ಇಂದು ಕಾಶಿಯಲ್ಲಿ ಬೆಳಗ್ಗೆ 11.40ರ ಅಭಿಜಿನ್‌ ಮುಹೂರ್ತದಲ್ಲಿ ಮೋದಿ ನಾಮಪತ್ರ

Published : May 14, 2024, 10:07 AM ISTUpdated : May 14, 2024, 10:09 AM IST
ಇಂದು ಕಾಶಿಯಲ್ಲಿ ಬೆಳಗ್ಗೆ 11.40ರ  ಅಭಿಜಿನ್‌ ಮುಹೂರ್ತದಲ್ಲಿ ಮೋದಿ ನಾಮಪತ್ರ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ ಮೋದಿ ಅವರು ಮೊದಲು ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆದು ನಂತರ 11.40ರ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ ಮೋದಿ ಅವರು ಮೊದಲು ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆದು ನಂತರ 11.40ರ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ದಿನ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಸಿದ್ಧಿ ಯೋಗದ ಜೊತೆಗೆ ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದೆ. ಇದು ಉತ್ತಮ ಮುಹೂರ್ತದ ದಿನ ಎಂದು ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಹೇಳಿದ್ದಾರೆ.

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

ಈ ನಡುವೆ, ಖುದ್ದು ಗಣೇಶ್ವರ ಶಾಸ್ತ್ರಿಗಳು, ಕಾಶಿ ಸಂಗೀತ ಘರಾಣೆಯ ಸೋಮಾ ಘೋಷ್ ಮತ್ತು ಮೋದಿ ಈ ಹಿಂದೆ ವಾರಾಣಸಿಗೆ ಬಂದಾಗ ಚಹಾ ಸೇವಿಸಿದ್ದ ‘ಪಪ್ಪು ಚಾಯ್ ಕಿ ಆಢಿ’ ಎಂಬ ಚಹಾ ಅಂಗಡಿ ಮಾಲೀಕ ವಿಶ್ವನಾಥ್ ಸಿಂಗ್ ಪಪ್ಪು ಅವರು ಮೋದಿ ನಾಮಪತ್ರಕ್ಕೆ ಸೂಚಕರಾಗಬಹುದು ಎಂದು ಮೂಲಗಳು ಹೇಳಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಾಥ್‌ ಸೇರಿ ಹಲವರು ಮೋದಿಗೆ ನಾಮಪತ್ರ ಸಲ್ಲಿಕೆ ವೇಳೆ ಸಾಥ್‌ ನೀಡಲಿದ್ದಾರೆ.  ವಾರಾಣಸಿಯಲ್ಲಿ ಜೂ.1ರಂದು ಕಡೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ಫಲಿತಾಂಶ ಹೊರಬರಲಿದೆ. ಮೋದಿ ಅವರು 2014 ಮತ್ತು 2019ರಲ್ಲಿ 2 ಬಾರಿ ಇಲ್ಲಿಂದ ಗೆದ್ದು 3ನೇ ಅವಧಿಯ ಮೇಲೆ ಕಣ್ಣಿಟ್ಟಿದ್ದಾರೆ, ಇಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರಾಯ್ ಸತತ 3ನೇ ಬಾರಿ ಮೋದಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಚುನಾವಣೆ ಪ್ರಚಾರದ ವೇಳೆ ಚಿತ್ರ ಬಿಡಿಸಿ ಉಡುಗೊರೆ ಕೊಟ್ಟಿದ್ದ ಬಾಗಲಕೋಟೆ ಯುವತಿಗೆ ಪ್ರಧಾನಿ ಮೋದಿ ಪತ್ರ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!