ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಟ್ರಕ್‌: ಮೂವರ ದಾರುಣ ಸಾವು

Published : May 19, 2022, 10:51 AM IST
ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಟ್ರಕ್‌: ಮೂವರ ದಾರುಣ ಸಾವು

ಸಾರಾಂಶ

ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಟ್ರಕ್‌ ಮೂವರು ಕಾರ್ಮಿಕರ ದೇಹ ಛಿದ್ರ ಛಿದ್ರ, 11 ಕಾರ್ಮಿಕರಿಗೆ ಗಾಯ ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಘಟನೆ

ಚಂಡೀಗಢ: ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, 11 ಕಾರ್ಮಿಕರು ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಹರ್ಯಾಣದ (Haryana) ಜಜ್ಜರ್ ಜಿಲ್ಲೆಯ (Jhajjar) ಆಸೋಧ ಟೋಲ್ ಪ್ಲಾಜಾದಿಂದ (Aasodha toll plaza) ಸುಮಾರು 2 ಕಿಮೀ ದೂರದಲ್ಲಿರುವ ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ (Kundli-Manesar-Palwal expressway) ಮುಂಜಾನೆ ಈ ಘಟನೆ ನಡೆದಿದೆ. ಟ್ರಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಮಲಗಿದ್ದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಟ್ರಕ್‌ ಪಲ್ಟಿಯಾದ ಪರಿಣಾಮ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿದ್ದು, ದುರಂತದ ಭಯಾನಕತೆಯನ್ನು ತೋರಿಸುತ್ತಿದೆ.

ಇಲ್ಲೇ ಸಮೀಪದಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯಲ್ಲಿ ಈ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಒಟ್ಟು 18 ಕಾರ್ಮಿಕರು ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿ ಮಲಗಿದ್ದಾಗ ಟ್ರಕ್ ನಿಯಂತ್ರಣ ತಪ್ಪಿ ಅವರ ಮೇಲೆ ಹರಿದಿದೆ. ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಯಶವರ್ಧನ್ (Amit Yashwardhan) ತಿಳಿಸಿದ್ದಾರೆ. ಹನ್ನೆರಡು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಹತ್ತು ಜನರನ್ನು ರೋಹ್ಟಕ್‌ನ (Rohtak) ಪಿಜಿಐಎಂಎಸ್‌ಗೆ  (PGIMS) ಸಾಗಿಸಲಾಗಿದೆ ಎಂದು ಅವರು ಹೇಳಿದರು.

ಕಲಘಟಗಿ: ಆಟೋರಿಕ್ಷಾ​- ಟ್ರ್ಯಾಕ್ಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಕಾರ್ಮಿಕರು ಸಾವು

ಕಾರ್ಮಿಕರು (labourers) ಏನು ಕೆಲಸ ಮಾಡುತ್ತಿದ್ದಾರೆ ಎಂದು ಕೇಳಿದಾಗ, ಅವರು ಸೇತುವೆ ನಿರ್ಮಾಣ (bridge project) ಕಾರ್ಯಕ್ಕಾಗಿ ಹಗ್ಗ ಕಟ್ಟುತ್ತಿದ್ದರು ಎಂದು ಹೇಳಿದರು. ಮೃತರ ಹೆಸರನ್ನು ಇನ್ನೂ ದೃಢೀಕರಿಸಲಾಗಿಲ್ಲ, ಆದರೆ ಅವರು ಉತ್ತರ ಪ್ರದೇಶದ (Uttar Pradesh) ಎರಡು ಜಿಲ್ಲೆಗಳಿಂದ ಬಂದವರು ಎಂದು ನಮಗೆ ತಿಳಿದಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದರು. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಮಾಲೀಕರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪಘಾತದ ವೇಳೆ ಟ್ರಕ್‌ನಲ್ಲಿ ಇಬ್ಬರು ಚಾಲಕರು ಮತ್ತು ಒಬ್ಬ ಸಹಾಯಕ ಇದ್ದ ಎಂದು ಟ್ರಕ್‌ ಮಾಲೀಕರು ತಿಳಿಸಿದ್ದಾರೆ. ಅವರ ಹೆಸರುಗಳು ಈಗ ನಮಗೆ ತಿಳಿದಿದೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.

ಗುಜರಾತ್‌ನಲ್ಲಿ ಭಯಾನಕ ದುರಂತ, ಉಪ್ಪಿನ ಫ್ಯಾಕ್ಟರಿಯ ಗೋಡೆ ಕುಸಿದು 12 ಕಾರ್ಮಿಕರು ಸಾವು!
 

ಅಪಘಾತಕ್ಕೆ ಕಾರಣವೇನು ಎಂದು ಕೇಳಿದಾಗ ಅಪಘಾತ ಹೇಗೆ ಸಂಭವಿಸಿತು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸ್‌ ಅಧಿಕಾರಿ ಹೇಳಿದರು. ಕಾರ್ಮಿಕರು ಬ್ಯಾರಿಕೇಡ್‌ಗಳನ್ನು ಹಾಕಿದರು ಮತ್ತು ರಸ್ತೆಯಲ್ಲಿ ಬರುವ ವಾಹನವನ್ನು ಎಚ್ಚರಿಸಲು ರಿಫ್ಲೆಕ್ಟರ್‌ಗಳನ್ನು ಅಳವಡಿಸಿದ್ದರು. ಬಹುಶಃ ಟ್ರಕ್‌ ಚಾಲಕ ಮದ್ಯಪಾನ ಮಾಡಿರಬೇಕು ಅಥವಾ ನಿದ್ರೆ ಮಾಡಿರಬೇಕು ಇಲ್ಲವೇ ವಾಹನದ ನಿಯಂತ್ರಣ ತಪ್ಪಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿಯಲ್ಲಿ ಚಾಲಕನ ನಿಯಂತ್ರಣದ ತಪ್ಪಿ ಲಾರಿಯೊಂದು ಮೈಮೇಲೆ ಹರಿದ ಪರಿಣಾಮ 14 ವಲಸೆ ಕಾರ್ಮಿಕರು ಮತ್ತು 1 ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ನಡೆದಿತ್ತು. ವಲಸೆ ಕಾರ್ಮಿಕರ ತಂಡವೊಂದು ಸೂರತ್‌ನಿಂದ 60 ಕಿ.ಮೀ ದೂರದ ಕೊಸಂಬ ಎಂಬ ಹಳ್ಳಿಯ ಪಾದಚಾರಿ ಮಾರ್ಗದಲ್ಲಿ ಮಲಗಿತ್ತು. ಕಾರ್ಮಿಕರು ಮಲಗಿದ್ದ ಪಕ್ಕದ ರಸ್ತೆಯಲ್ಲೇ ಡಂಪರ್‌ ಟ್ರಕ್ಕೊಂದು ಕಿಮ್‌ನಿಂದ ಮಾಂಡ್ವಿಗೆ ಸಂಚಾರ ಬೆಳೆಸುತ್ತಿತ್ತು. ಅದೇ ಸಮಯದಲ್ಲಿ ಟ್ರಕ್‌ಗೆ ವಿರುದ್ಧ ದಿಕ್ಕಿನಲ್ಲಿ ಕಬ್ಬು ತುಂಬಿಕೊಂಡಿದ್ದ ಟ್ರ್ಯಾಕ್ಟರ್‌ ಬರುತ್ತಿತ್ತು. ಈ ನಡುವೆ ಕಬ್ಬಿನ ಜಲ್ಲೆಗಳು ಟ್ರ್ಯಾಕ್ಟರ್‌ನಿಂದ ಹೊರಗೆ ಚಾಚಿಕೊಂಡ ಪರಿಣಾಮ, ಅದು ಲಾರಿಗೆ ಬಡಿದಿದೆ. ಪರಿಣಾಮ ಲಾರಿಯ ಮುಂಭಾಗದ ಗಾಜು ಒಡೆದು, ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಲಾರಿ ಸೀದಾ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದಿದೆ. ಘಟನೆಯ ತೀವ್ರತೆಗೆ 12 ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!