
ಬೆಂಗಳೂರು(ಏ. 13) ಕೊರೋನಾ ಲಾಕ್ ಡೌನ್ ಮಧ್ಯೆ ಇಲ್ಲೊಂದು ಟ್ವಿಟರ್ ವಾರ್ ನಡೆದಿದೆ. ರಾಹುಲ್ ಗಾಂಧಿ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವೆ ಟ್ವಿಟರ್ ವಾರ್ ನಡೆದಿದೆ.
ಆರ್ಥಿಕ ವ್ಯವಸ್ಥೆಯ ಕುಸಿತ ಭಾರತದ ಕಾರ್ಫೊರೇಟ್ ವಲಯದ ಮೇಲೆ ಪರಿಣಾಮ ಬೀರುತ್ತಿದೆ. ದೇಶವೇ ಸಂಕಷ್ಟದಲ್ಲಿದ್ದು ಇಂಥ ಸಂದರ್ಭದಲ್ಲಿ ಯಾವುದೇ ವಿದೇಶಿ ದೈತ್ಯರು ನಮ್ಮ ದೇಶದ ಕಂಪನಿಗಳ ಮೇಲೆ, ಅಥವಾ ವಲಯದ ಮೇಲೆ ಹಿಡಿತ ಸಾಧಿಸಲು ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
ಇದಕ್ಕೆ ಕೌಂಟರ್ ಕೊಟ್ಟಿರುವ ಸಂಸದ ತೇಜಸ್ವಿ ಸೂರ್ಯ, ನಾನು ರಾಹುಲ್ ಗಾಂಧಿಯವರ ಮಾತಿಗೆ ಒಪ್ಪಿಗೆ ಸೂಚಿಸುತ್ತೇನೆ. ನಮ್ಮ ವಲಯಗಳ ಮೇಲೆ ವಿದೇಶಿ ಪ್ರಭಾವ ನಿಜಕ್ಕೂ ಅಪಾಯಕಾರಿ. ಕಾಂಗ್ರೆಸ್ ಪಕ್ಷ ಫಾರಿನ್ ಟೇಕ್ ಓವರ್ ಆಗಿದ್ದಕ್ಕೆ ದೇಶ ಹೇಗೆ ಕೆಟ್ಟ ಪರಿಣಾಮ ಎದುರಿಸುತ್ತಿದೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿಲ್ಲ ಎಂದಿದ್ದಾರೆ.
ಒಟ್ಟಿನಲ್ಲಿ ಒಂದು ಕಡೆ ದೇಶ ಮತ್ತು ಇಡೀ ಪ್ರಪಂಚ ಕೊರೋನಾ ಎಂಬ ಮಹಾಮಾರಿಯ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದರೆ ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿಯೂ ಸಹ ಇಂಥ ಸದ್ದುಗಳು ಆಗಾಗ ಕಂಡುಬರುತ್ತವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ