
ಲಖನೌ(ಜು.23) ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ರೋಮ್ಯಾನ್ಸ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಕಾಲೇಜು ತರಗತಿಯೊಳಗೆ ಅಪ್ಪುಗೆ, ಚುಂಬನ ಸೇರಿ ಬೆಡ್‌ರೋಂ ರೋಮ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಶಹಜಹಾನ ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ತನಿಖೆಗೆ ಆದೇಶಿಸಿದ್ದಾರೆ. ಕಾಲೇಜಿನ ಘನತೆಗೆ ಧಕ್ಕೆ ತಂದಿರುವ ಹಾಗೂ ಶಿಸ್ತು ಮೀರಿದ ನಡೆತೆಗೆ ತಕ್ಕ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಿನ್ಸಿಪಾಲ್ ಹೇಳಿದ್ದಾರೆ.
ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ನಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇಬ್ಬರು ಮೆಡಿಕಲ್ ಕಾಲೇಜಿನ ಹಾಲ್‌ನಲ್ಲಿ ಕುಳಿತು ರೋಮ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿಕುವ ಕಾಲೇಜು ಪ್ರಿನ್ಸಿಪಾಲ್ ರಾಜೇಶ್ ಕುಮಾರ್, ವಿಡಿಯೋ ಆಧರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ತಪ್ಪಿತಸ್ಥ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.
ಬಿಹಾರ ಬಿಡಿಓ ಬೀಳ್ಕೊಡುಗೆ ಪಾರ್ಟಿಯಲ್ಲಿ ನಂಗಾನಾಚ್, ತನಿಖೆಗೆ ಆದೇಶಿಸಿದ ಜಿಲ್ಲಾಧಿಕಾರಿ!
ಕಾಲೇಜಿನ ಹೆಸರು ಹಾಳು ಮಾಡುವ ಯಾುವುದೇ ಚಟುವಟಿಕೆಗೆ ಅವಕಾಶವಿಲ್ಲ. ವಿದ್ಯಾರ್ಥಿಗಳು ಶಿಸ್ತು ಮೀರಿದ್ದಾರೆ. ಹೀಗಾಗಿ ಹಲವು ಕಾನೂನು ಉಲ್ಲಂಘನೆಯಾಗಿದೆ. ಭವಿಷ್ಯ ರೂಪಿಸುವ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲೇ ಈ ರೀತಿ ಮಾಡಿ ಭವಿಷ್ಯ ಹಾಳುಮಾಡಬೇಡಿ ಎಂದು ಪ್ರಿನ್ಸಿಪಾಲ್ ಕಿವಿಮಾತು ಹೇಳಿದ್ದಾರೆ.
ಈ ಪ್ರಕರಣದ ಕುರಿತು ಆಂತರಿಕ ತನಿಖೆ ನಡೆಸಲು ತಂಡ ರಚಿಸಲಾಗಿದೆ. ಈ ವಿಡಿಯೋ ಶಹಜಹನಾಪುರದ ಮೆಡಿಕಲ್ ಕಾಲೇಜಿನ ಘನತೆ ಧಕ್ಕೆ ತಂದಿದೆ. ಕಾಲೇಜು ಮಾತ್ರವಲ್ಲ, ಆಸ್ಪತ್ರೆಯ ನರ್ಸ್ ಹಾಗೂ ಇತರ ಸಿಬ್ಬಂದಿಗಳ ಮೇಲೂ ಅನುಮಾನ ಮೂಡುವಂತೆ ಮಾಡಿದೆ. ಇದೇ ಮೊದಲ ಬಾರಿಗೆ ಶಹಜಹನಾಪುರ ಮೆಡಿಕಲ್ ಕಾಲೇಜು ಈ ಮಟ್ಟಕ್ಕೆ ಸುದ್ದಿಯಾಗಿದೆ.
ಇವನೆಂಥಾ ಗಂಡ..ಹೆಂಡ್ತಿಯ ಅಶ್ಲೀಲ ವಿಡಿಯೋ ಗರ್ಲ್‌ಫ್ರೆಂಡ್‌ಗೆ ಶೇರ್ ಮಾಡಿದ ಭೂಪ!
ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ನೈತಿಕ ಗೂಂಡಾಗಿರಿ: ಇಬ್ಬರ ಸೆರೆ
ಮಂಗಳೂರಿನ ಪಣಂಬೂರು ಕಡಲತೀರಕ್ಕೆ ಬಂದಿದ್ದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆಗೈದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 10 ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಬೀಚ್‌ಗೆ ಬಂದಿದ್ದರು. ಅವರಲ್ಲಿ ಆರು ಯುವಕರು, ನಾಲ್ವರು ಯುವತಿಯರಿದ್ದು, ಬೇರೆ ಬೇರೆ ಧರ್ಮದವರು ಸೇರಿದ್ದರು. ವಿದ್ಯಾರ್ಥಿಗಳು ಬೀಚ್‌ನಿಂದ ಮರಳಿದ ಬಳಿಕ ಬೈಕ್‌ನಲ್ಲಿ ಅವರನ್ನು ಬೆನ್ನತ್ತಿದ ದೀಕ್ಷಿತ್ (32) ಹಾಗೂ ಲಾಯ್ಡ್ ಪಿಂಟೋ (32) ಎಂಬ ಇಬ್ಬರು ಕಾಪಿಕಾಡ್ ಬಳಿ ಅನ್ಯಕೋಮಿನ ವಿದ್ಯಾರ್ಥಿಯನ್ನು ಅಡ್ಡಗಟ್ಟಿಹಲ್ಲೆ ನಡೆಸಿದ್ದಾರೆ. ಇವರಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಬಸ್ ಇಳಿದು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ, ‘ಕೇರಳ ಸ್ಟೋರಿ’ ನೋಡಿಯೂ ನಿನಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ