
ನವೆದೆಹಲಿ(ಮಾ.19): ಭಾರತದ ಅಧಿಕೃತ ಭೇಟಿಯಲ್ಲಿರುವ ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್ III ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅಮೇರಿಕ ಅಧ್ಯಕ್ಷ ಜೋ ಬಿಡೆನ್ ಶುಭಾಶಗಳನ್ನು ಮೋದಿಗೆ ತಿಳಿಸಿದ್ದಾರೆ.
ಇಂಡೋ-ಪೆಸಿಫಿಕ್ ಒಳಿತಿಗೆ ಕ್ವಾಡ್ ಮಹತ್ವದ ಆಧಾರ ಸ್ತಂಭ ಎಂದ ಮೋದಿ!
ಭಾರತ ಹಾಗೂ ಅಮೆರಿಕ ಪ್ರಜಾಪ್ರಭುತ್ವ ಆಧಾರಿತ ದೇಶವಾಗಿದೆ. ಬದ್ಧತೆಯ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಉಭಯ ದೇಶಗಳ ನಡುವಿನ ಆತ್ಮೀಯ ಮತ್ತು ನಿಕಟ ಸಂಬಂಧವನ್ನು ಪ್ರಧಾನಿ ಮೋದಿ ಈ ವೇಳೆ ಉಲ್ಲೇಖಿಸಿದ್ದಾರೆ. ಉಭಯ ದೇಶಗಳ ನಡುವಿನ ಸಹಭಾಗಿತ್ವಕ್ಕಾಗಿ ಪ್ರಧಾನಿ ದೇಶದ ನಿಲುವ ಹಾಗೂ ದೃಷ್ಟಿಕೋನವನ್ನು ವಿವರಿಸಿದರು. ಭಾರತ-ಯುಎಸ್ ಸಂಬಂಧಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಕಾರದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು.
ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವಕ್ಕಾಗಿ ಪ್ರಧಾನಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು ಮತ್ತು ಭಾರತ-ಯುಎಸ್ ಸಂಬಂಧಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಕಾರದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. ಅಮರಿಕ ಅಧ್ಯಕ್ಷ ಜೋ ಬಿಡೆನ್‌ಗೆ ತಮ್ಮ ಶುಭಾಶಯ ತಿಳಿಸುವಂತೆ ಆಸ್ಟಿನ್ ಅವರಿಗೆ ಮೋದಿ ಹೇಳಿದ್ದಾರೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಯು.ಎಸ್. ಸರ್ಕಾರದ ಬದ್ಧತೆಯನ್ನು ಜೇಮ್ಸ್ ಆಸ್ಟಿನ್ ಪುನರುಚ್ಚರಿಸಿದ್ದಾರೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಜೇಮ್ಸ್ ಒತ್ತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ