
ನವದೆಹಲಿ (ಅ.13) ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಎಲ್ ಮುರುಗನ್ ನಿರ್ಧರಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್ ಮುರುಗನ್ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಎಲ್ ಮುರುಗನ್ ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. 2029ರ ಲೋಕಸಭಾ ಚಟುನಾವಣೆಗೆ ಬಿಜೆಪಿ ಪಕ್ಷವನ್ನು ಬಲಪಡಿಸಲು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸಿ ಬಲಿಷ್ಠ ಪಕ್ಷವನ್ನಾಗಿ ಮಾಡುವ ಇಂಗಿತವನ್ನು ಎಲ್ ಮುರುಗನ್ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಚಿವ ಜವಾಬ್ದಾರಿಗಳಿಂದ ಬಿಡುಗಡೆ ಮಾಡುವಂತೆ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿಗೆ ಬರದೆ ಪತ್ರದಲ್ಲಿ ಎಲ್ ಮುರುಗನ್ ಭಾವುಕರಾಗಿದ್ದಾರೆ. ತಮ್ಮ ರಾಜಕೀಯ ಪಣಯವನ್ನು ನೆನಪಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ತಮಿಳುನಾಡಿಗೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ನನ್ನ ಅತೀ ದೊಡ್ಡ ಭಾಗ್ಯ ಎಂದುಕೊಂಡಿದ್ದೇನೆ. ತಮಿಳುನಾಡಿನ ಗುಗ್ರಾಮ ಕೋನೂರಿನಲ್ಲಿ ದಿನಗೂಲಿ ಕಾರ್ಮಿಕರಾಗಿ, ದನ ಮೇಯಿಸುತ್ತಿದ್ದ ಪೋಷಕರ ಮಗನಾದ ನಾನು ದೇಶದ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮಾಡಿಕೊಟ್ಟಿದ್ದಾರೆ. ನನ್ನ ಪೋಷಕರು ಮಗ ದೇಶದ ಸಚಿವನಾಗುತ್ತಾನೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಎಲ್ ಮುರುಗನ್ ಹೇಳಿಕೊಂಡಿದ್ದಾರೆ.
ಶ್ಯಾಮ್ ಪ್ರಸಾದ್ ಮುಖರ್ಜಿಯಿಂದ ಪ್ರೇರಿತವಾಗಿ ಕಾಲೇಜು ದಿನಗಳಲ್ಲಿ ಎಬಿವಿಪಿ ಸೇರಿಕೊಂಡು ಕಳೆದ 30 ವರ್ಷಗಳಿಂದ ದೇಶಕ್ಕಾಗಿ ದುಡಿದ್ದೇನೆ. ಕಳೆದ ಐದು ವರ್ಷಗಳಿಂದ ಮೋದಿ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಧಾನಿ ಮೋದಿ ಆಡಳಿತ, ಕಾರ್ಯವೈಖರಿ, ತಾಳ್ಮೆ, ಕುರಣೆ, ಸಮರ್ಪಣಾ ಮನೋಭಾವವನ್ನು ಹತ್ತಿರದಿಂದ ನೋಡಿದ್ದೇನೆ, ಪ್ರೇರಿತನಾಗಿದ್ದೇನೆ ಎಂದು ಎಲ್ ಮುರುಗನ್ ಹೇಳಿದ್ದಾರೆ. ಮೋದಿ ಆಡಳಿತದಲ್ಲಿ ತಮಿಳುನಾಡಿನ ಅಭಿವೃದ್ಧಿ, ತಮಿಳುನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ