ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; 50 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರಿಗೆ ಶುಭ ಸುದ್ದಿ

Published : Oct 29, 2025, 08:00 AM IST
Union Cabinet

ಸಾರಾಂಶ

8th Central Pay Commission :ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗದ ನಿಯಮಗಳಿಗೆ ಒಪ್ಪಿಗೆ ನೀಡಿದ್ದು, ಇದು 50 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರ ವೇತನ ಪರಿಷ್ಕರಣೆಗೆ ದಾರಿ ಮಾಡಿಕೊಟ್ಟಿದೆ. 

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ, ಭತ್ಯೆ ಹೆಚ್ಚಳ ಮೊದಲಾದ ವಿಷಯದಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡುವ 8ನೇ ವೇತನ ಆಯೋಗದ ಉಲ್ಲೇಖದ ನಿಯಮಗಳಿಗೆ (ಟಿಒಆರ್‌) ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಒಪ್ಪಿಗೆ ನೀಡಿದೆ.

ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ 69 ಲಕ್ಷ ನಿವೃತ್ತರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ. ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾ.ರಂಜನಾ ಪ್ರಕಾಶ್‌ ದೇಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ಐಐಎಂನ ಪ್ರೊ.ಪುಲಕ್‌ ಘೋಷ್‌ ಮತ್ತು ಎಂಪಿಎನ್‌ಜಿ ಕಾರ್ಯದರ್ಶಿ ಪಂಕಜ್‌ ಜೈನ್‌ ಅವರು ಆಯೋಗದ ಸದಸ್ಯರಾಗಿರಲಿದ್ದಾರೆ.

ಜ.1ರಿಂದಲೇ ಶಿಫಾರಸುಗಳು ಜಾರಿಗೆ ಬರುವ ನಿರೀಕ್ಷೆ

ಆಯೋಗ ರಚನೆಯಾದ 18 ತಿಂಗಳೊಳಗಾಗಿ ತನ್ನ ಶಿಫಾರಸ್ಸನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಮುಂದಿನ ವರ್ಷ ಜ.1ರಿಂದಲೇ ಶಿಫಾರಸುಗಳು ಜಾರಿಗೆ ಬರುವ ನಿರೀಕ್ಷೆ ಇದೆ. ಈ ವರ್ಷ ಜನವರಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎಂಟನೇ ವೇತನ ಆಯೋಗ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು.

 

 

ರೈತರಿಗೆ ಕೇಂದ್ರ ಗಿಫ್ಟ್‌: ರಸಗೊಬ್ಬರದ ಸಬ್ಸಿಡಿ ₹37000 ಕೋಟಿಗೇರಿಕೆ

ಹಿಂಗಾರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಯೂರಿಯಾಯೇತರ ಗೊಬ್ಬರಗಳಾದ ರಂಜಕ ಮತ್ತು ಗಂಧಕಗಳ ಮೇಲಿನ ಸಹಾಯಧನ ಪ್ರಮಾಣವನ್ನು 14,000 ಕೋಟಿ ರು.ನಷ್ಟು ಹೆಚ್ಚಿಸಿದ್ದು, 37,952 ಕೋಟಿ ರು.ಗೆ ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌, ‘ಕೇಜಿ ರಂಜಕದ ಮೇಲೆ ಹಾಲಿ ನೀಡಲಾಗುತ್ತಿದ್ದ 43.60 ರು. ಸಹಾಯಧನವನ್ನು 47.96 ರು.ಗೆ ಏರಿಸಲಾಗಿದೆ. ಗಂಧಕ ಸಹಾಯಧನವನ್ನು 1.77 ರು. ನಿಂದ 2.87 ರು.ಗೆ ಹೆಚ್ಚಿಸಲಾಗಿದೆ. ಈ ವರ್ಷದ ಸಹಾಯಧನದ ಮೊತ್ತವನ್ನು 24000 ಕೋಟಿ ರು.ನಿಂದ 14000 ಕೋಟಿ ರು.ಹೆಚ್ಚಿಸಿ 37952 ಕೋಟಿ ರು.ಗೆ ನಿಗದಿಪಡಿಸಲಾಗಿದೆ’ ಎಂದು ತಿಳಿಸಿದರು.

 

 

ಇದನ್ನೂ ಓದಿ: 2028ರ ಚುನಾವಣೆಯಲ್ಲೂ ಸ್ಪರ್ಧಿಸುವಂತೆ ನನಗೆ ಒತ್ತಡವಿದೆ: ಸಿದ್ದರಾಮಯ್ಯ ಹೇಳಿಕೆ ಸಂಚಲನ

ಇದನ್ನೂ ಓದಿ: ಮದುವೆಯಲ್ಲಿ ವಧು ಧರಿಸುವ ಚಿನ್ನಾಭರಣಕ್ಕೆ ಮಿತಿ ಹೇರಿದ ಗ್ರಾಮ; ನಿಯಮ ಉಲ್ಲಂಘಿಸಿದ್ರೆ 50 ಸಾವಿರ ದಂಡ

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ