ಆನ್‌ಲೈನ್ ಬೆಟ್ಟಿಂಗ್‌ ನಿಷೇಧಿಸಿದ ಸರ್ಕಾರ, ಸಿಕ್ಕಾಕೊಂಡ್ರೆ 2 ವರ್ಷ ಜೈಲು!

Published : Nov 21, 2020, 12:02 PM ISTUpdated : Nov 21, 2020, 12:20 PM IST
ಆನ್‌ಲೈನ್ ಬೆಟ್ಟಿಂಗ್‌ ನಿಷೇಧಿಸಿದ ಸರ್ಕಾರ, ಸಿಕ್ಕಾಕೊಂಡ್ರೆ 2 ವರ್ಷ ಜೈಲು!

ಸಾರಾಂಶ

ಬೆಟ್ಟಿಂಗ್‌ಗೆ ಅವಕಾಶದ ಆನ್‌ಲೈನ್‌ ಗೇಮ್‌ಗೆ ತಮಿಳ್ನಾಡಲ್ಲಿ ನಿಷೇಧ| ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೇತೃತ್ವದ ಸರ್ಕಾರ ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರು ಶುಕ್ರವಾರ ಈ ಸುಗ್ರೀವಾಜ್ಞೆ

ಚೆನ್ನೈ(ನ.21): ಬೆಟ್ಟಿಂಗ್‌ಗೆ ಅವಕಾಶ ನೀಡುವ ಆನ್‌ಲೈನ್‌ ಗೇಮ್‌ನಿಂದಾಗಿ ಭಾರೀ ಪ್ರಮಾಣದಲ್ಲಿ ಜನರು ಸಂಕಷ್ಟಕ್ಕೀಡಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ, ಇಂಥ ಆಟಗಳಿಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಈ ಕುರಿತು ಅದು ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದೆ.

ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೇತೃತ್ವದ ಸರ್ಕಾರ ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರು ಶುಕ್ರವಾರ ಈ ಸುಗ್ರೀವಾಜ್ಞೆ ಹೊರಡಿಸಿದರು. ಕಂಪ್ಯೂಟರ್‌ಗಳು ಅಥವಾ ಇನ್ನಿತರ ಸಂಪನ್ಮೂಲಗಳ ಮೂಲಕ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ದಂಧೆ ನಡೆಸುವವರ ಕ್ರಮಕ್ಕೆ ಈ ಸುಗ್ರೀವಾಜ್ಞೆ ಅವಕಾಶ ಕಲ್ಪಿಸಲಿದೆ ಎಂದು ರಾಜಭವನ ಹೇಳಿಕೆ ಬಿಡುಗಡೆ ಮಾಡಿದೆ.

ಬೆಟ್ಟಿಂಗ್‌ಗೆ ಅವಕಾಶ ಕಲ್ಪಿಸುವ ಆನ್‌ಲೈನ್‌ ಆಟಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಆರ್ಥಿಕವಾಗಿ ನಷ್ಟಅನುಭವಿಸಿದ್ದರು. ಅಲ್ಲದೆ ಯುವ ಸಮೂಹ ಕೂಡಾ ಇದಕ್ಕೆ ದಾಸರಾಗುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿತ್ತು. ಅಲ್ಲದೆ ಆರ್ಥಿಕ ನಷ್ಟಕ್ಕೆ ಗುರಿಯಾದವರು ಆತ್ಮಹತ್ಯೆಗೆ ಶರಣಾದ ಪ್ರಕರಣಗಳು ವರದಿಯಾಗಿದ್ದವು. ಅದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ತುರ್ತು ಕ್ರಮ ಕೈಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು