
ನವದೆಹಲಿ: ದಸರಾ ಉದ್ಘಾಟನೆ ವಿಷಯ ಮತ್ತು ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಭಾರೀ ವಿವಾದ ಸೃಷ್ಟಿಸಿರುವ ಹೊತ್ತಿನಲ್ಲೇ, ‘ನಗರ ನಕ್ಸಲರ ಮೊದಲ ಗುರಿ ಹಿಂದೂ ಶ್ರದ್ಧಾ ಕೇಂದ್ರಗಳು ಮತ್ತು ನಂಬಿಕೆಗಳು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಿಡಿಕಾರಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿರುವ ಸಂತೋಷ್, ‘ಸಾಮಾಜಿಕ ಅಸ್ಥಿರತೆ ಹಾಗೂ ಅಸ್ವಸ್ಥತೆ ನಿರ್ಮಿಸುವ ಸಮಾನ ಮನಸ್ಕರ (ನಗರ ನಕ್ಸಲರ) ಮೊದಲ ಗುರಿ ಹಿಂದೂ ಶ್ರದ್ಧಾ ಕೇಂದ್ರಗಳು ಹಾಗೂ ನಂಬಿಕೆಗಳು. ಆ ಪಟ್ಟಿಯಲ್ಲಿ ಇತ್ತೀಚಿನ ಸೇರ್ಪಡೆ ಚಾಮುಂಡಿ ಬೆಟ್ಟ ಹಾಗೂ ದಸರಾ ಉತ್ಸವ’ ಎಂದು ಬರೆದಿದ್ದಾರೆ.
ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಆಹ್ವಾನಿಸಿದ್ದನ್ನು ಬಿಜೆಪಿ ನಾಯಕರು ಈಗಾಗಲೇ ಆಕ್ಷೇಪಿಸಿದ್ದಾರೆ. ಅದರ ಬೆನ್ನಲ್ಲೇ ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಡಿ.ಕೆ.ಶಿವಕುಮಾರ್ ವಿವಾದದ ಕಿಡಿ ಹೊತ್ತಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ