
ಕೇರಳದ ಕೊಲ್ಲಂನಲ್ಲಿರುವ ಸ್ಪೋರ್ಟ್ ಹಾಸ್ಟೆಲ್ಲೊಂದರಲ್ಲಿ ಇಬ್ಬರು ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರ ಸಾವಿನ ಬಗ್ಗೆ ಈಗ ಅನುಮಾನ ಮೂಡಿದೆ. ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನಲ್ಲಿ ಈ ಇಬ್ಬರು ಹುಡುಗಿಯರು ವಾಸಿಸುತ್ತಿದ್ದರು. ಆದರೆ ಈ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ ತಿರುವನಂತಪುರಂ ಜಿಲ್ಲೆಯ 15 ವರ್ಷದ ವೈಷ್ಣವಿ ಎಂದು ಗುರುತಿಸಲಾಗಿದೆ. ಮೃತ ಸಾಂಡ್ರಾ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದು, ಪ್ಲಸ್ ಟು(ದ್ವಿತೀಯ ಪಿಯುಸಿ) ವಿದ್ಯಾರ್ಥಿನಿಯಾಗಿದ್ದಾರೆ. ಹಾಗೆಯೇ ಶವವಾಗಿ ಪತ್ತೆಯಾಗಿರುವ ಮತ್ತೊರ್ವ ವಿದ್ಯಾರ್ಥಿನಿ ವೈಷ್ಣವಿ 10 ನೇ ತರಗತಿಯಲ್ಲಿ ಓದುತ್ತಿದ್ದು, ಕಬಡ್ಡಿ ಆಟಗಾರ್ತಿಯಾಗಿದ್ದರು.
ದಿನವೂ ಬೆಳಗಿನ ಜಾವ ನಡೆಯುವ ಕ್ರೀಡಾ ತರಬೇತಿ ಸಮಯಕ್ಕೆ ಹುಡುಗಿಯರು ಅಲ್ಲಿ ಬಾರದೇ ಹೋದಾಗ ಅಧಿಕಾರಿಗಳು ಹೋಗಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಅವರು ವಾಸವಿದ್ದ ಕೋಣೆಯ ಬಾಗಿಲನ್ನು ಪದೇ ಪದೇ ತಟ್ಟಿದರೂ ಉತ್ತರ ಬಾರದೇ ಹೋದಾಗ ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.
ಮೃತ ವೈಷ್ಣವಿ ಬೇರ ಕೋಣೆಯಲ್ಲಿ ವಾಸಿಸುತ್ತಿದ್ದರು ಆದರೆ ಬುಧವಾರ ರಾತ್ರಿ ಘಟನೆ ನಡೆದ ದಿನ ಅವರು ಸಾಂಡ್ರಾ ಅವರ ಕೋಣೆಯಲ್ಲಿ ಉಳಿದಿದ್ದರು. ಬೆಳಗ್ಗೆ ಇತರ ಹಾಸ್ಟೆಲ್ ವಾಸಿಗಳು ಇಬ್ಬರನ್ನೂ ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಲಂ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಮತ್ತು ಕೋಣೆಯಲ್ಲಿ ಯಾವುದೇ ಟಿಪ್ಪಣಿ ಕಂಡು ಬಂದಿಲ್ಲ ಎಂದು ಎಎಚ್‌ಒ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಹ ತರಬೇತಿದಾರರು, ತರಬೇತುದಾರರು ಮತ್ತು ಕುಟುಂಬ ಸದಸ್ಯರಿಂದ ಹೇಳಿಕೆಗಳನ್ನು ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆಗಳ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶೇಷ ಮನವಿ:
ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:
Sahai Helpline - 080 2549 7777
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ