
ಬೆಂಗಳೂರು(ಜು.08): ನಿರೀಕ್ಷೆಯಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಸಂಪುಟದಿಂದ ನಿರ್ಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ
ಸದಾನಂದಗೌಡರು ಮೋದಿ ಸಂಪುಟದಲ್ಲಿ ಸತತವಾಗಿ ಏಳು ವರ್ಷಗಳ ಕಾಲ ಸಂಪುಟ ದರ್ಜೆ ಸಚಿವರಾಗಿ ಕೆಲಸ ಮಾಡಿದರು. 2014ರಲ್ಲಿ ರೇಲ್ವೆ ಖಾತೆ ನೀಡಲಾಗಿತ್ತು. ಆದರೆ, ತಮಗೆ ನೀಡಿದ್ದ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸಲಿಲ್ಲ ಎಂಬ ಕಾರಣಕ್ಕಾಗಿ ಕೆಲವೇ ತಿಂಗಳಲ್ಲಿ ಆ ಖಾತೆ ವಾಪಸ್ ಪಡೆದುಕೊಂಡು ಕಾನೂನು ಮತ್ತು ನ್ಯಾಯಾಂಗ ಖಾತೆ ನೀಡಲಾಯಿತು. ಅದರಲ್ಲೂ ಸರಿಯಾದ ಸಾಧನೆ ತೋರಲಿಲ್ಲ ಎಂಬ ಉದ್ದೇಶದಿಂದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಕೊಡಲಾಯಿತು. ನಂತರ 2019ರ ಚುನಾವಣೆ ಬಳಿಕ ಎರಡನೇ ಬಾರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಯಿತು. ಹಂತ ಹಂತವಾಗಿ ಅವರಿಗೆ ಹಿಂಬಡ್ತಿ ಪಡೆದ ಅವರು ಅಂತಿಮವಾಗಿ ಸಂಪುಟದಿಂದಲೇ ಹೊರಗೆ ಬಂದಿದ್ದಾರೆ.
ತಮ್ಮ ವಿರುದ್ಧ ಮಾನಹಾನಿ ಆಗುವಂಥ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಬಾರದು ಎಂಬ ಉದ್ದೇಶದಿಂದ ನ್ಯಾಯಾಲಯದಿಂದ ತಡೆ ತಂದ ಬೆನ್ನಲ್ಲೇ ಅವರನ್ನು ಸಂಪುಟ ವಿಸ್ತರಣೆ ಹಿನ್ನೆಲೆ ಕೈಬಿಡಬಹುದು ಎಂಬ ಮಾತು ಬಿಜೆಪಿ ಪಾಳೆಯದಲ್ಲಿ ದಟ್ಟವಾಗಿ ಕೇಳಿಬರತೊಡಗಿತ್ತು. ಇದೀಗ ಅದು ಸತ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ