ರೈತರ ಪ್ರತಿಭಟನೆ ತಡೆಯಲು ಸಾನಿಕ್‌ ಅಸ್ತ್ರ ಬಳಕೆ: ಡ್ರೋನ್‌ ದಾಳಿ ತಡೆಯಲು ರೈತರಿಂದ ಗಾಳಿಪಟ ಹಾರಾಟ

Published : Feb 15, 2024, 07:35 AM ISTUpdated : Feb 15, 2024, 07:36 AM IST
ರೈತರ ಪ್ರತಿಭಟನೆ ತಡೆಯಲು ಸಾನಿಕ್‌ ಅಸ್ತ್ರ ಬಳಕೆ: ಡ್ರೋನ್‌ ದಾಳಿ ತಡೆಯಲು ರೈತರಿಂದ ಗಾಳಿಪಟ ಹಾರಾಟ

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಗೆ ಮೆರವಣಿಗೆ ಹೊರಟಿರುವ ರೈತರನ್ನು ತಡೆಯಲು ದೆಹಲಿ ಪೊಲೀಸರು ಈ ಬಾರಿ ಸಾನಿಕ್‌ ಅಸ್ತ್ರದ ಮೊರೆ ಹೋಗಿದ್ದಾರೆ. ಇದು ಏಕಮುಖವಾಗಿ ತೀವ್ರತರವಾದ ಶಬ್ದವನ್ನು ಹೊರಡಿಸುವ ಮೂಲಕ ಜನರು ಆ ದಿಕ್ಕಿನತ್ತ ಪ್ರಯಾಣಿಸುವುದನ್ನು ತಪ್ಪಿಸಲಿದೆ. ಈ ಶಬ್ದ ಆಲಿಸಿದವರು ಕಿವುಡಾಗುವ ಸಾಧ್ಯತೆಯೂ ಇರುತ್ತದೆ.

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಗೆ ಮೆರವಣಿಗೆ ಹೊರಟಿರುವ ರೈತರನ್ನು ತಡೆಯಲು ದೆಹಲಿ ಪೊಲೀಸರು ಈ ಬಾರಿ ಸಾನಿಕ್‌ ಅಸ್ತ್ರದ ಮೊರೆ ಹೋಗಿದ್ದಾರೆ. ಇದು ಏಕಮುಖವಾಗಿ ತೀವ್ರತರವಾದ ಶಬ್ದವನ್ನು ಹೊರಡಿಸುವ ಮೂಲಕ ಜನರು ಆ ದಿಕ್ಕಿನತ್ತ ಪ್ರಯಾಣಿಸುವುದನ್ನು ತಪ್ಪಿಸಲಿದೆ. ಈ ಶಬ್ದ ಆಲಿಸಿದವರು ಕಿವುಡಾಗುವ ಸಾಧ್ಯತೆಯೂ ಇರುತ್ತದೆ.

ಅಮೆರಿಕದಿಂದ ಆಮದು ಮಾಡಿಕೊಂಡಿರುವ ಎಲ್‌ಆರ್‌ಎಡಿ (ದೂರ ಪ್ರಯಾಣಿಸಬಲ್ಲ ತೀವ್ರ ಶಬ್ದ ಹೊರಡಿಸಬಲ್ಲ ಸಾಧನ) ಸಾಧನಗಳನ್ನು ಅಳವಡಿಸಿದೆ. ಇವುಗಳನ್ನು ಗುಂಪು ಚದುರಿಸಬಲ್ಲ ಫಿರಂಗಿ ಎಂದೂ ಕರೆಯಲಾಗುತ್ತದೆ. ಈ ಸ್ಪೀಕರ್‌ಗಳು ಏಕಮುಖವಾಗಿ ತೀವ್ರವಾದ ಶಬ್ದದ ಅಲೆಗಳನ್ನು ಹೊರಡಿಸುತ್ತವೆ. ಇದನ್ನು ಕೇಳಿಸಿಕೊಳ್ಳುವುದು ಮನುಷ್ಯರಿಗೆ ಅಸಹನೀಯವಾಗುವುದಲ್ಲದೇ, ಕಿವಿಗಳು ಕಿವುಡಾಗುವ ಸಾಧ್ಯತೆಗಳು ಇವೆ. 2013ರಲ್ಲಿ ದೆಹಲಿ ಪೊಲೀಸರು ಈ ಸಾಧನವನ್ನು ಅಮೆರಿಕದಿಂದ ಆಮದು ಮಾಡಿಕೊಂಡಿದ್ದರು, ಇವುಗಳ ಬೆಲೆ 30 ಲಕ್ಷ ರು.ನಷ್ಟಿದೆ.

News Hour: ಲೋಕಸಭೆ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ರೈತದಂಗೆ!

ಸಾನಿಕ್‌ ಅಸ್ತ್ರವಷ್ಟೇ ಅಲ್ಲದೇ, ಗುಂಪು ಚದುರಿಸುವುದಕ್ಕಾಗಿ ಪೊಲೀಸರು ಗುಂಡು ಹಾರಿಸುವುದನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ರೈತರನ್ನು ತಡೆಯಲು ಈಗಾಗಲೇ ಬ್ಯಾರಿಕೇಡ್‌, ಭಾರಿ ಗಾತ್ರದ ಸಿಮೆಂಟ್‌ ಗೋಡೆ, ಮುಳ್ಳುತಂತಿ, ಮೊಳೆಗಳನ್ನು ಪೊಲೀಸರು ಗಡಿಗಳಲ್ಲಿ ಅಳವಡಿಸಿದ್ದಾರೆ.

ಪ್ರತ್ಯೇಕ ಖಲಿಸ್ತಾನಿ ದೇಶ ನಮ್ಮ ಬೇಡಿಕೆ: ಪಂಜಾಬ್‌ ಪ್ರತಿಭಟನಾಕಾರ

ಶಂಭು ಗಡಿ (ಹರ್ಯಾಣ): ದಿಲ್ಲಿ ಚಲೋ ನಿಮಿತ್ತ ಪಂಜಾಬ್‌ನಿಂದ ಹೊರಟ ಸಿಖ್‌ ರೈತ ಪ್ರತಿಭಟನಾಕಾರನೊಬ್ಬ ಪ್ರತ್ಯೇಕ ಖಲಿಸ್ತಾನಿ ದೇಶ ನಮ್ಮ ಬೇಡಿಕೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಬೆಳೆಗಳ ಬೆಂಬಲ ಬೆಲೆಗೆ ಕಾನೂನು ಸ್ವರೂಪ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಪತ್ರಕರ್ತರ ಜತೆ ಮಾತನಾಡಿದ ಪಂಜಾಬ್‌ ಪ್ರತಿಭಟನಾಕಾರನೊಬ್ಬ ‘ಪ್ರತ್ಯೇಕ ಖಲಿಸ್ತಾನಿ ದೇಶ ನಮ್ಮ ಬೇಡಿಕೆ’ ಎಂದು ಹೇಳಿದ.

ಡ್ರೋನ್‌ ದಾಳಿ ತಡೆಯಲು ರೈತರಿಂದ ಗಾಳಿಪಟ ಹಾರಾಟ

ಶಂಭು ಗಡಿ (ಹರ್ಯಾಣ): ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಡ್ರೋನ್‌ ಮೂಲಕ ಅಶ್ರುವಾಯು ಸಿಡಿಸಿ ರೈತರನ್ನು ಚದುರಿಸುತ್ತಿದ್ದು, ಇತ್ತ ಪ್ರತಿಭಟನಾನಿರತ ರೈತರು ಪಂಜಾಬ್‌-ಹರ್ಯಾಣ ಗಡಿಯಲ್ಲಿ ಡ್ರೋನ್‌ ವಿಫಲಗೊಳಿಸಲು ಗಾಳಿಪಟ ಹಾರಿಸುತ್ತಿದ್ದಾರೆ. ದಪ್ಪ ದಾರದ ಗಾಳಿಪಟ ಹಾರಾಟ ನಡೆಸಿದರೆ ಅವುಗಳ ದಾರ ಡ್ರೋನ್‌ ರೆಕ್ಕೆಗೆ ಸಿಕ್ಕಿ ನಂತರ ಡ್ರೋನ್‌ ಕ್ರಾಷ್ ಆಗುತ್ತದೆ ಎಂಬ ಉದ್ದೇಶದಿಂದ ರೈತರು ಗಾಳಿಪಟ ಹಾರಿಸುತ್ತಿದ್ದಾರೆ. ಇದರ ಜೊತೆಗೆ ಅಶ್ರುವಾಯು ದಾಳಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನೀರಿನ ಬಾಟಲಿಗಳು ಹಾಗೂ ಒದ್ದೆ ಬಟ್ಟೆಗಳನ್ನು ರೈತರು ಧರಿಸುತ್ತಿದ್ದಾರೆ. ಇದಲ್ಲದೆ ಹೊಗೆ ನಿರೋಧಕ ಮಾಸ್ಕ್ ಧರಿಸಿ ಪ್ರತಿಭಟನೆಯಲ್ಲಿ ರೈತರು ಪಾಲ್ಗೊಳ್ಳುತ್ತಿದ್ದಾರೆ.

ಫೆ.16ಕ್ಕೆ ಗ್ರಾಮೀಣ ಭಾರತ್ ಬಂದ್‌‌ಗೆ ಕರೆ, ರೈತ ಪ್ರತಿಭಟನೆಯಿಂದ ಏನಿರುತ್ತೆ? ಏನಿರಲ್ಲ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!