
ಡೆಹ್ರಾಡೂನ್: ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗಿದವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಮತ್ತು 10 ಕೋಟಿ ರು.ವರೆಗೂ ದಂಡ ವಿಧಿಸಬಹುದಾದ ಸುಗ್ರೀವಾಜ್ಞೆಗೆ ಉತ್ತರಾಖಂಡ ರಾಜ್ಯಪಾಲ ಗುರ್ಮೀತ್ ಸಿಂಗ್ ಶನಿವಾರ ಒಪ್ಪಿಗೆ ನೀಡಿದ್ದಾರೆ. ರಾಜ್ಯಪಾಲರ ಒಪ್ಪಿಗೆಯೊಂದಿಗೆ ಉತ್ತರಾಖಂಡ ಸ್ಪರ್ಧಾತ್ಮಕ ಪರೀಕ್ಷೆ (ನೇಮಕಾತಿ ಅಕ್ರಮ ತಡೆ) ಸುಗ್ರೀವಾಜ್ಞೆ ಕಾಯ್ದೆಯಾಗಿ ಮಾರ್ಪಟ್ಟಿದೆ. ಈ ಕಾಯ್ದೆಯ ಅನ್ವಯ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಮತ್ತು 10 ಕೋಟಿ ರು.ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ ಈ ಅಕ್ರಮದಿಂದ ಸಂಪಾದನೆ ಮಾಡಿರುವ ಆಸ್ತಿಯನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿದ್ದಕ್ಕೆ ರಾಜ್ಯಪಾಲರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ (Chief Minister Pushkar Singh Dhami) ಧನ್ಯವಾದ ಅರ್ಪಿಸಿದ್ದು, ಈಗ ಕಾಯ್ದೆ ರಾಜ್ಯದಲ್ಲಿ ನಡೆಯುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.
ಪರೀಕ್ಷೆಯಲ್ಲಿ ಕಾಪಿ ಮಾಡಿದವರು 10 ವರ್ಷ ಅನರ್ಹ, ಸಹಾಯ ಮಾಡಿದವರಿಗೆ ಜೀವಾವಧಿ ಶಿಕ್ಷೆ..!
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ; ಮತ್ತೆ ನಾಲ್ವರ ಬಂಧನ ಬಂಧಿತರ ಸಂಖ್ಯೆ 33ಕ್ಕೆ ಏರಿಕೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ