ಅಂತಿಮ ಹಂತದಲ್ಲಿ ಮತ್ತೆ ಎದುರಾದ ವಿಘ್ನ, ಸುರಂಗದ ಕಾರ್ಮಿಕರ ರಕ್ಷಣಾ ಕಾರ್ಯ ಮತ್ತೆ ಸ್ಥಗಿತ!

By Suvarna NewsFirst Published Nov 24, 2023, 9:07 PM IST
Highlights

ಸಿಲ್‌ಕ್ಯಾರಾ ಹೆದ್ದಾರಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆಯಲು ಎಲ್ಲಾ ಸಿದ್ಧತೆ ನಡೆಸಲಾಗಿದೆ. ಆದರೆ ಅಂತಿಮ ಹಂತದಲ್ಲಿ ರಕ್ಷಣಾ ಕಾರ್ಯ ಮತ್ತೆ ಸ್ಥಗಿತಗೊಂಡಿದೆ.
 

ಉತ್ತರಕಾಶಿ(ನ.24) ಸಿಲ್‌ಕ್ಯಾರಾ ಹೆದ್ದಾರಿ ಸುರಂಗ ಕುಸಿತ ಭಾರತದ ತಲೆನೋವು ಹೆಚ್ಚಿಸುತ್ತಿದೆ. ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಕಳೆದ 12 ದಿನದಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಅಂತಿಮ ಹಂತ ತಲುಪಿದೆ. ಇನ್ನೇನು ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಹೊರತೆಗೆಯಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡನೇ ಬಾರಿಗೆ ರಕ್ಷಣಾ ಕಾರ್ಯ ಸ್ಥಗಿತಗೊಂಡಿದೆ. ಈ ಮೂಲಕ ಕಾರ್ಮಿಕರನ್ನು ಹೊರತೆಗೆಯುವ ಕಾರ್ಯ ಮತ್ತೆ ವಿಳಂಬವಾಗಿದೆ.

ಸುರಂಗದೊಳಗೆ ಕೊರೆಯು ಯಂತ್ರಿ ಎರಡನೇ ಬಾರಿಗೆ ಕೆಲಸ ನಿಲ್ಲಿಸಿದೆ. ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ. ಇದರಿಂದ ಮತ್ತೆ ರಕ್ಷಣಾ ಕಾರ್ಯ ಸ್ಥಗಿತಗೊಳಿಸಲಾಗಿದೆ. ಈಗಾಗಲೇ 46.8 ಮೀಟರ್ ದೂರ ಸುರಂಗದೊಳಗೆ ರಂಧ್ರ ಕೊರೆಯಲಾಗಿದೆ. ಇನ್ನು 10 ರಿಂದ 13 ಮೀಟರ್ ರಂಧ್ರ ಕೊರೆಯಲು ಮಾತ್ರ ಬಾಕಿ ಇದೆ. ಆದರೆ ಎರಡನೇ ಬಾರಿಗ ಕಾರ್ಯಾಚರಣೆ ಸ್ಥಗಿತಗೊಳ್ಳುವ ಮೂಲಕ ನಿರಾಸೆಯಾಗಿದೆ.

ಅಪಾಯ ತಂದೊಡ್ಡಿತಾ ದೇವರ ಕೋಪ..? ಕತ್ತಲೆ ಕೂಪದಿಂದ ಪಾರಾಗೋಕೆ ಇನ್ನೆಷ್ಟು ಸಮಯ ಬೇಕು..?

ಕಾರ್ಮಿಕರು 57 ಮೀ. ದೂರದ ಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ.ರಂಧ್ರ ಕೊರೆದು 80 ಸೆಂ.ಮೀ. ಸುತ್ತಳತೆಯ ಪೈಪ್‌ ಹಾಕಲಾಗಿದೆ. ಇದೀಗ ರಂದ್ರ ಕೊರೆಯುವ ಮಶಿನ್ ಸುರಂಗದಿಂದ ಹೊರತೆಗೆದು ತಾಂತ್ರಿಕ ಸಮಸ್ಯೆ ಸರಿಪಡಿಸುವ ಕಾರ್ಯ ನಡೆಯುತ್ತಿದೆ. 

ಈ ನಡುವೆ 21 ರಕ್ಷಣಾ ಸಿಬ್ಬಂದಿಯು ಗ್ಯಾಸ್‌ ಮಾಸ್ಕ್‌ ಧರಿಸಿ ಹೊಸದಾಗಿ ಕೊರೆದು ಹಾಕಲಾಗಿರುವ ರಕ್ಷಣಾ ಪೈಪ್‌ ಪ್ರವೇಶಿಸಿದ್ದಾರೆ. ಇವರು ಸಿಲುಕಿರುವ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕರೆತರುವ ಹೊಣೆ ಹೊತ್ತಿದ್ದಾರೆ. 15 ವೈದ್ಯರು ಹಾಗೂ 30 ಆ್ಯಂಬುಲೆನ್ಸ್‌ಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣೆಗೆ ಒಳಗಾಗುವ ಕಾರ್ಮಿಕರಿಗೆ ಚಿಕಿತ್ಸೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮೀಪದ ಆಸ್ಪತ್ರೆಯಲ್ಲಿ 41 ಬೆಡ್‌ಗಳನ್ನೂ ಸಿದ್ಧಪಡಿಸಲಾಗಿದೆ.

ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ರೋಬೋಟ್‌: ಸುರಂಗದಲ್ಲಿರುವವರಿಗೆ 9 ದಿನ ಬಳಿಕ ಬಿಸಿಯೂಟ

ಇದಲ್ಲದೆ ಪರ್ಯಾಯ ಯೋಜನೆಯಾಗಿ ನಾವು ಸುರಂಗದ ಇನ್ನೊಂದು ಬದಿಯಾದ ಬಾರ್ಕೋಟ್‌ನಿಂದಲೂ ಸುರಂಗ ಕೊರೆಯುವ ಕೆಲಸ ಆರಂಭಿಸಿದ್ದೇವೆ . ಅಲ್ಲಿ ಈಗಾಗಲೇ 8 ಮೀಟರ್‌ ಜಾಗವನ್ನು ಕ್ರಮಿಸಿದ್ದೇವೆ. ಆದರೆ ಈ ಮಾರ್ಗದಲ್ಲಿ ಹೆಚ್ಚಿನ ಜಾಗ ಕ್ರಮಿಸಬೇಕಿರುವ ಕಾರಣ ನಮ್ಮ ಆದ್ಯತೆ ಸಿಲ್‌ಕ್ಯಾರಾ ಮಾರ್ಗವೇ ಆಗಿರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್‌ ಧಾಮಿ ಅವರಿಗೆ ಕರೆ ಮಾಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ.

click me!