ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಯಿಂದ ಬಿಡುಗಡೆ; ಮಾಧ್ಯಮಕ್ಕೆ ಪ್ರತಿಕ್ರಿಯೆ!

Published : Jan 05, 2021, 07:34 PM IST
ಕೇಂದ್ರ ಸಚಿವ ಸದಾನಂದ ಗೌಡ ಆಸ್ಪತ್ರೆಯಿಂದ ಬಿಡುಗಡೆ; ಮಾಧ್ಯಮಕ್ಕೆ ಪ್ರತಿಕ್ರಿಯೆ!

ಸಾರಾಂಶ

ಆರೋಗ್ಯದಲ್ಲಿ ಏರುಪೇರಾದ ಕಾರಣ ದಿಢೀರ್ ಆಸ್ಪತ್ರೆ ದಾಖಲಾಗಿದ್ದ ಕೇಂದ್ರ ಸಚಿವ ಸದಾನಂದ ಗೌಡ ಚೇತರಿಸಿಕೊಂಡಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು(ಜ.05): ಲೋ ಶುಗರ್‌ ಕಾರಣ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಸದಾನಂದ ಗೌಡ ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ದರು.  ಜನವರಿ 3ರಿಂದ ಚಿಕಿತ್ಸೆ ಪಡೆಯುತ್ತಿದ್ದ ಸದಾನಂದ ಗೌಡರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  

ಆರೋಗ್ಯ ಕುರಿತಂತೆ‌ ಟ್ವೀಟ್ ಮೂಲಕ ಮಾಹಿತಿ ನೀಡಿದ ಸದಾನಂದ ಗೌಡ

ಆರಾಮಾಗಿ ನಾನೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದೇನೆ. ಒಂದೆರಡು ದಿನ ಮನೆಯಲ್ಲಿ ವಿಶ್ರಾಂತಿ ಪಡೆದು ಬಜೆಟ್ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಉತ್ತಮ ಸೇವೆ ಒದಗಿಸಿದ ವೈದ್ಯರು ಮತ್ತಿತರ ಅರೋಗ್ಯ ಸಿಬ್ಬಂದಿ ಹಾಗೂ ನನ್ನ ಆರೋಗ್ಯಕ್ಕಾಗಿ ಹಾರೈಸಿದ ಸ್ನೇಹಿತರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಸದಾನಂದ ಗೌಡರು ಟ್ವೀಟ್ ಮಾಡಿದ್ದಾರೆ.

 

ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗ ತೆರಳಿದ್ದ ಸದಾನಂದ ಗೌಡರು, ಲೋ ಶುಗರ್‌ನಿಂದ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸ್ಥಳೀಯ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳದ ಬಳಿ ಇರುವ ಹಾಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಸದಾನಂದ ಗೌಡರು ವಿಶ್ರಾಂತಿಗೆ ಪಡೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌