
ಬಸ್ತಿ (ಉ.ಪ್ರ): ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯನ್ನು ಮದುವೆಯಾಗುವುದಕ್ಕಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮಕ್ಕೆ ಮತಾಂತರವಾದ ಘಟನೆ ನಡೆದಿದೆ. 34 ವರ್ಷದ ಸದ್ದಾಂ ಎಂಬಾತ ಶಿವಶಂಕರ್ ಸೋನಿ ಎಂದು ಹೆಸರು ಬದಲಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ, ವಿವಾಹಪೂರ್ವ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಕಾರಣ ನೀಡಿ ಮೂರು ದಿನಗಳ ಹಿಂದೆ ಯುವತಿಯೊಬ್ಬಳು ಸದ್ದಾಂ ಮತ್ತು ಆತನ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಳು. ಆದರೆ ಈಗ ಅವರಿಬ್ಬರೂ ಸ್ವ ಇಚ್ಛೆಯಿಂದಲೇ ವಿವಾಹವಾಗಿದ್ದಾರೆ’ ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಎಸ್ ಹೆಚ್ ಒ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.
.ಇದನ್ನೂ ಓದಿ: ಸೀಮಾ ಹೈದರ್ ಮಹತ್ವದ ನಿರ್ಧಾರ, ಕುಂಭಮೇಳಕ್ಕೆ 51 ಲೀಟರ್ ಹಾಲು ಕೊಡೋದಾಗಿ ಘೋಷಣೆ!
‘ನಗರ ಬಜಾರ್ ನಿವಾಸಿ ಸದ್ದಾಂ ಹುಸೇನ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಇಬ್ಬರೂ ಬೇರೆ ಬೇರೆ ಧರ್ಮದವರಾದ್ದರಿಂದ ಸದ್ದಾಂನ ಕುಟುಂಬಸ್ಥರು ಮದುವೆಗೆ ಒಪ್ಪಿರಲಿಲ್ಲ. ಹಾಗಾಗಿ ಯುವತಿ ದೂರು ದಾಖಲಿಸಿದ್ದಳು. ಆದರೆ ನಂತರ ಪ್ರಕರಣದಲ್ಲಿ ತಿರುವು ಲಭಿಸಿದೆ. ಭಾನುವಾರ ರಾತ್ರಿ, ಸದ್ದಾಂ ಮತ್ತು ಹುಡುಗಿ ನಗರದ ಮಾರುಕಟ್ಟೆಯ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದರು ಮತ್ತು ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಾಯಿಸಿಕೊಂಡರು. ಇಬ್ಬರೂ ದೇವಸ್ಥಾನದಲ್ಲಿ ಏಳು ಪ್ರದಕ್ಷಿಣೆ ಹಾಕಿ ದಾಂಪತ್ಯ ಜೀವನವನ್ನು ಒಟ್ಟಿಗೆ ಕಳೆಯಲು ನಿರ್ಧರಿಸಿದರು. ಪರಸ್ಪರ ಒಪ್ಪಿಗೆ ಮದುವೆಯಾಗಲು ತಾವೇ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಇಬ್ಬರೂ ಪೊಲೀಸರಿಗೆ ತಿಳಿಸಿದ್ದಾರೆ.
(ಶೀರ್ಷಿಕೆ ಹೊರತುಪಡಿಸಿ ಈ ಸುದ್ದಿಯನ್ನ ಸುವರ್ಣನ್ಯೂಸ್ ಸಂಪಾದಿಸಿಲ್ಲ, ಸುದ್ದಿ ಮೂಲಗಳಿಂದ ಬಂದ ಮಾಹಿತಿಯಾಧರಿಸಿ ಪ್ರಕಟಿಸಲಾಗಿದೆ.)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ