ಉಚಿತ ಯೋಜನೆಗಳಿಂದ ಕರ್ನಾಟಕದ ಬಳಿ ದುಡ್ಡೇ ಇಲ್ಲ: ನಿರ್ಮಲಾ ಸೀತಾರಾಮನ್

Published : Feb 03, 2025, 06:06 AM IST
ಉಚಿತ ಯೋಜನೆಗಳಿಂದ ಕರ್ನಾಟಕದ ಬಳಿ ದುಡ್ಡೇ ಇಲ್ಲ: ನಿರ್ಮಲಾ ಸೀತಾರಾಮನ್

ಸಾರಾಂಶ

ಕಾಂಗ್ರೆಸ್‌ ಆಡಳಿತದ ಕರ್ನಾಟಕ ಮತ್ತು ಹಿಮಾಚಲ ಪ್ರದೇಶಗಳು ಉಚಿತ ಯೋಜನೆಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಟೀಕಿಸಿದ್ದಾರೆ. ಚುನಾವಣಾ ಭರವಸೆಗಳನ್ನು ಈಡೇರಿಸಲು ಈ ರಾಜ್ಯಗಳು ಹೆಣಗಾಡುತ್ತಿವೆ ಎಂದು ಅವರು ಹೇಳಿದ್ದಾರೆ. ಈ ಘೋಷಣೆಗಳು ಇಂದಿನ ಪೀಳಿಗೆಯಿಂದ ಹಣ ಪಡೆದು ಮುಂದಿನವರ ಮೇಲೆ ಹೊರೆಯನ್ನು ಹಾಕಿದಂತೆ ಎಂದು ಎಚ್ಚರಿಸಿದ್ದಾರೆ.

ನವದೆಹಲಿ (ಫೆ.3) : ‘ಕಾಂಗ್ರೆಸ್‌ ಆಡಳಿತದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಜಾರಿಗೆ ತಂದಿರುವ ಉಚಿತ ಯೋಜನೆಗಳಿಗೆ ಹಣ ನೀಡಲು ಅಲ್ಲಿನ ಸರ್ಕಾರಗಳ ಬಳಿ ಹಣವಿಲ್ಲ. ಅವುಗಳು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಟೀಕಿಸಿದ್ದಾರೆ.

 ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ದೆಹಲಿಯಲ್ಲಿ ಬಿಜೆಪಿ ಕೂಡ ಹಲವು ಉಚಿತಗಳನ್ನು ಘೋಷಿಸಿರುವ ಹೊತ್ತಿನಲ್ಲೇ ಸುದ್ದಿಸಂಸ್ಥೆ ಪಿಟಿಐ ಸಂದರ್ಶನದಲ್ಲಿ ಮಾತನಾಡಿರುವ ನಿರ್ಮಲಾ, ‘ಇಂತಹ ಉಚಿತಗಳ ಘೋಷಣೆ ಮಾಡುವ ಮುನ್ನ ರಾಜ್ಯದ ಆರ್ಥಿಕ ಸಾಮರ್ಥ್ಯದ ಕುರಿತು ಅಧ್ಯಯನ ಮಾಡುವುದು ಅಗತ್ಯ. ಇಂತಹ ತಯಾರಿಯನ್ನು ಬಿಜೆಪಿ ಆಡಳಿತ ಇರುವ ರಾಜ್ಯಗಳು ಮಾಡಿಯೇ ಉಚಿತ ಯೋಜನೆಗಳನ್ನು ಘೋಷಿಸುತ್ತವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೆಹರೂ ಅವಧೀಲಿ ₹12 ಲಕ್ಷಕ್ಕೆ ಶೇ.25ರಷ್ಟು, ಇಂದಿರಾ ಸರ್ಕಾರದಲ್ಲಿ 10 ಲಕ್ಷ ತೆರಿಗೆ ಪಾಲಾಗುತ್ತಿತ್ತು: ಪ್ರಧಾನಿ ಮೋದಿ ತಿರುಗೇಟು

‘ಬಿಜೆಪಿ ಆಡಳಿತ ಇರುವ ಯಾವ ರಾಜ್ಯವನ್ನು ಬೇಕಾದರೂ ನೋಡಿ. ಚುನಾವಣೆ ಸಮಯದಲ್ಲಿ ಅವುಗಳು ಮಾಡುವ ಘೋಷಣೆಗಳು ಬಜೆಟ್‌ಗೆ ಅನುಗುಣವಾಗಿರುತ್ತವೆ. ಆದರೆ ಹಿಮಾಚಲ ಹಾಗೂ ಕರ್ನಾಟಕ ರಾಜ್ಯಗಳು ದೊಡ್ಡದೊಡ್ಡ ಭರವಸೆಗಳನ್ನು ನೀಡಿ, ಅವುಗಳನ್ನು ಈಡೇರಿಸಲು ಹೆಣಗಾಡುತ್ತಿವೆ. ಆರ್ಥಿಕವಾಗಿ ಸಾಕಷ್ಟು ಉತ್ತಮ ಸ್ಥಿತಿಯಲ್ಲೇ ಇದ್ದ ಕರ್ನಾಟಕ, ಹಿಮಾಚಲದಂಥ ರಾಜ್ಯಗಳು ಈಗ ಹಣಕಾಸಿನ ಸಮಸ್ಯೆ ಎದುರಿಸುತ್ತಿವೆ’ ಎಂದರು.

ಇದನ್ನೂ ಓದಿ: ಇದನ್ನೂ ಓದಿ: ಚೀನಾ ಕೆನಡಾಕ್ಕೆ ಟ್ರಂಪ್ ತೆರಿಗೆ ಏಟು, ಭಾರತ ಪಾರು! ಪ್ರಧಾನಿ ಮೋದಿಯ ಈ ಗಟ್ಟಿ ನಿರ್ಧಾರ ತೆರಿಗೆ ಹೆಚ್ಚಿಸಲು ಅಮೆರಿಕಕ್ಕೆ ಭಯ?

ಜೊತೆಗೆ, ‘ಒಂದೊಮ್ಮೆ ಈ ಘೋಷಣೆಗಳು ಬಹುಮತದಿಂದಾಗಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದರೂ, ಇಂದಿನ ಪೀಳಿಗೆಯಿಂದ ಹಣ ಪಡೆದು ಮುಂದಿನವರ ಮೇಲೆ ಅದರ ಹೊರೆಯನ್ನು ಹಾಕಿದಂತೆ’ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..