
ಚೆನ್ನೈ (ಮೇ.4): ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವು ಅಚ್ಚರಿಯ ಮುನ್ನಡೆ ಸಾಧಿಸಿದೆ. ಕೊಳತ್ತೂರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಿನ್ನಡೆ ಅನುಭವಿಸಿದ್ದಾರೆ. ಇವಿಎಂ ಮತ ಎಣಿಕೆ ಆರಂಭವಾದಾಗ ಅವರು 700 ಮತಗಳಿಂದ ಹಿಂದಿದ್ದರು. ಅಷ್ಟೇ ಅಲ್ಲ, ಉದಯನಿಧಿ ಸ್ಟಾಲಿನ್ ಕೂಡ ತಮ್ಮ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ. ಡಿಎಂಕೆ ಭದ್ರಕೋಟೆ ಎನಿಸಿದ ಚೆನ್ನೈ ಜಿಲ್ಲೆಯಲ್ಲೇ ಟಿವಿಕೆ ಅಲೆ ಜೋರಾಗಿ ಬೀಸುತ್ತಿದೆ. ತಿರುಚ್ಚಿ ಪೂರ್ವ ಕ್ಷೇತ್ರದಲ್ಲಿ ವಿಜಯ್ 1600 ಮತಗಳ ಮುನ್ನಡೆ ಗಳಿಸಿದ್ದಾರೆ.
ತಮಿಳುನಾಡಿನಲ್ಲಿ ಟಿವಿಕೆ ಪಕ್ಷವು ಎಲ್ಲರ ನಿರೀಕ್ಷೆ ಮೀರಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ, ಟಿವಿಕೆ 67, ಎಐಎಡಿಎಂಕೆ 52 ಮತ್ತು ಡಿಎಂಕೆ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ನಟ ವಿಜಯ್ ಸ್ಪರ್ಧಿಸಿರುವ ಎರಡು ಕ್ಷೇತ್ರಗಳಲ್ಲೂ ಮುನ್ನಡೆಯಲ್ಲಿದ್ದಾರೆ. ಈ ಫಲಿತಾಂಶವು ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ದೊಡ್ಡ ಆಘಾತ ನೀಡಿದ್ದು, ಪಕ್ಷವು ಮೂರನೇ ಸ್ಥಾನಕ್ಕೆ ಕುಸಿದಿದೆ. ಸಿಎಂ ಸ್ಟಾಲಿನ್, ಉದಯನಿಧಿ ಹಾಗೂ ಇಬ್ಬರು ಸಚಿವರು ಹಿನ್ನಡೆಯಲ್ಲಿದ್ದಾರೆ. ಪೆರಂಬೂರು ಕ್ಷೇತ್ರದಲ್ಲಿ ವಿಜಯ್ ಬರೋಬ್ಬರಿ 3000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ