
ಬೆಂಗಳೂರು(ಫೆ.21): ಕರ್ನಾಟಕ(Karnataka) ಸೇರಿದಂತೆ ಭಾರತದಲ್ಲಿ ಇದೀಗ ಶಿವಮೊಗ್ಗದಲ್ಲಿ(Shivamogga) ನಡೆದ ಹರ್ಷಾ ಕೊಲೆ ಪ್ರಕರಣಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ ನಾಯಕರು, ಬಿಜೆಪಿ ನಾಯಕರು, ಸಚಿವರು ಕೊಲೆ ಖಂಡಿಸಿದ್ದಾರೆ. ಇದೇ ವೇಳೆ ಕೊಲೆ ಹಿಂದಿನ ದುಷ್ಟರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. ಇದೀಗ ಕೇಂದ್ರ ಸಚಿವ ರಾಜೀವ್ ಚಂದ್ರಶೇಕರ್(Rajeev Chandrasekhar) ಹರ್ಷಾ ಕೊಲೆ(Harsha Murder) ಖಂಡಿಸಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಅಮಾನುಷ ಶಕ್ತಿಗಳನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ 26ರ ಹರೆಯದ ಬಜರಂಗದಳದ(Bajarangdal) ಯುವ ಸದಸ್ಯ ಹರ್ಷಾ ಯುವಕನ ಕೊಲೆ ಖಂಡನಾರ್ಹ. ಹರ್ಷ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ಕೊಲೆ ಕೃತ್ಯದ ಹಿಂದಿರುವ ಅಮಾನುಷ ಶಕ್ತಿಗಳನ್ನು ತಕ್ಷಣವೇ ಬಂಧಿಸಿ, ಕರ್ನಾಟಕ ಸರ್ಕಾರ ನ್ಯಾಯ ಒದಗಿಸಬೇಕು ಎಂದು ರಾಜೀವ್ ಚಂದ್ರಶೇಕರ್ ಟ್ವೀಟ್ ಮಾಡಿದ್ದಾರೆ.
2 ವರ್ಷದ ಹಿಂದೆಯೇ ಆ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಘೋಷಣೆ, ಎಚ್‌ಡಿಕೆ ಸ್ಫೋಟಕ ಮಾಹಿತಿ
ಕೊಲೆ ಘಟನೆಯಿಂದ ಶಿವಮೊಗ್ಗದಲ್ಲಿ ಗಲಭೆ, ಹಿಂಸಾಚಾರ ಘಟನೆಗಳು ನಡೆದಿದೆ. ಹೀಗಾಗಿ ರಾಜೀವ್ ಚಂದ್ರಶೇಕರ್ ಶಾಂತಿ ಪಾಲನೆಗೆ ಆಗ್ರಹಿಸಿದ್ದಾರೆ. ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಂತಿ ಕಾಪಾಡುವ ಮೂಲಕ ಸರ್ಕಾರ ತನಿಖೆಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಲು ಸಹಕರಿಸಬೇಕು ಎಂದು ರಾಜೀವ್ ಚಂದ್ರಶೇಕರ್ ಮನವಿ ಮಾಡಿದ್ದಾರೆ.
ಹರ್ಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಮೂವರನ್ನು ಬಂಧಿಸಲಾಗಿದೆ. ತನಿಖೆ ಚುರುಗೊಳಿಸಲಾಗಿದೆ. ತನಿಖೆ ಪ್ರಾಥಮಿಕ ಹಂತದಲ್ಲಿರುವ ಕಾರಣ ಬಂಧಿಸಿರುವ ಆರೋಪಿಗಳ ಮಾಹಿತಿ ಸೇರಿದಂತೆ ಪ್ರಕರಣದ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಹರ್ಷ ಅಂತಿಮ ವಿಧಿ-ವಿಧಾನ, ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ, ಜೈ ಶ್ರೀರಾಮ್ ಎಂದ ಕಾರ್ಯಕರ್ತರು
ಪೊಲೀಸರು ಬಂಧಿಸಿರುವ ಆರೋಪಿಗಳ ಕುರಿತು ಅಂತಿಮ ವರದಿ ಕೈಸೇರಿಲ್ಲ. ವಿಚಾರಣೆಯ ಭಾಗವಾಗಿ ಕೆಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕೆಲ ಮಾಹಿತಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಶೀಘ್ರದಲ್ಲೇ ಪ್ರಕರಣ ಕುರಿತು ಮಾಹಿತಿ ಬಯಲಾಗಲಿದೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇದೇ ವೇಳೆ ಹರ್ಷಾ ಮನೆಗೆ ಭೇಟಿ ನೀಡಿದ ಅರಗ ಜ್ಞಾನೇಂದ್ರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹರ್ಷ ಪೋಷಕರು, ಸಹೋದರಿ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ವೇಳೆ ಕೊಲೆಗೆ ನ್ಯಾಯ ಒದಗಿಸಲು ಹರ್ಷ ಕುಟುಂಬ ಆಗ್ರಹಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸೂಕ್ತ ನ್ಯಾಯ ಒದಗಿಸುತ್ತೇವೆ ಎಂದು ಹರ್ಷಾ ಕುಟುಂಬಕ್ಕೆ ಅರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಹರ್ಷ ಕೊಲೆ ಪ್ರಕರಣ ವಿವರ:
ಶಿವಮೊಗ್ಗದ ಹರ್ಷಾ ಬಜರಂಗದಳದ ಸಕ್ರಿಯ ಸದಸ್ಯರಾಗಿದ್ದರು. ಹಿಂದೂ ಪರ ಕಾರ್ಯಕ್ರಮಗಳಲ್ಲಿ ಸಕ್ರಿಯಯವಾಗಿ ಪಾಲ್ಗೊಳ್ಳುತ್ತಿದ್ದ ಹರ್ಷಾ ನಿನ್ನೆ ರಾತ್ರಿ(ಫೆ.21) ಕೊಲೆಯಾಗಿದ್ದರು. ತೀರ್ಥಹಳ್ಳಿ ರಸ್ತೆಯ ಭಾರತಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕೊಲೆ ಘಟನೆಯಿಂದ ಶಿವಮೊಗದ್ದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ 144 ಸೆಕ್ಷನ್ ಹೇರಲಾಗಿದೆ.
ಶೋಭಾ ಕರಂದ್ಲಾಜೆ ಸರ್ಕಾರಕ್ಕೆ ಮನವಿ
ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಕೂಡ ಹರ್ಷಾ ಕೊಲೆ ಖಂಡಿಸಿದ್ದಾರೆ. ಇದೇ ವೇಳೆ ಘಟನೆ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಕರಂದ್ಲಾಜೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಈ ಕೊಲೆ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೈವಾಡದ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ