
ನವದೆಹಲಿ, (ಸೆ.30): ಕೇಂದ್ರ ಗೃಹ ಸಚಿವಾಲಯ ಇಂದು (ಬುಧವಾರ) ಅನ್ ಲಾಕ್ 5.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದರೂ ಆರ್ಥಿಕತೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಂತ-ಹಂತವಾಗಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡುತ್ತಿದೆ.
ಅನ್ ಲಾಕ್ 5.0 ಮಾರ್ಗಸೂಚಿಯಂತೆ ಅಕ್ಟೋಬರ್ 15ರಿಂದ ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್ ಥಿಯೇಟರ್, ಚಿತ್ರ ಮಂದಿರಗಳನ್ನು ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಆರಂಭಿಸಲು ಅನುಮತಿಸಿದೆ. ಅಲ್ಲದೇ ಸ್ವಿಮ್ಮಿಂಗ್ ಪೂಲ್ ಗಳನ್ನು ಸಹ ತೆರೆಯಲು ಅನುಮತಿಸಿದೆ. ಆದ್ರೇ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿದೆ.
ಮಾರ್ಗಸೂಚಿ ಮುರಿದರೆ ಬೀಳುತ್ತೆ ಭಾರೀ ದಂಡ
ಇಲ್ಲಿದೆ ಅನ್ಲಾಕ್-5ರ ಮಾರ್ಗಸೂಚಿ:
* ಸಿನಿಮಾ ಹಾಲ್ಗಳು, ಥಿಯೇಟರ್ಗಳು, ಮಲ್ಟಿಪ್ಲೆಕ್ಸ್ಗಳನ್ನು ಪ್ರಾರಂಭಿಸಬಹುದು. ಆದರೆ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆ ಇರುವುದು ಕಡ್ಡಾಯ. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಶೀಘ್ರವೇ ಎಸ್ಒಪಿ ಬಿಡುಗಡೆಯಾಗಲಿದೆ.
* ಬ್ಯುಸಿನೆಸ್ ಟು ಬ್ಯುಸಿನೆಸ್(ಬಿ2ಬಿ-ಎರಡು ವ್ಯವಹಾರಗಳ ಮಧ್ಯೆ ನಡೆಯುವ ಉತ್ಪನ್ನಗಳ ವಹಿವಾಟು) ಎಕ್ಸಿಬಿಷನ್ಗಳನ್ನು ಪ್ರಾರಂಭಿಸಬಹುದು. ಇದಕ್ಕೆ ಸಂಬಂಧಪಟ್ಟ ಎಸ್ಒಪಿಯನ್ನು ವಾಣಿಜ್ಯ ಇಲಾಖೆ ಶೀಘ್ರವೇ ಬಿಡುಗಡೆ ಮಾಡುತ್ತದೆ.
* ಕ್ರೀಡಾಪಟುಗಳ ತರಬೇತಿಗಾಗಿ ಸ್ವಿಮ್ಮಿಂಗ್ ಪೂಲ್ಗಳನ್ನು ಬಳಕೆ ಮಾಡಬಹುದಾಗಿದೆ. ಇದರ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ)ಯನ್ನು ಕ್ರೀಡಾ ಸಚಿವಾಲಯ ನೀಡಲಿದೆ.
* ಮನರಂಜನಾ ಉದ್ಯಾನಗಳು ಮತ್ತು ಅದನ್ನು ಹೋಲುವ ಎಲ್ಲ ಸ್ಥಳಗಳನ್ನೂ ತೆರೆಯಲು ಅನುಮತಿ ನೀಡಲಾಗಿದೆ. ಎಸ್ಒಪಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
* ಶಾಲೆಗಳು, ಕಾಲೇಜು, ಶೈಕ್ಷಣಿಕ, ಕೋಚಿಂಗ್ ಸಂಸ್ಥೆಗಳನ್ನು ಪ್ರಾರಂಭಿಸುವ ಬಗ್ಗೆಯೂ ಅನ್ಲಾಕ್-5ರಲ್ಲಿ ಉಲ್ಲೇಖಿಸಲಾಗಿದೆ. (ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದರ ನಿರ್ಣಯ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ).
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ