ಸಾವರ್ಕರ್ ಬ್ರಿಟಿಷರ ಸೇವಕ ಎಂದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಚಾಟಿ!

Published : Apr 25, 2025, 06:13 PM ISTUpdated : Apr 25, 2025, 06:17 PM IST
ಸಾವರ್ಕರ್ ಬ್ರಿಟಿಷರ ಸೇವಕ ಎಂದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಚಾಟಿ!

ಸಾರಾಂಶ

ವೀರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸುಪ್ರೀಂ ಕೋರ್ಟ್ ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದ್ದು, ಪುನರಾವರ್ತನೆಯಾದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

2022ರ ನವೆಂಬರ್ 17ರಂದು ಮಹಾರಾಷ್ಟ್ರದ ಅಕೋಲಾದಲ್ಲಿ 'ಭಾರತ್ ಜೋಡೋ ಯಾತ್ರೆ' ವೇಳೆ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು 'ಬ್ರಿಟಿಷರ ಸೇವಕ' ಎಂದು ಕರೆದಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿತ್ತು. ಅಲಹಾಬಾದ್ ಹೈಕೋರ್ಟ್‌ನ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಅದಾನಿ ರಕ್ಷಿಸಲು ಮೊಸಾದ್ ರಹಸ್ಯ ಕಾರ್ಯಾಚರಣೆ: ರಾಹುಲ್ ಗಾಂಧಿ-ಹಿಂಡನ್‌ಬರ್ಗ್ ಲಿಂಕ್ ಬಯಲು!

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರ ಪೀಠವು, 'ನಿಮ್ಮ ಕಕ್ಷಿದಾರರಿಗೆ ಮಹಾತ್ಮ ಗಾಂಧಿ 'ನಿಷ್ಠಾವಂತ ಸೇವಕ' ಎಂಬ ಪದವನ್ನು ಬಳಸಿದ್ದಾರೆಂದು ತಿಳಿದಿದೆಯೇ? ಅವರ ಅಜ್ಜಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪತ್ರ ಬರೆದಿದ್ದಾರೆಂದು ಗೊತ್ತಿದೆಯೇ?' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ 'ರಾಜಕೀಯ ನಾಯಕರಾಗಿ ಇಂತಹ ಹೇಳಿಕೆಗಳನ್ನು ಏಕೆ ನೀಡಬೇಕು? ಪ್ರಚೋದನೆ ಉದ್ದೇಶವಿಲ್ಲದಿದ್ದರೆ, ಈ ರೀತಿಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು' ಎಂದು ಕಾಂಗ್ರೆಸ್ ನಾಯಕನಿಗೆ ನ್ಯಾಯಾಲಯ ಖಡಕ್ ಆಗಿ ಸೂಚಿಸಿತು. ರಾಹುಲ್ ಗಾಂಧಿಯವರ ವಕೀಲರು 'ದ್ವೇಷ ಪ್ರಚೋದನೆ ಉದ್ದೇಶವಿರಲಿಲ್ಲ' ಎಂದು ವಾದಿಸಿದರೂ, ನ್ಯಾಯಾಲಯ ಇಂತಹ ಹೇಳಿಕೆಗಳಿಂದ ದೂರವಿರುವಂತೆ ಎಚ್ಚರಿಕೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!