
ನವದೆಹಲಿ (ಏ.5): ಉತ್ತರ ಪ್ರದೇಶದ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಮದರಸಾದಲ್ಲಿ ಕಲಿಯುತ್ತಿರುವ 17 ಲಕ್ಷ ವಿದ್ಯಾರ್ಥಿಗಳು ಹಾಗೂ 10 ಸಾವಿರ ಶಿಕ್ಷಕರನ್ನು ರಾಜ್ಯ ಶಿಕ್ಷಣ ವ್ಯವಸ್ಥೆಯೊಳಗೆ ಸೇರಿಸಿಕೊಳ್ಳಬೇಕು ಎನ್ನುವ ಅಲಹಾಬಾದ್ ಹೈಕೋರ್ಟ್ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ತೀರ್ಪು ತಡೆಹಿಡಿದಿದೆ. ಕಳೆದ ತಿಂಗಳು, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್, 2004 ಅನ್ನು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಿತು. ಔಪಚಾರಿಕ ಶಾಲಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿತ್ತು.
'ಘರ್ ಮೆ ಗುಸ್ ಕೆ ಮಾರೇಂಗೆ..' ಮೋದಿ ಹೇಳಿದ್ದನ್ನು ನಿಜ ಮಾಡಿತಾ ಭಾರತದ RAW?
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಈ ಕುರಿತಾಗಿ ನೋಟಿಸ್ ಜಾರಿ ಮಾಡಿದೆ. "ಮದರಸಾ ಮಂಡಳಿಯ ಉದ್ದೇಶವು ನಿಯಂತ್ರಕ ಸ್ವರೂಪದ್ದಾಗಿದೆ ಮತ್ತು ಅಲಹಾಬಾದ್ ಹೈಕೋರ್ಟ್ ಹೇಳಿದಂತೆ ಮದರಸಾ ಮಂಡಳಿಯು ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ ಎಂಬುದು ಪ್ರಾಥಮಿಕವಾಗಿ ಸರಿಯಾಗಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ