿ, ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಿ' ಎಂದಿದ್ದರು. 

ಮತ್ತೆ ಬ್ಯಾಲೆಟ್ ಪೇಪರ್‌ ಪದ್ಧತಿಯನ್ನೇ ಜಾರಿಗೊಳಿಸಿ: ಇವಿಎಂ ವಿರುದ್ಧ ಆಘಾಡಿ 3 ಹಂತದ ಮಹಾಸಮರ

ಪ್ರಹ್ಲಾದ ಜೋಶಿ ಕಿಡಿ: 

ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೋಮವಾರ ಮಾತನಾಡಿ, 'ಇವಿಎಂ ದೂಷಿಸುವುದರಿಂದ ಯಾವುದೇ ಫಲ ಸಿಗಲ್ಲ ಎಂಬ ಅರಿವು ಈಗಲಾದರೂ ಕಾಂಗ್ರೆಸ್‌ನಲ್ಲಿ ಮೂಡಲಿ. ಕಾಂಗ್ರೆಸ್ ಮಿತ್ರರೇ ಈಗ ಇವಿಎಂ ಪರ ನಿಂತಿದ್ದಾರೆ' ಎಂದು ವ್ಯಂಗ್ಯವಾಡಿದರು. ಮಹಾರಾಷ್ಟ್ರ ಹಾಗೂ ಹರ್ಯಾಣ ಚುನಾವಣೆ: ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಇವಿಎಂ ಬಗ್ಗೆ ಅಪಸ್ವರ ಹೆಚ್ಚಿದೆ.

• ಇವಿಎಂ ಬದಲು ಬ್ಯಾಲೆಟ್ ಪೇಪ‌ರ್ ಮರುಜಾರಿಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ 
• ಕಾಂಗ್ರೆಸ್ಸಿನ ಈ ಬೇಡಿಕೆಗೆ ಪ್ರತಿಪಕ್ಷ ಗಳ ಇಂಡಿಯಾ ಕೂಟದ ಪಕ್ಷಗಳಲ್ಲೇ ಸಹಮತ ಇಲ್ಲ 
• ಇವಿಎಂ ಬಗ್ಗೆ ಶಂಕೆ ಇದ್ದರೆ ಚುನಾವಣೆಗೇ ಸ್ಪರ್ಧಿಸಬೇಡಿ ಎಂದಿದ್ದ ಒಮರ್ ಅಬ್ದುಲ್ಲಾ 
. ಈಗ ಮತ್ತೊಂದು ಮಿತ್ರ ಪಕ್ಷ ಟಿಎಂಸಿಯಿಂದಲೂ ಕಾಂಗ್ರೆಸ್‌ನ ಇವಿಎಂ ಕ್ಯಾತೆಗೆ ಅಪಸ್ವರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ