
ಬುಲೆಂದಶಹರ್: ಪಿಕಪ್ ವ್ಯಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನ ಸಾವನ್ನಪ್ಪಿ 27 ಜನ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬುಲೆಂದಶಹರ್‌ನ ಸಲೇಂಪುರದಲ್ಲಿ ನಡೆದಿದೆ.
ಬುದೌನ್ ಮೀರತ್ ರಾಜ್ಯ ಹೈವೇಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದ ಸಿಎಂ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ಹಾಗೆಯೇ ಈ ಅವಘಡದಲ್ಲಿ ಮೃತರಾದವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತರ ಸಂಬಂಧಿಕರು ಹಾಗೂ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಆಡಳಿತದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅವರ ಮನವೊಲಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಅಪಘಾತದ ರಭಸಕ್ಕೆ ಪಿಕಪ್ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ