OBC Reservation: ಒಬಿಸಿ ಮೀಸಲು ಇಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆ: ಅಲಹಾಬಾದ್‌ ಹೈಕೋರ್ಟ್ ಆದೇಶ

Published : Dec 28, 2022, 03:17 AM IST
OBC Reservation: ಒಬಿಸಿ ಮೀಸಲು ಇಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆ: ಅಲಹಾಬಾದ್‌ ಹೈಕೋರ್ಟ್ ಆದೇಶ

ಸಾರಾಂಶ

ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಮೀಸಲು ನೀಡದೇ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಅಲಹಾಬಾದ್‌ ಹೈಕೋರ್ಟು, ಉತ್ತರ ಪ್ರದೇಶ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ ಹಾಗೂ ಚುನಾವಣೆ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಕರಡು ಅಧಿಸೂಚನೆಯನ್ನು ರದ್ದುಗೊಳಿಸಿದೆ.

ಪಿಟಿಐ ಲಖನೌ (ಡಿ.28) : ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಮೀಸಲು ನೀಡದೇ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಅಲಹಾಬಾದ್‌ ಹೈಕೋರ್ಟು, ಉತ್ತರ ಪ್ರದೇಶ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ ಹಾಗೂ ಚುನಾವಣೆ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಕರಡು ಅಧಿಸೂಚನೆಯನ್ನು ರದ್ದುಗೊಳಿಸಿದೆ. 2023ರ ಜ.31ರೊಳಗೆ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯಲಿದ್ದು, ಅಷ್ಟರೊಳಗೆ ಚುನಾವಣೆ ನಡೆಸಬೇಕಿದೆ. ಹೀಗಾಗಿ ರಾಜ್ಯ ಸರ್ಕಾರ ಡಿ.5ರಂದು ಕರಡು ಮೀಸಲು ಪಟ್ಟಿಸಿದ್ಧಪಡಿಸಿ ಕರಡು ಅಧಿಸೂಚನೆ ಹೊರಡಿಸಿತ್ತು.

ಆದರೆ, ‘ಸುಪ್ರೀಂ ಕೋರ್ಚ್‌ ಸೂಚಿಸಿದ ‘ತ್ರಿವಳಿ ಪರೀಕ್ಷಾ ಸೂತ್ರ’ವನ್ನು ಅನುಸರಿಸದೆ ಒಬಿಸಿ ಮೀಸಲಾತಿ ಕರಡನ್ನು ಯೋಗಿ ಆದಿತ್ಯನಾಥ್‌ ಸರ್ಕಾರ ಸಿದ್ಧಪಡಿಸಿದೆ. ಹೀಗಾಗಿ ಕರಡು ಅಧಿಸೂಚನೆ ರದ್ದುಗೊಳಿಸಬೇಕು’ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆ ಆಗಿದ್ದವು. ಅರ್ಜಿಗಳನ್ನು ಮಾನ್ಯ ಮಾಡಿದ ವಿಭಾಗೀಯ ಪೀಠ, ಕರಡು ಅಧಿಸೂಚನೆ ರದ್ದು ಮಾಡಿತು.

Uttar Pradesh : ಉತ್ತರ ಪ್ರದೇಶದಲ್ಲಿ ವ್ಯಕ್ತಿ ಮೇಲೆ 'ಕೋತಿಗಳ ಸೈನ್ಯ' ಅಟ್ಯಾಕ್

‘ರಾಜ್ಯ ಸರ್ಕಾರವು ಸುಪ್ರೀಂ ಕೋರ್ಚ್‌ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಬೇಕು. ಅಧ್ಯಯನಕ್ಕೆಂದು ಆಯೋಗವನ್ನು ರಚಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು. ಆದರೆ, ತಾನು ಕ್ಷಿಪ್ರ ಸಮೀಕ್ಷೆ ನಡೆಸಿದ್ದು, ತ್ರಿವಳಿ ಪರೀಕ್ಷಾ ಸೂತ್ರದಂತೆಯೇ ಕರಡು ಉತ್ತಮವಾಗಿದೆ ಎಂದಿತ್ತು.

3 ಹಂತದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ 17 ಮುನ್ಸಿಪಲ… ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ… ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ರಾಜ್ಯ ಸರ್ಕಾರವು ಈ ತಿಂಗಳ ಆರಂಭದಲ್ಲಿ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಬಿಡುಗಡೆ ಮಾಡಿತ್ತು ಮತ್ತು 7 ದಿನಗಳಲ್ಲಿ ಸಲಹೆ/ಆಕ್ಷೇಪಣೆಗಳನ್ನು ಕೇಳಿತ್ತು.

ಹೈಕೋರ್ಚ್‌ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ವಕ್ತಾರ ಸುನೀಲ… ಸಿಂಗ್‌ ಸಜನ್‌, ಒಬಿಸಿಗೆ ಮೀಸಲು ದೊರಕದ ಹಿಂದೆ ಬಿಜೆಪಿ ಸರ್ಕಾರದ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

Uttar Pradesh: ಮದರಸಾ ವಿದ್ಯಾರ್ಥಿಗಳಿಗಿಲ್ಲ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನ

ಏನಿದು ತ್ರಿವಳಿ ಪರೀಕ್ಷಾ ಸೂತ್ರ?

  •  ಜಾತಿಗಳ ಹಿಂದುಳಿದಿರುವಿಕೆ ಅಧ್ಯಯನಕ್ಕೆ ಆಯೋಗ ಸ್ಥಾಪಿಸಬೇಕು
  •  ಆಯಾ ಸ್ಥಳೀಯ ಸಂಸ್ಥೆಗಳ ಅಗತ್ಯಕ್ಕೆ ಅನುಗುಣವಾಗಿ ಮೀಸಲು ನಿಗದಿಯಾಗಬೇಕು
  •  ಮೀಸಲು ಪ್ರಮಾಣ ಶೇ.50ರಷ್ಟನ್ನು ಮೀರಬಾರದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ