ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ವಾಹನದ ಗಾಜು ಪುಡಿ ಪುಡಿ!

Published : Aug 21, 2022, 09:29 PM IST
ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ವಾಹನದ ಗಾಜು ಪುಡಿ ಪುಡಿ!

ಸಾರಾಂಶ

ಬಿಹಾರದಲ್ಲಿ ಬಿಜೆಪಿ ಮೈತ್ರಿ ಕಡಿದು ಆರ್‌ಜೆಡಿ ಜೊತೆ ಸರ್ಕಾರ ರಚಿಸಿದ ಸಿಎಂ ನಿತೀಶ್ ಕುಮಾರ್‌ ಇದೀಗ ಕೆಲ ಭಾಗದಲ್ಲಿ ಭಾರಿ ವಿರೋಧಗಳು ವ್ಯಕ್ತವಾಗುತ್ತಿದೆ. ಇಂದು ಪಾಟ್ನಾದಲ್ಲೇ ನಿತೀಶ್ ಬೆಂಗಾವಲು ಪಡೆ ಕಾರಿನ ಮೇಲೆ ದಾಳಿಯಾಗಿದೆ. 

ಪಾಟ್ನಾ(ಆ.21):  ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಿ ಕೆಲ ದಿನಗಳು ಉರುಳಿದೆ. ಆದರೆ ರಾಜಕೀಯ ದಳ್ಳುರಿ ಮಾತ್ರ ಕಡಿಮೆಯಾಗಿಲ್ಲ. ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಆರ್‌ಜೆಡಿ ಜೊತೆ ಸೇರಿ ಸರ್ಕಾರ ರಚಿಸಿರುವ ಸಿಎಂ ನಿತೀಶ್ ಕುಮಾರ್‌ಗೆ ಇದೀಗ ದಾಳಿ ಆತಂಕ ಹೆಚ್ಚಾಗಿದೆ. ಇಂದು ನಿತೀಶ್ ಕುಮಾರ್ ಬೆಂಗಾವಲು ಪಡೆ ವಾಹನದ ಮೇಲೆ ಉದ್ರಿಕ್ತರ ಗುಂಪು ದಾಳಿ ಮಾಡಿದೆ. ಕಲ್ಲು ತೂರಾಟ, ಬಡಿಗೆಗಳಿಂದ ಹಿಡಿದು ವಾಹನಗಳ ಮೇಲೆ ದಾಳಿ ಮಾಡಲಾಗಿದೆ. ಅದೃಷ್ಠವಶಾತ್ ನಿತೀಶ್ ಕುಮಾರ್ ಇರಲಿಲ್ಲ. ಕೇವಲ ಬೆಂಗಾವಲು ಪಡೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರ ಗುಂಪು ದಾಳಿ ಮಾಡಿ ಪರಾರಿಯಾಗಿದೆ. ಸೊಹ್ಗಿ ವಲಯದಲ್ಲಿ ಈ ಘಟನೆ ನಡೆದಿದೆ. ಇದೀಗ ಪೊಲೀಸರು ಪ್ರದೇಶವನ್ನು ಸುತ್ತುವರಿದು ನಿಯಂತ್ರಕ್ಕೆ ತಂದಿದ್ದಾರೆ.

ಸೊಹ್ಗಿ ಪ್ರದೇಶದಲ್ಲಿ ಕಳೆದ ಕೆಲದಿನದಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿತ್ತು. ಇದು ಸೊಹ್ಲಿ ವಲಯದ ಗ್ರಾಮಸ್ಥರನ್ನು ರೊಚ್ಚಿಗೇಳುವಂತೆ ಮಾಡಿತ್ತು. ರಸ್ತೆ ತಡೆ ನಡೆಸಿ ಪ್ರತಿಭಟನೆಗಳನ್ನು ಮಾಡಿದ್ದಾರೆ. ಇದೇ ದಾರಿಯಲ್ಲಿ ತೆರಳುತಿದ್ದ ನಿತೀಶ್ ಕುಮಾರ್ ಬೆಂಗಾವಲು ಪಡೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲುಗಳಿಂದ ದಾಳಿ ಮಾಡಿದೆ. 

ಬಿಹಾರ ಸರ್ಕಾರದಲ್ಲಿ ಲಾಲೂ ದರ್ಬಾರ್‌, ಸರ್ಕಾರಿ ಸಭೆಯಲ್ಲಿ ಹಿರಿಯ ಅಳಿಯ ಭಾಗಿ!

ವಿಪಕ್ಷಗಳು ಬಯಸಿದರೆ ನಿತೀಶ್‌ ಪ್ರಧಾನಿ ಅಭ್ಯರ್ಥಿ: ಜೆಡಿಯು
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನುವ ಊಹಾಪೋಹಗಳ ನಡುವೆಯೇ, ‘ಇತರ ಪಕ್ಷಗಳು ಬಯಸಿದರೆ ನಿತೀಶ್‌ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ’ ಎಂದು ಜೆಡಿಯು ರಾಜ್ಯಾಧ್ಯಕ್ಷ ಲಲನ್‌ ಸಿಂಗ್‌ ಹೇಳಿದ್ದಾರೆ. ‘ನಿತೀಶ್‌ ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೆ ಇತರೆ ಪಕ್ಷಗಳು ಬಯಸಿದರೆ ಸ್ಪರ್ಧಿಸಬಹುದು. 2024ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವುದು ಸದ್ಯ ನಿತೀಶ್‌ರ ಮುಖ್ಯ ಗುರಿ. ಅವರು ಮುಂದಿನ ವಾರ ದೆಹಲಿಯಲ್ಲಿ ವಿವಿಧ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ’ ಎಂದು ಲಲನ್‌ ಹೇಳಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವ ವದಂತಿಗಳನ್ನು ಸ್ವತಃ ನಿತೀಶ್‌ ಅವರೇ ನಿರಾಕರಿಸಿದ್ದರು.

ಬಿಹಾರದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ನಿತೀಶ್‌ ಕುಮಾರ್‌ ಘೋಷಣೆ
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ನೀಡಿದ 10 ಲಕ್ಷ ಉದ್ಯೋಗ ಸೃಷ್ಟಿಭರವಸೆಯನ್ನು 20 ಲಕ್ಷಕ್ಕೆ ಏರಿಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸೋಮವಾರ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾವು ಒಟ್ಟಿಗೆ ಇದ್ದೇವೆ. ತೇಜಸ್ವಿಯಾದವ್‌ ನೀಡಿದ್ದ 10 ಲಕ್ಷ ಉದ್ಯೋಗ ಸೃಷ್ಟಿಭರವಸೆಯನ್ನು ನಾವು 20 ಲಕ್ಷಕ್ಕೆ ಏರಿಕೆ ಮಾಡುತ್ತಿದ್ದೇವೆ. ಸರ್ಕಾರಿ ಮತ್ತು ಖಾಸಗಿಯಾಗಿ ಈ ಗುರಿಯನ್ನು ತಲುಪಲು ನಾವು ಪ್ರಯಯತ್ನ ಮಾಡುತ್ತೇವೆ. ಇದು ಐತಿಹಾಸಿಕ ದಿನದಂದು, ಮುಖ್ಯಮಂತ್ರಿ ತೆಗೆದುಕೊಳ್ಳುತ್ತಿರುವ ಐತಿಹಾಸಿಕ ನಿರ್ಧಾರವಾಗಿದೆ. ಈ ದಿನಗಳಲ್ಲಿ ಉದ್ಯೋಗ ಸೃಷ್ಟಿಗಿಂತ ಮುಖ್ಯವಾದ ಬೇರೆಯ ವಿಷಯವಿಲ್ಲ’ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?