
ಅಹಮದಾಬಾದ್(ಮೇ.25): ಗುಜರಾತ್‌ನ ಅಮೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು 3ನೇ ಮಗು ಜನಿಸಿದ್ದಕ್ಕೆ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅರ್ಥಾತ್ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.
ಖೀಮಾ ಕಸೋಟಿಯಾ ಮತ್ತು ಮೇಘನಾ ಬೋಖಾ ಅವರೇ ಅನರ್ಹ ಬಿಜೆಪಿ ಸದಸ್ಯರು. ಇವರು ಅನರ್ಹರಾದರೂ ನಗರಪಾಲಿಕೆ ಬಿಜೆಪಿ ತೆಕ್ಕೆಯಲ್ಲೇ ಇರಲಿದೆ. ಏಕೆಂದರೆ ಅಷ್ಟು ಬಹುಮತ ಬಿಜೆಪಿಗೆ ಇದೆ. 2005-06 ರಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ 1963ರ ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ ಯಾವುದೇ ವ್ಯಕ್ತಿ ಪಂಚಾಯತ್, ಪುರಸಭೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಶನ್ ಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಿದ್ದರು. ಬಳಿಕ ಇನ್ನೊಂದು ತಿದ್ದುಪಡಿ ತಂದು ಅಧಿಕಾರಾವಧಿಯಲ್ಲಿ 3ನೇ ಮಗು ಜನಿಸಿದರೆ ಇವರು ಅನರ್ಹರಾಗಲಿದ್ದಾರೆ ಎಂಬ ಎಂಬ ನಿಯಮ ಸೇರಿಸಿದ್ದರು.
ಬ್ರಿಟಿಷರಂತೆ ಮೋದಿ ಲೂಟಿ: ಮಲ್ಲಿಕಾರ್ಜುನ ಖರ್ಗೆ
ಈ ನಡುವೆ ಇತ್ತೀಚೆಗೆ ವಜ್ರ ವ್ಯಾಪಾರಿಯೊಬ್ಬರು ಈ ಇಬ್ಬರೂ ಸದಸ್ಯರಿಗೆ ಮೂರನೇ ಮಗುವಾಗಿದೆ ಎಂದು ದೂರು ನೀಡಿದ್ದರು. ಈ ಪ್ರಕಾರ ಈಗ ಈ ಇಬ್ಬರ 3ನೇ ಮಗು ಜನಿಸಿದ ಮಾಹಿತಿ ಅಮೇಲಿ ಜಿಲ್ಲಾಧಿಕಾರಿಗೆ ದೊರಕಿದೆ. ಹೀಗಾಗಿ ಇಬ್ಬರನ್ನೂ ಅನರ್ಹ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ಈ ನಡುವೆ, ತಾವು ಸ್ಪರ್ಧಿಸುವಾಗ ತಮಗೆ 2 ಮಕ್ಕಳಿದ್ದವು. 3ನೇ ಮಗು ತಮ್ಮ ಆಯ್ಕೆ ನಂತರ ಆಗಿದೆ ಎಂದು ಈ ಇಬ್ಬರು ವಾದಿಸಿದರೂ ಅವರ ವಾದ ತಳ್ಳಿ ಹಾಕಿದ ಜಿಲ್ಲಾಧಿಕಾರಿ, ನಿಯಮಾನುಸಾರ, ಅಧಿಕಾರಾವಧಿಯಲ್ಲಿ 3ನೇ ಮಗು ಜನಿಸಿದರೂ ಅನರ್ಹರಾಗುತ್ತಾರೆ ಎಂದು ಹೇಳಿ ಇಬ್ಬರ ಸದಸ್ಯತ್ವವನ್ನೂ ರದ್ದು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ