
ನವದೆಹಲಿ(ಫೆ.25): ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದ ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣ ಸಾಮಿ ಸರ್ಕಾರ ಪತನದ ಬೆನ್ನಲ್ಲೇ, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಮೇಲೆ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ.
ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಪತನದ ಬಳಿಕ ಯಾವೊಂದು ಪಕ್ಷವೂ ಸರ್ಕಾರ ರಚನೆಗೆ ಮುಂದೆ ಬಂದಿಲ್ಲ. ಹೀಗಾಗಿ ಪುದುಚೇರಿ ಮೇಲೆ ರಾಷ್ಟ್ರಪತಿ ಆಳ್ವಿಕೆ ಮಾಡಬೇಕೆಂಬ ಅಲ್ಲಿನ ಉಪ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಈ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅಂಗೀಕಾರ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ರಾಷ್ಟ್ರಪತಿಗಳ ಅನುಮೋದನೆ ಬಳಿಕ ಪುದುಚೇರಿ ವಿಧಾನಸಭೆಯನ್ನು ವಿಸರ್ಜಿಸಲಾಗುತ್ತದೆ ಎಂದರು.
ತನ್ಮೂಲಕ ನಾರಾಯಣಸಾಮಿ ರಾಜೀನಾಮೆ ಬಳಿಕ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯಲ್ಲಿ ಸರ್ಕಾರ ರಚನೆಯಾಗಬಹುದೆಂಬ ಕುತೂಹಲಕ್ಕೆ ತೆರೆಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ