ಉತ್ತರ ಪ್ರದೇಶದ ಎಲ್ಲಾ ರಾಜ್ಯ ಅನುದಾನಿತ ಶಾಲೆಗಳಲ್ಲಿ ಚಂದ್ರಯಾನ-3 ಲ್ಯಾಂಡಿಂಗ್‌ನ ನೇರಪ್ರಸಾರ ಮಾಡಲಾಗುವುದು ಎಂದು ಮುಖ್ಯಮಂತ್ರ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ನವದೆಹಲಿ (ಆ.22): ಭಾರತದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಲಿದೆ. ಈ ಮಹತ್ವದ ಕ್ಷಣವನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ನೇರ ಪ್ರಸಾರ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಸಂಜೆಯ ಸಮಯದಲ್ಲಿ ಶಾಲೆಗಳು ವಿಶೇಷವಾಗಿ ಒಂದು ಗಂಟೆ ತೆರೆದಿರುತ್ತವೆ, ಇದರಿಂದಾಗಿ ರಾಜ್ಯದಾದ್ಯಂತ ಮಕ್ಕಳು ಭಾರತದ ಇತಿಹಾಸದಲ್ಲಿ ದಾಖಲಾಗುವ ಐತಿಹಾಸಿಕ ಕ್ಷಣವನ್ನು ವೀಕ್ಷಿಸಬಹುದು ಎಂದಿದ್ದಾರೆ. ಉತ್ತರ ಪ್ರದೇಶ ಸರ್ಕಾರ, ರಾಜ್ಯದ ಶಿಕ್ಷಣ ಸಚಿವಾಲಯದ ಆದೇಶವನ್ನು ಉಲ್ಲೇಖಿಸಿ, ಆಗಸ್ಟ್ 23 ರಂದು ಸಂಜೆ 5.27 ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಇಸ್ರೋ ವೆಬ್‌ಸೈಟ್, ಅವರ ಯೂಟ್ಯೂಬ್ ಚಾನೆಲ್ ಮತ್ತು ಡಿಡಿ ನ್ಯಾಷನಲ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಿದೆ. ಹೀಗಾಗಿ, ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವೀಕ್ಷಿಸಲು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಪ್ರಾಂಶುಪಾಲರು ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಲಾಗಿದೆ.
ರಾಜ್ಯ ಹೆಚ್ಚುವರಿ ಯೋಜನಾ ನಿರ್ದೇಶಕ ಮಧುಸೂದನ ಹುಳಗಿ ಮಾತನಾಡಿದ್ದು, ಇಂತಹ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗಲು ವಿದ್ಯಾರ್ಥಿಗಳಿಗೆ ಸಂಜೆ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿರುವುದು ಇದೇ ಮೊದಲು. ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಒಂದು ಮಹತ್ವದ ಸಂದರ್ಭವಾಗಿದ್ದು, ಇದು ನಮ್ಮ ಯುವಜನರ ಮನಸ್ಸಿನಲ್ಲಿ ಕುತೂಹಲವನ್ನು ಹೆಚ್ಚಿಸುವುದಲ್ಲದೆ ಅನ್ವೇಷಣೆಯ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಬುಧವಾರ, ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ತನ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನ ಮಾಡಲಿದೆ. ವಿಕ್ರಮ್ ಲ್ಯಾಂಡರ್‌ನ ಒಳಗಡೆ ಪ್ರಗ್ಯಾನ್ ರೋವರ್ ಇದೆ. ತನ್ನ ಮೂರನೇ ಚಂದ್ರಯಾನ, ಚಂದ್ರಯಾನ-3 ಆಗಸ್ಟ್ 23 ರ ಬುಧವಾರ ಸಂಜೆ 6:04 ಕ್ಕೆ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಮೃದುವಾದ ಮತ್ತು ಯಶಸ್ವಿ ಲ್ಯಾಂಡಿಂಗ್ ಮಾಡಲಿದ್ದು, ದೇಶ ಇತಿಹಾಸವನ್ನು ನಿರ್ಮಿಸಲು ಸಿದ್ಧವಾಗಿದೆ. ಆದಾಗ್ಯೂ, "ಪ್ರತಿಕೂಲ ಪರಿಸ್ಥಿತಿಗಳಲ್ಲಿ", ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಮುಂದೂಡಬಹುದು ಎಂದು ಇಸ್ರೋ ವಿಜ್ಞಾನಿಯೊಬ್ಬರು ಹೇಳಿದ್ದಾರೆ "ಯಾವುದೇ ಸಮಸ್ಯೆ ಉಂಟಾಗಬಾರದು ಮತ್ತು ನಾವು ಆಗಸ್ಟ್ 23 ರಂದು ಮಾಡ್ಯೂಲ್ ಅನ್ನು ಇಳಿಸಲು ಸಾಧ್ಯವಾಗುತ್ತದೆ" ಎಂದು ಖಚಿತಪಡಿಸಿದ್ದಾರೆ.
Chandrayaan-3 Updates: 70 ಕಿ.ಮೀ ದೂರದಿಂದ ಚಂದ್ರ ಕಾಣೋದು ಹೀಗೆ.. ಹೊಸ ಚಿತ್ರ ಕಳಿಸಿದ ವಿಕ್ರಮ್!
ಜುಲೈ 14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಭಾರತದ ಮೂರನೇ ಚಂದ್ರನ ಕಾರ್ಯಾಚರಣೆಯಾದ ಚಂದ್ರಯಾನ-3 ರ ಉದ್ದೇಶಗಳು ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್, ಚಂದ್ರನ ಮೇಲ್ಮೈಯಲ್ಲಿ ರೋವರ್ ರೋವಿಂಗ್ ಮತ್ತು ವೈಜ್ಞಾನಿಕ ಪ್ರಯೋಗಗಳಾಗಿವೆ. ಚಂದ್ರಯಾನ-3 ರ ಅನುಮೋದಿತ ವೆಚ್ಚ ರೂ 250 ಕೋಟಿ (ಉಡಾವಣಾ ವಾಹನ ವೆಚ್ಚವನ್ನು ಹೊರತುಪಡಿಸಿ) ಆಗಿದೆ. ಭಾರತವು ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿದೆ, ಆದರೆ ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ವಿಶ್ವದ ಏಕೈಕ ದೇಶವಾಗಲಿದೆ.
Chandrayaan Mission: ಕನಸು ಕಂಡಿದ್ದು ವಾಜಪೇಯಿ, ನೆಹರು ಜನ್ಮದಿನಕ್ಕೆ ಚಂದ್ರನಲ್ಲಿತ್ತು ಇಸ್ರೋ!