ಉತ್ತರಪ್ರದೇಶದಲ್ಲಿ 400ಕ್ಕೂ ಹೆಚ್ಚು ಜನರ ಮತಾಂತರ : 9 ಜನರ ಮೇಲೆ ಕೇಸು

By Kannadaprabha NewsFirst Published Oct 30, 2022, 10:45 AM IST
Highlights

ಉತ್ತರ ಪ್ರದೇಶದ ಮೀರತ್‌ನಲ್ಲಿ 400ಕ್ಕೂ ಹೆಚ್ಚು ಜನರನ್ನು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರ ಮಾಡಲು ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಪೊಲೀಸರು 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ 400ಕ್ಕೂ ಹೆಚ್ಚು ಜನರನ್ನು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರ ಮಾಡಲು ಬಲವಂತ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಪೊಲೀಸರು 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತರು (victims) ಹಿರಿಯ ಪೊಲೀಸ್‌ ಅಧೀಕ್ಷಕರನ್ನು ಭೇಟಿಯಾಗಿ ದೂರು ನೀಡಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ ಮಂಗಟ್‌ಪುರಂನಲ್ಲಿರುವ (Mangatpuram) ಮಾಲಿನ್‌ ಗ್ರಾಮದ ಜನರು ಪೊಲೀಸರಿಗೆ ದೂರು ನೀಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಸಮಯದಲ್ಲಿ ಆಹಾರ ಮತ್ತು ಆರ್ಥಿಕ ನೆರವು ಒದಗಿಸಿದವರು ಆಗಮಿಸಿ ಕ್ರೈಸ್ತ (Christianity) ಧರ್ಮಕ್ಕೆ ಮತಾಂತರವಾಗುವಂತೆ ಬಲವಂತ ಮಾಡಿದ್ದಾರೆ. ಅಲ್ಲದೇ ನಮ್ಮ ಮನೆಗಳಲ್ಲಿದ್ದ ದೇವರ ಮೂರ್ತಿಗಳನ್ನು (idols of God) ಬಿಸಾಡಿದ್ದಾರೆ. ಆಧಾರ್‌ ಕಾರ್ಡ್‌ನಲ್ಲಿ ಹೆಸರುಗಳನ್ನು ಬದಲಾಯಿಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ದೀಪಾವಳಿ ಪೂಜೆಯ ಸಮಯದಲ್ಲಿ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಪುತ್ರಿ (Brahmaputri) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತುಮಕೂರಲ್ಲಿ ಸದ್ದಿಲ್ಲದೇ ನಡೀತಿದೆಯಾ ಮತಾಂತರ ಜಾಲ?

ಮತಾಂತರ, ಒಳನುಸುಳುವಿಕೆಯಿಂದ ಜನಸಂಖ್ಯಾ ಅಸಮಾನತೆ: ಹೊಸಬಾಳೆ

click me!