
ರಸ್ತೆಯಲ್ಲಿ ಸಾಗುತ್ತಿದ್ದ ಹಾವನ್ನು ರಕ್ಷಿಸುವುದಕ್ಕೆ ಹೋಗಿ ಆಟೋವೊಂದು ಉರುಳಿ ಬಿದ್ದ ಪರಿಣಾಮ ಆಟೋದಲ್ಲಿದ್ದ ಎರಡು ಪುಟಾಣಿ ಮಕ್ಕಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಕೇರಳದ ಪಟ್ಟಣತಿಟ್ಟ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಕ್ಕಳನ್ನು 8 ವರ್ಷದ ಆದಿ ಲಕ್ಷ್ಮಿ ಹಾಗೂ 4 ವರ್ಷದ ಯದುಕೃಷ್ಣನ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಇದು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಆಗಿದ್ದು, ವಾಹನದ ಮುಂದೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದೆ. ಈ ವೇಳೆ ಹಾವನ್ನು ರಕ್ಷಿಸುವುದಕ್ಕೆ ಆಟೋ ಚಾಲಕ ಯತ್ನಿಸಿದಾಗ ನಿಯಂತ್ರಣ ತಪ್ಪಿದ ಆಟೋ ಆಳವಾದ ತೋಟಕ್ಕೆ ಉರುಳಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರೆ ಆಟೋ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಕ್ಕಳಲ್ಲಿ ಒಬ್ಬ ಮಗುವನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಆಟೋ ಪಲ್ಟಿ ಹೊಡೆದಾದಗ ಬಾಲಕಿ ಆದಿ ಲಕ್ಷ್ಮಿ ಮೇಲೆ ಉರುಳಿ ಬಿದ್ದಿದೆ ನಂತರ ಕೆಳಗಿನ ತೋಟಕ್ಕೆ ಬಿದ್ದಿದ್ದರಿಂದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆರಂಭದಲ್ಲಿ ಮತ್ತೊಬ್ಬ ಮಗು ಯದುಕೃಷ್ಣನ್ ತಪ್ಪಿಸಿಕೊಂಡು ಸುರಕ್ಷಿತವಾಗಿ ಮನೆಗೆ ಹೋಗಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ಅವರು ಮನೆಗೆ ತಲುಪಿಲ್ಲ ಎಂದು ಪೋಷಕರು ತಿಳಿಸಿದ ನಂತರ ಮಗುವಿಗಾಗಿ, ವ್ಯಾಪಕ ಹುಡುಕಾಟ ನಡೆಸಲಾಯಿತು.
ಇದನ್ನೂ ಓದಿ: ತಾನೇ ಸಾಕಿದ ಪಿಟ್‌ಬುಲ್ ಶ್ವಾನದ ದಾಳಿಗೆ ಕಾಲೇಜು ಯುವತಿ ಬಲಿ
ಗಂಟೆಗಳ ಹುಡುಕಾಟದ ನಂತರ, ಅಪಘಾತ ಸ್ಥಳದಿಂದ ಹಲವು ಮೀಟರ್ ದೂರದಲ್ಲಿ ಅವರನ್ನು ಪತ್ತೆ ಮಾಡಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ವೈದ್ಯರಿಗೂ ಉಳಿಸಲು ಸಾಧ್ಯವಾಗಲಿಲ್ಲ. ಘಟನೆಯಲ್ಲಿ ಪುಟ್ಟ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಗರ್ಭಿಣಿ, 6 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ