
ಡೆಹರಾಡೂನ್ (ಜನವರಿ 27, 2024): ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಐವರು ಸದಸ್ಯರ ಸಮಿತಿ ಕರಡು ಪ್ರತಿಯನ್ನು ಸಿದ್ಧಗೊಳಿಸಿದ್ದು, ಶೀಘ್ರವೇ ಸರ್ಕಾರಕ್ಕೆ ಹಸ್ತಾಂತರಿಸಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಹೇಳಿದ್ದಾರೆ.
ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗುವುದು. ಇದಾದ ಬಳಿಕ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಮದುವೆ, ವಿಚ್ಛೇದನ, ಭೂಮಿ, ಆಸ್ತಿ, ವಂಶಪಾರಂಪರ್ಯತೆಗೆ ಸಂಬಂಧಿಸಿದಂತೆ ಒಂದು ಕಾನೂನು ಚೌಕಟ್ಟನ್ನು ಯುಸಿಸಿ ರಚಿಸಲಿದೆ. ಅಲ್ಲದೇ ಇದು ಸಾಮಾಜಿಕ ಸಾಮರಸ್ಯವನ್ನು ಮೂಡಿಸಿ, ಲಿಂಗಾಧಾರಿತ ತಾರತಮ್ಯವನ್ನು ಹೋಗಲಾಡಿಸುತ್ತದೆ ಎಂದು ಅವರು ಹೇಳಿದರು.
ಇದನ್ನು ಓದಿ: ಇಸ್ಲಾಮಿಕ್ ದೇಶಗಳಲ್ಲೂ ಸುಧಾರಣೆಯಾಗ್ತಿದೆ ವೈಯಕ್ತಿಕ ಕಾನೂನು: ಭಾರತದಲ್ಲಿ ಮಾತ್ರ Uniform Civil Codeಗೆ ತೀವ್ರ ವಿರೋಧ
ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡುವುದಾಗಿ 2022ರ ಫೆಬ್ರವರಿಯಲ್ಲಿ ಧಾಮಿ ಘೋಷಿಸಿದ್ದರು. ಇದಾದ ಬಳಿಕ ಸರ್ಕಾರ ರಚನೆ ಮಾಡಿ ಮೊದಲ ಸಂಪುಟ ಸಭೆಯಲ್ಲಿಯೇ ಯುಸಿಸಿಗೆ ಅಂಗೀಕಾರ ನೀಡಿದ್ದರು. ಇದಾದ ಬಳಿಕ 5 ಮಂದಿಯ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ 60ಕ್ಕೂ ಹೆಚ್ಚು ಸಭೆ ನಡೆಸಿದ್ದು, 60 ಸಾವಿರಕ್ಕೂ ಹೆಚ್ಚು ಜನರ ಜೊತೆ ಸಂವಾದ ನಡೆಸಿ 2.3 ಲಕ್ಷ ಸಲಹೆಗಳನ್ನು ಸ್ವೀಕರಿಸಿತ್ತು.
ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಬಗ್ಗೆ ನೆಹರೂ ಸಲಹೆ ಹಂಚಿಕೊಂಡ ಶಶಿ ತರೂರ್: ಕಾಂಗ್ರೆಸ್ ನಿಲುವು ಹೀಗಿದೆ..
ಏಕರೂಪ ಸಂಹಿತೆಗೆ ಬಿಜೆಪಿ ಮಿತ್ರ ಪಕ್ಷದಲ್ಲೇ ವಿರೋಧ:
ಅಲ್ಪಸಂಖ್ಯಾತರ ಹೊರಗಿಡಿ ಎಂದ ಮುಸ್ಲಿಂ ಬೋರ್ಡ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ