
ಲಖನೌ(ಏ.01): ಉತ್ತರ ಪ್ರದೇಶದಲ್ಲಿ(Uttar Pradesh) ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚನೆಯಾಗಿ ಕೆಲ ದಿನಗಳಲ್ಲೇ ಮಹತ್ವದ ಘೋಷಣೆ ಹೊರಬಿದ್ದಿದೆ. ಮುಂದಿನ 100 ದಿನಗಳಲ್ಲಿ 10,000 ಯುವಕರನ್ನು ಸರ್ಕಾರಿ(Government Jobs) ಕೆಲಸಕ್ಕೆ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಘೋಷಿಸಿದ್ದಾರೆ. ಇಂದಿನಿಂದಲೇ ಪ್ರಕ್ರಿಯೆ ಆರಂಭಿಸಲು ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರಿ ಸೇವಾ ಆಯ್ಕೆ ಸಮಿತಿಗೆ ಯೋಗಿ ಆದಿತ್ಯನಾಥ್(CM Yogi adityanath) ಮಹತ್ವದ ಸೂಚನೆ ನೀಡಿದ್ದಾರೆ. ಮುಂದಿನ 100 ದಿನಗಳಲ್ಲಿ 10,000 ಯುವಕರನ್ನು ಉತ್ತರ ಪ್ರದೇಶ ಸರ್ಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಮುಂದಿನ 3 ತಿಂಗಳ ಒಳಗೆಡೆ ಎಲ್ಲಾ ಪ್ರಕ್ರಿಯೆ ಮುಗಿದು, 10,000 ಯುವಕರು(Youths) ಸರ್ಕಾರಿ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಯೋಗಿ ಹೇಳಿದ್ದಾರೆ.
ಯೋಗಿ ಪವರ್, ಮತ್ತೆ ಅಧಿಕಾರಕ್ಕೆ ಬಂದ 15 ದಿನದೊಳಗೆ ಶರಣಾದ 50 ಅಪರಾಧಿಗಳು
ಉತ್ತರ ಪ್ರದೇಶದ ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹೀಗಾಗಿ ಮುಂದಿನ 100 ದಿನದಲ್ಲಿ ರಾಜ್ಯದ 10,000 ಯುವಕರಿಗೆ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಟ್ವಿಟರ್ ಮೂಲಕ ಹೇಳಿದ್ದಾರೆ.
ಮೊದಲ ಅವಧಿಯಲ್ಲಿ ಯೋಗಿ ಆದಿತ್ಯನಾಥ್ 1.16 ಕೋಟಿ ಯುವಕರಿಗೆ ಉದ್ಯೋಗ ನೀಡಲಾಗಿದೆ. 3.5 ಲಕ್ಷ ಕೋಟಿ ರೂಪಾಯಿ ರಾಜ್ಯದಲ್ಲಿ ಹೂಡಿಕೆ ಮಾಡಲಾಗಿದೆ. ಕಳದ ಅವಧಿಯಲ್ಲೂ ಉದ್ಯೋಗ ಸೃಷ್ಟಿ ಮೂಲಕ ರಾಜ್ಯದ ಯುವ ಜನತೆಗೆ ಉದ್ಯೋಗ ನೀಡಿದೆ.
ಯುಪಿ ವಿಧಾನಸಭೆಯಲ್ಲಿ ಯೋಗಿ, ಅಖಿಲೇಶ್ ಮುಖಾಮುಖಿ: ಬೆನ್ನು ಸವರಿ ವಿಪಕ್ಷ ನಾಯಕನ ಜೊತೆ ಸಿಎಂ ಮಾತು!
ಬಿಜೆಪಿ ಒಟ್ಟು 403 ಕ್ಷೇತ್ರಗಳ ಪೈಕಿ 273 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ 37 ವರ್ಷಗಳ ರಾಜ್ಯದ ಇತಿಹಾಸದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ಮೊದಲ ಆಡಳಿತಾರೂಢ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಯೋಗಿ ಎರಡನೇ ಅವಧಿ ಸರ್ಕಾರದಲ್ಲಿ 18 ಜನರಿಗೆ ಸಂಪುಟ ದರ್ಜೆ, 14 ಜನರು ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ) ಮತು 20 ರಾಜ್ಯ ಸಚಿವರು ಸೇರಿದ್ದಾರೆ. ಚುನಾವಣೆಯಲ್ಲಿ ಸೋತರು ಕೇಶವ ಪ್ರಸಾದ ಮೌರ್ಯಗೆ ಮತ್ತೊಮ್ಮೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಇನ್ನು ಈ ಹಿಂದೆ ಡಿಸಿಎಂ ಆಗಿದ್ದ ದಿನೇಶ್ ಶರ್ಮಾ ಬದಲಾಗಿ ಬ್ರಜೇಶ್ ಪಾಠಕ್‌ಗೆ ಡಿಸಿಎಂ ಹುದ್ದೆ ನೀಡಲಾಗಿದೆ.
ಯೋಗಿ ದೇಶದ 6ನೇ ಪ್ರಭಾವಿ ವ್ಯಕ್ತಿ
2022ನೇ ಸಾಲಿನ ದೇಶದ ‘100 ಪ್ರಭಾವಿ ಭಾರತೀಯ’ರ ಪಟ್ಟಿಯನ್ನು ‘ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ಬಿಡುಗಡೆ ಮಾಡಿದೆ. ವಿಶ್ವದ ಅತಿ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಉದ್ಯಮಿ ಅನಿಲ್ ಅಂಬಾನಿ, ಬಿಜೆಪಿ ಮತ್ತೆ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರುವಲ್ಲಿ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಉದ್ಯಮಿ ಗೌತಮ್ ಅದಾನಿ, ದೇಶದ ಭದ್ರತಾ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಪಂಜಾಬ್‌ನಲ್ಲೂ ಆಪ್ ಅನ್ನು ಅಧಿಕಾರಕ್ಕೆ ತಂದ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್ ನೇತಾರ ಅರವಿಂದ ಕೇಜ್ರಿವಾಲ್, ಕೋವಿಡ್ ಹೊಡೆತದ ನಡುವೆ ದೇಶದ ಆರ್ಥಿಕತೆ ಬಲಗೊಳ್ಳಲು ಶ್ರಮಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಥಾನ ಪಡೆದಿದ್ದು, ಟಾಪ್-10ರಲ್ಲಿ ಸ್ಥಾನ ಅಲಂಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ