ಚರ್ಚ್‌ನಲ್ಲಿ ಪ್ರಾರ್ಥನೆ ಹಿನ್ನೆಲೆ : ಟಿಟಿಡಿ ಅಧಿಕಾರಿ ಅಮಾನತು

Kannadaprabha News   | Kannada Prabha
Published : Jul 09, 2025, 04:29 AM IST
Tirupathi

ಸಾರಾಂಶ

ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್‌ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ತಿರುಮಲ: ತಿರುಪತಿ ವೆಂಕಟೇಶ್ವರ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳುವ ಟಿಟಿಡಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಪ್ರತಿ ಭಾನುವಾರ ಚರ್ಚ್‌ಗೆ ಹೋಗುತ್ತಿದ್ದುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಹಿಂದೂ ಧರ್ಮದ ಹೊರತಾಗಿ ಬೇರೆ ಧರ್ಮವನ್ನು ಪಾಲಿಸುವವರು ಟಿಟಿಡಿಯಲ್ಲಿ ಕೆಲಸ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ, ಪ್ರತಿ ಭಾನುವಾರ ಚರ್ಚ್‌ಗೆ ಹೋಗಿ ಕ್ರೈಸ್ತರ ಆಚರಣೆಗಳಲ್ಲಿ ಭಾಗಿಯಾಗುವ ಮೂಲಕ ರಾಜಶೇಖರ್‌ ಬಾಬು ಇದನ್ನು ಉಲ್ಲಂಘಿಸಿದ್ದರು ಎನ್ನಲಾಗಿದೆ.

ಬಾಬು ಅವರ ಚಲನವಲನದ ಮೇಲೆ ನಿಗಾ ವಹಿಸಿದ್ದ ಟಿಟಿಡಿಯ ಕಣ್ಗಾವಲು ವಿಭಾಗ ವರದಿ ಸಲ್ಲಿಸಿತ್ತು. ಅದರ ಬೆನ್ನಲ್ಲೇ ಅವರ ಅಮಾನತು ಆಗಿದೆ. ಇತ್ತೀಚಿನ ಕೆಲ ತಿಂಗಳಲ್ಲಿ ಅನ್ಯಧರ್ಮ ಪಾಲನೆ ಮಾಡುತ್ತಿದ್ದ ಹಲವು ಸಿಬ್ಬಂದಿಗೆ ಬೇರೆ ಇಲಾಖೆಗೆ ತೆರಳುವಂತೆ ಇಲ್ಲವೇ ಹುದ್ದೆ ತೆರೆಯುವಂತೆ ಟಿಟಿಡಿ ಸೂಚಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು