ಅಧಿಕಾರಿಗಳಿಗೆ ಕೊರೋನಾ ಪಾಸಿಟೀವ್; ಐಸೋಲೇಶನ್‌ಗೆ ಸಿಎಂ ಯೋಗಿ ಆದಿತ್ಯನಾಥ್!

By Suvarna NewsFirst Published Apr 13, 2021, 7:58 PM IST
Highlights

ಕೊರೋನಾ ವೈರಸ್ ಪ್ರಕರಣ ಮಿಂಚಿನ ವೇಗದಲ್ಲಿ ಹೆಚ್ಚಾಗುತ್ತಿದೆ. ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ಅಧಿಕಾರಿಗಳಿಗೆ ಕೊರೋನಾ ಪಾಸಿಟೀವ್ ರಿಪೋರ್ಟ್ ಬಂದಿರುವ ಕಾರಣ ಇದೀಗ ಸಿಂ ಯೋಗಿ ಆದಿತ್ಯನಾಥ್‌ಗೆ ಸಂಕಷ್ಟಕ್ಕೆ ಎದುರಾಗಿದೆ.

ಲಕ್ನೌ(ಏ.13): ಉತ್ತರ ಪ್ರದೇಶದಲ್ಲಿ ಕೊರೋನಾ ವೈರಸ್ ಮಿತಿ ಮೀರುತ್ತಿದೆ. ಇತರ ರಾಜ್ಯಗಳಂತೆ ಅಪಾಯದ ಕರೆ ಗಂಟೆ ಭಾರಿಸುತ್ತಿದೆ. ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಯ ಹಲವು ಸಿಬ್ಬಂಧಿಗಳಿಗೆ ಕೊರೋನಾ ಪಾಸಿಟೀವ್ ಆಗಿದೆ. ಹೀಗಾಗಿ ಸ್ವತಃ ಯೋಗಿ ಆದಿತ್ಯನಾಥ್ ಐಸೋಲೇಶನ್‌ಗೆ ಒಳಗಾಗಿದ್ದಾರೆ.

ಕೊರೋನಾ ಭೀತಿ; ಲಾಕ್‌ಡೌನ್ ಕುರಿತು ಸಿಎಂ ಯೋಗಿ ಆದಿತ್ಯನಾಥ್ ನಿರ್ಧಾರ!.

ಸಿಬ್ಬಂದಿಗಳಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದೆ. ಆ ಸಿಬ್ಬಂಧಿಗಳ ಜೊತೆ ಸಂಪರ್ಕದಲ್ಲಿದ್ದ ಕಾರಣ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್‌ಗೆ ಒಳಗಾಗಿದ್ದೇನೆ. ಆರೋಗ್ಯವಾಗಿದ್ದೇನ. ಐಸೋಲೇಶನ್‌ನಲ್ಲಿದ್ದು ಕರ್ತವ್ಯ ನಿಭಾಯಿಸಲಿದ್ದೇನೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಗರಿಷ್ಠ ಕೊರೋನಾ ಪ್ರಕರಣ ದಾಖಲಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಕಚೇರಿ ಸಿಬ್ಬಂದಿಗಳಿಗೆ ವೈರಸ್ ಅಂಟಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಉತ್ತರ ಪ್ರದೇಶದಲ್ಲಿ ಒಂದೇ ದಿನ 18,021 ಕೊರೋನಾ ಪ್ರಕರಣಗಳು ದಾಖಲಾಗಿದೆ. ಇನ್ನು 85 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಉತ್ತರ ಪ್ರದೇಶದಲ್ಲಿ ಕೊರೋನಾ ವೈರಸ್ ಸಂಖ್ಯೆ 7,23,582 ಕ್ಕೇರಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 95,980. ಇನ್ನು ಒಟ್ಟು 9,309 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.  

click me!