ಮಧ್ಯಪ್ರದೇಶದಲ್ಲಿ 2 ವಾಹನಗಳ ಮೇಲೆ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯ ಬದ್ನವರ್-ಉಜ್ಜಯಿನಿ ರಸ್ತೆಯಲ್ಲಿ ಎರಡು ವಾಹನಗಳಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸಾವನ್ನಪ್ಪಿ ಮೂವರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಬದ್ನಾವರ್-ಉಜ್ಜಯಿನಿ ಹೆದ್ದಾರಿಯಲ್ಲಿರುವ ಬಮನ್‌ಸುದಾ ಗ್ರಾಮದ ಬಳಿ ರಸ್ತೆಯ ತಪ್ಪಾದ ಬದಿಯಿಂದ ಗ್ಯಾಸ್ ಟ್ಯಾಂಕರ್ ಚಲಿಸಿ ಈ ಘಟನೆ ಸಂಭವಿಸಿದೆ.
Bengaluru: ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವು!
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ:
ಬಲಿಪಶುಗಳು ರತ್ಲಂ, ಮಂದ್‌ಸೌರ್ (ಮಧ್ಯಪ್ರದೇಶದಲ್ಲಿ) ಮತ್ತು ಜೋಧ್‌ಪುರ (ರಾಜಸ್ಥಾನ) ಜಿಲ್ಲೆಗಳಿಗೆ ಸೇರಿದವರೆಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಧಾರ್ ಎಸ್ಪಿ ಮನೋಜ್ ಕುಮಾರ್ ಸಿಂಗ್, ''ಟ್ಯಾಂಕರ್ ಎದುರಿನಿಂದ ಬಂದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ತಕ್ಷಣ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು'' ಎಂದರು.
ಲಾರಿ ಚಾಲಕ ಎಸ್ಕೇಪ್:
ವಾಹನಗಳಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ಸ್ಥಳೀಯರು ಸಹಾಯ ಮಾಡಿದರು. ಗಾಯಗೊಂಡವರನ್ನು ನೆರೆಯ ಜಿಲ್ಲೆಯಾದ ರತ್ಲಂ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಎಸ್ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕುಂಭಮೇಳ ಕಾಲ್ತುಳಿತ, ಬೆಳಗಾವಿಯ ಕುಟುಂಬಕ್ಕೆ ಯುಪಿ ಸರ್ಕಾರದಿಂದ 1 ಕೋಟಿ ಜಮೆ!
ಜಿಲ್ಲಾ ಪೊಲೀಸ್ ಎಚ್ಚರಿಕೆ:
ಈ ಅಪಘಾತದ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಆರ್.ಕೆ.ಶಿಂಡೆ ಪ್ರತಿಕ್ರಿಯಿಸಿ, "ಬದ್ನಾವರ್ ಬಳಿ 3-4 ವಾಹನಗಳು ಭಾಗಿಯಾಗಿದ್ದ ರಸ್ತೆ ಅಪಘಾತದಲ್ಲಿ ದೊಡ್ಡ ಮತ್ತು ದುರದೃಷ್ಟಕರ ಘಟನೆ ಸಂಭವಿಸಿದೆ. 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಒಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ'' ಎಂದು ತಿಳಿಸಿದ್ದಾರೆ.
ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದೇ ಈ ಅಪಘಾತಕ್ಕೆ ಮುಖ್ಯ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಚಾಲಕರು ಹೆದ್ದಾರಿಗಳಲ್ಲಿ ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಲು ಮತ್ತು ಇಂತಹ ವಿನಾಶಕಾರಿ ಅಪಘಾತಗಳನ್ನು ತಡೆಯಲು ಸಂಚಾರ ನಿಯಮಗಳನ್ನು ಪಾಲಿಸಲು ಅಧಿಕಾರಿಗಳು ವಿನಂತಿಸಿದ್ದಾರೆ.