
ನವದೆಹಲಿ (ಸೆ.20): ಪ್ರಧಾನಿ ನರೇಂದ್ರ ಮೋದಿ ಅವರು 2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. 2024ರ ಜನವರಿ 26ರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ಅಧ್ಯಕ್ಷ ಬಿಡೆನ್ ಅವರಿಗೆ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ನೀಡಲಾಯಿತು ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಬಿಡೆನ್ ಸೆಪ್ಟೆಂಬರ್ 8ರಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತದ ವ್ಯೂಹಾತ್ಮಕ, ರಾಜತಾಂತ್ರಿಕ ಮತ್ತು ಆರ್ಥಿಕ ಹಿತಾಸಕ್ತಿ ಮತ್ತು ಸಂಬಂಧಿತ ದೇಶದೊಂದಿಗೆ ರಾಷ್ಟ್ರದ ಸಂಬಂಧಗಳನ್ನು ಗಮನದಲ್ಲಿಟ್ಟುಕೊಂಡು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಜನವರಿಯಲ್ಲಿ 2023 ರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (2015), ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (2007), ಫ್ರೆಂಚ್ ಮಾಜಿ ಅಧ್ಯಕ್ಷರಾದ ನಿಕೋಲಸ್ ಸರ್ಕೋಜಿ (2008) ಮತ್ತು ಫ್ರಾಂಕೋಯಿಸ್ ಹೊಲಾಂಡ್ (2016) ಅವರು ಈ ಹಿಂದೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿದ್ದಾರೆ.
ಈಗಲೂ ಮೋದಿಯೇ ನಂ. 1 ಜಾಗತಿಕ ಜನಪ್ರಿಯ ನಾಯಕ: ನಮೋಗೆ ಸರಿಸಾಟಿ ಯಾರೂ ಇಲ್ಲ!
ಕೈ-ಕೈ ಹಿಡಿದು ಮಾತನಾಡಿದ ಮೋದಿ-ನಿತೀಶ್, ನಿರ್ಮಲಾ ಜೊತೆ ಸ್ಟ್ಯಾಲಿನ್ ಮಾತು..ಜಿ20 ಔತಣಕೂಟದಲ್ಲಿ ಕಂಡ ಚಿತ್ರಗಳು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ