ನಿಗೂಢ ಸ್ಫೋಟಕ್ಕೆ ಪ್ರಾಣ ತ್ಯಾಗ ಮಾಡಿದ ಇಬ್ಬರು ಯೋಧರು

Published : Oct 31, 2021, 01:18 AM ISTUpdated : Oct 31, 2021, 01:40 AM IST
ನಿಗೂಢ ಸ್ಫೋಟಕ್ಕೆ ಪ್ರಾಣ ತ್ಯಾಗ ಮಾಡಿದ ಇಬ್ಬರು ಯೋಧರು

ಸಾರಾಂಶ

* ಗಸ್ತು ಕಾರ್ಯಾಚರಣೆಯಲ್ಲಿದ್ದ ಸೈನಿಕರ ಬಲಿದಾನ * ಜಮ್ಮು ಮತ್ತು ಕಾಶ್ಂಇರದಲ್ಲಿ ನಿಗೂಢ ಸ್ಫೋಟ * ಸೇನಾ ಅಧಿಕಾರಿ ಮತ್ತು ಯೋಧ ಪ್ರಾಣ ತ್ಯಾಗ * ಉಗ್ರರ ಒಳನುಸುಳುವಿಕೆ ಅನುಮಾನ

ಶ್ರೀನಗರ (ಅ. 31)  ಜಮ್ಮು ಮತ್ತು ಕಾಶ್ಮೀರದಲ್ಲಿ(Jammu And Kashmir) ಇಬ್ಬರು ಸೈನಿಕರು (Indian Army personnel)ಹುತಾತ್ಮರಾಗಿದ್ದಾರೆ.  ನಿಗೂಢ ಸ್ಫೋಟದಲ್ಲಿ (explosion) ಭಾರತೀಯ ಸೇನೆಯ ಇಬ್ಬರು ಸೈನಿಕರು  ಪ್ರಾಣ ತ್ಯಾಗ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (LOC) ಬಳಿ ಶನಿವಾರ ನಿಗೂಢ ಸ್ಫೋಟವೊಂದು ಸಂಭವಿಸಿದೆ.  ಸ್ಫೋಟದಲ್ಲಿ ಸೇನಾ ಅಧಿಕಾರಿ ಮತ್ತು ಯೋಧ ಹುತಾತ್ಮರಾಗಿದ್ದಾರೆ.

ಚೀನಾ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧ

ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಶಂಕೆ ಈ ಮೊದಲಿನಿಂದಲೂ ಇತ್ತು.ಸೇನಾಪಡೆಯು ಗಸ್ತು ಕರ್ತವ್ಯದಲ್ಲಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಲೆಫ್ಟಿನೆಂಟ್ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಪ್ರಯೋಜನವಾಗಲಿಲ್ಲ.

ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸೆಪೆಯೋ ಮಂಜಿತ್ ಸಿಂಗ್  ಪ್ರಾಣ ತ್ಯಾಗ ಮಾಡಿದ್ದಾರೆ.  ಗಸ್ತು ತಂಡವನ್ನು ಗುರಿಯಾಗಿಸಲು ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನ ಬಳಸಿರಬಹುದು ಎಂದು  ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಒಂದು ಹಂತದ ಕಂಟ್ರೋಲ್ ಗೆ ಬಂದಿತ್ತು.  ಈ ನಡುವೆ ಸ್ಫೋಟ ಸಂಭವಿಸಿದ್ದು ಸೇನಾ ಕಾರ್ಯಾಚರಣೆ ನಡೆಯುತ್ತಲೇ ಇದೆ. 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು