ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಿಲ್‌ಕ್ಯಾರಾ ಮತ್ತು ದಾಂಡಲ್‌ಗಾಂವ್ ಮಧ್ಯೆ ನಿರ್ಮಾಣ ಹಂತದಲ್ಲಿದ್ದ ರಾಷ್ಟ್ರೀಯ ಹೆದ್ದಾರಿಯ ಸುರಂಗದ ಒಂದು ಭಾಗ ಕುಸಿದು 40 ಮಂದಿ ಕಾರ್ಮಿಕರು ಕುಸಿತದಡಿ ಸಿಲುಕಿಕೊಂಡಿದ್ದಾರೆ.
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಿಲ್‌ಕ್ಯಾರಾ ಮತ್ತು ದಾಂಡಲ್‌ಗಾಂವ್ ಮಧ್ಯೆ ನಿರ್ಮಾಣ ಹಂತದಲ್ಲಿದ್ದ ರಾಷ್ಟ್ರೀಯ ಹೆದ್ದಾರಿಯ ಸುರಂಗದ ಒಂದು ಭಾಗ ಕುಸಿದು 40 ಮಂದಿ ಕಾರ್ಮಿಕರು ಕುಸಿತದಡಿ ಸಿಲುಕಿಕೊಂಡಿದ್ದಾರೆ. ಕಾರ್ಮಿಕರು ಸಿಲುಕಿರುವ ಜಾಗದಿಂದ ಸುರಂಗದ ಪ್ರವೇಶ ದ್ವಾರವು 200 ಮೀ. ದೂರದಲ್ಲಿದ್ದು, ಅವರಿಗೆ ಉಸಿರಾಟದ ತೊಂದರೆಯಾಗದಂತೆ ಆಕ್ಸಿಜನ್ ಪೈಪ್‌ಗಳನ್ನು ನೀಡಲಾಗಿದೆ. ಅಲ್ಲದೇ ಆಹಾರದ ಪೊಟ್ಟಣಗಳನ್ನು ಒದಗಿಸಲಾಗಿದ್ದು ಜೆಸಿಬಿ ಮತ್ತು ಡ್ರಿಲ್ಲಿಂಗ್ ಮಶಿನ್‌ಗಳಿಂದ 160 ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಬ್ರಹ್ಮಖಾಲ್- ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Brahmakhal-Yamunotri National Highway)ಭಾನುವಾರ ಮುಂಜಾನೆ 6 ರಿಂದ 7 ಗಂಟೆ ನಡುವೆ ಸುರಂಗದ ಒಂದು ಭಾಗ ದಿಢೀರನೇ ಕುಸಿದಿದೆ. ಈ ವೇಳೆ ಸ್ಥಳದಲ್ಲಿದ್ದ 40 ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ. ಅದಾಗ್ಯೂ 36 ಜನ ಕಾರ್ಮಿಕರು ಮಾತ್ರ ಸಿಲುಕಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ತಿಳಿಸಿದೆ.
ಭಾರತರತ್ನ ವಿಶ್ವೇಶ್ವರಯ್ಯ ನಿರ್ಮಿಸಿದ್ದ ಏಷ್ಯಾದ ಮೊಟ್ಟ ಮೊದಲ ನೀರಾವರಿ ಸುರಂಗ ಕಾಲುವೆಯ ಮೇಲ್ಭಾಗದ ಮಣ್ಣು ಕುಸಿತ
ಇನ್ನು ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (National Disaster Management Force) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸುರಂಗವು ಚಾರ್ ಧಾಮ್ ರಸ್ತೆ ಯೋಜನೆಯ ಭಾಗವಾಗಿದ್ದು, ಇದು ಉತ್ತರಕಾಶಿ ಮತ್ತು ಯಮುನೋತ್ರಿ (Uttarkashi and Yamunotri) ನಡುವಿನ ಪ್ರಯಾಣದ ಅವಧಿಯನ್ನು 26 ಕಿ.ಮೀಗಳಷ್ಟು ಕಡಿಮೆ ಮಾಡಲಿದೆ.
ಇಸ್ರೇಲ್ ಕಟ್ಟಿಹಾಕಲು ಸುರಂಗದಲ್ಲೇ ಹೊಂಚು ಹಾಕಿದ 40000 ಉಗ್ರರು: ಸುರಂಗಗಳಲ್ಲಿ ಶಸ್ತ್ರಾಸ್ತ್ರ, ಆಹಾರ ಸಂಗ್ರಹ